ಬಿಜೆಪಿಯೊಂದಿಗೆ ಕೈ ಜೋಡಿಸಿ ದಾರಿ ತಪ್ಪಿದ ಕುಮಾರಸ್ವಾಮಿ : ಆರ್‌.ರಾಜೇಂದ್ರ

By Kannadaprabha News  |  First Published Apr 15, 2024, 2:23 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಖಂಡನಾರ್ಹ, ಅವರು ಬಿಜೆಪಿ ಜೊತೆ ಕೈ ಜೋಡಿಸಿ ದಾರಿ ತಪ್ಪಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಹೇಳಿದರು.


  ಮಧುಗಿರಿ : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಖಂಡನಾರ್ಹ, ಅವರು ಬಿಜೆಪಿ ಜೊತೆ ಕೈ ಜೋಡಿಸಿ ದಾರಿ ತಪ್ಪಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಹೇಳಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ತುಮಕೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಪಿ.ಮುದ್ದಹನುಮೇಗೌಡರ ಪರ ಗುಬಲಗುಟ್ಟೆ ಶ್ರೀ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಮತಯಾಚಿಸಿ ಮಾತನಾಡುತ್ತಿದ್ದರು.

Tap to resize

Latest Videos

undefined

ಮಧುಗಿರಿ ಕ್ಷೇತ್ರದಲ್ಲಿ ಕಳೆದ ಆಸೆಂಬ್ಲಿಯಲ್ಲಿ ನನ್ನ ತಂದೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರಿಗೆ ಅತ್ಯಧಿಕ ಮತ ನೀಡಿ ಆಯ್ಕೆ ಮಾಡಿದಂತೆ ಎಸ್‌.ಪಿ.ಮುದ್ದಹನುಮೇಗೌಡರನ್ನು ಆಯ್ಕೆ ಮಾಡಿ ಕೊಡಬೇಕು. ಈಗಾಗಲೇ 3 ಸಾವಿರ ಮನೆಗಳು ಮಂಜೂರಾಗಿದ್ದು, 8 ಸಾವಿರ ನಿವೇಶನ ಹಂಚಲು ಸ್ಥಳ ಗುರುತಿಸಿದ್ದು, ಮುಂಬರುವ ದಿನಗಳಲ್ಲಿ ಆರ್ಹರಿಗೆ ವಿತರಿಸಲಾಗುವುದು ಎಂದರು.

ಅಭ್ಯರ್ಥಿ ಎಸ್‌.ಪಿ.ಮುದ್ದಹನುಮೇಗೌಡ ಮಾತನಾಡಿ, ನಾನು ಸಂಸದನಾಗಿ ಆಯ್ಕೆಯಾದರೆ ತುಮಕೂರು-ರಾಯದುರ್ಗ ರಲ್ವೇ ಕಾಮಗಾರಿಗೆ ಚಾಲನೆ ನೀಡುವ ಜೊತೆಗೆ ರೈತರ,ಮಹಿಳೆಯರ ಹಾಗೂ ಕಾರ್ಮಿಕರ ಧ್ವನಿಯಾಗಿ ಕೆಲಸ ಮಾಡುವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ಕುಮಾರಸ್ವಾಮಿಯವರಿಗೆ ಶೋಭೆ ತರುವುದಿಲ್ಲ. ಗ್ಯಾರಂಟಿಗಳಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಜನಪರ ಯೋಜನೆಗಳ ಬಗ್ಗೆ ಟೀಕಿಸಿ, ರಾಜಕೀಯ ಲಾಭ ಪಡೆಯಲು ಸಾಧ್ಯವಿಲ್ಲ. ಇಂತಹ ಹೇಳಿಕೆ ನೀಡುವ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ನಾಯಕರಿಗೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ರಾಜ್ಯ ಸಹಕಾರ ಮಹಾ ಮಂಡಲದ ಮಾಜಿ ಅಧ್ಯಕ್ಷ ಎನ್‌.ಗಂಗಣ್ಣ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಜಿ.ಜೆ.ರಾಜಣ್ಣ, ನಿದೇರ್ಶದ ಬಿ.ನಾಗೇಶ್‌ಬಾಬು, ಜಿ.ಪಂ.ಮಾಜಿ ಸದಸ್ಯ ಹೂವಿನ ಚೌಡಪ್ಪ, ಎಂ.ಎಚ್‌.ನಾರಾಯಣಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗೋಪಾಲಯ್ಯ, ಆದಿನಾರಾಯಣರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಆರ್‌.ರಮೇಶ್‌, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಪಾಂಡುರಂಗಯ್ಯ, ದೀಪು,ರಾಮಣ್ಣ ಇತರರಿದ್ದರು.

click me!