ಜ.16ರಂದು ಕುಮಾರಸ್ವಾಮಿ 'ರೈತ ಸಂಕ್ರಾಂತಿ': ರಾಜ್ಯದ ರೈತರ ಜತೆ ಅನ್‌ಲೈನ್ ಸಂವಾದ

By Govindaraj S  |  First Published Jan 11, 2023, 10:13 PM IST

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೇ ತಿಂಗಳ 16ರಂದು ಕೃಷಿ ಸಮಸ್ಯೆಗಳ ಬಗ್ಗೆ ಅನ್ನದಾತರ ಜತೆ ಮುಕ್ತವಾಗಿ ಚರ್ಚೆ ನಡೆಸಲು ' ರೈತ ಸಂಕ್ರಾಂತಿ ' ಎಂಬ ಅನ್‌ಲೈನ್ ಸಂವಾದ ಹಮ್ಮಿಕೊಂಡಿದ್ದಾರೆ.


ಕಲಬುರಗಿ (ಜ.11): ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇದೇ ತಿಂಗಳ 16ರಂದು ಕೃಷಿ ಸಮಸ್ಯೆಗಳ ಬಗ್ಗೆ ಅನ್ನದಾತರ ಜತೆ ಮುಕ್ತವಾಗಿ ಚರ್ಚೆ ನಡೆಸಲು ' ರೈತ ಸಂಕ್ರಾಂತಿ ' ಎಂಬ ಅನ್‌ಲೈನ್ ಸಂವಾದ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಕಲಬುರಗಿ ಜಿಲ್ಲೆಯ ಸೇಡಂ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸುತ್ತಿರುವ ಕುಮಾರಸ್ವಾಮಿ, ಸುಲೇಪೇಟ ಸಮೀಪದ ಜಮೀನೊಂದರ ಪಕ್ಕದ ಕಟ್ಟೆಯ ಮೇಲೆ ಮಾಧ್ಯಮಗಳ ಜತೆ ಮಾತನಾಡುತ್ತಾ ಈ ವಿಷಯವನ್ನು ತಿಳಿಸಿದರು. ಮಹತ್ವದ ಈ ಸಂವಾದದಲ್ಲಿ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಭಾಗಿಯಾಗಲಿದ್ದಾರೆ. 

ಕೃಷಿ ವಲಯದ ಪರಿಪೂರ್ಣ ಪುನಚ್ಚೇತನಕ್ಕೆ ನಮಗೆ ಮಾಜಿ ಪ್ರಧಾನಿ ಅವರ ಮಾರ್ಗದರ್ಶನ ಇರುತ್ತದೆ ಎಂದು ಅವರು ತಿಳಿಸಿದರು. ಕಳೆದ 40ಕ್ಕೂ ಹೆಚ್ಚು ದಿನಗಳಿಂದ ನಾನು ರಾಜ್ಯದ ಉದ್ದಗಲಕ್ಕೂ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದೇನೆ. ನಾನು ಮುಖ್ಯಮಂತ್ರಿ ಆಗಿದ್ದಾಗ 2006 ಮತ್ತು 2018ರಲ್ಲಿ ಎರಡು ಬಾರಿ ಸಾಲ ಮನ್ನಾ ಮಾಡಿದರೂ ರೈತರ ಸಮಸ್ಯೆಗಳು ನಿವಾರಣೆ ಆಗಿಲ್ಲ. ಕೆಲ ದಿನಗಳಿಂದ ಈಚೆಗೆ ಮತ್ತೆ ರೈತರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದು ನನಗೆ ಅತೀವ ನೋವು ಉಂಟು ಮಾಡಿದೆ ಎಂದರು. 

Tap to resize

Latest Videos

undefined

ಲೂಟಿ ಗ್ಯಾಂಗ್‌ ಓಡಿಸಲು ಜೆಡಿಎಸ್‌ಗೆ ಅಧಿಕಾರ ಕೊಡಿ: ಎಚ್‌.ಡಿ.ಕುಮಾರಸ್ವಾಮಿ

ರೈತರು ಶಾಶ್ವತವಾಗಿ ಸಾಲಗಾರರಾಗದಂತೆ ಹಾಗೂ ಅವರಿಗೆ ಆರ್ಥಿಕ ಚೈತನ್ಯ ನೀಡುವ ಉದ್ದೇಶದಿಂದ ರೂಪಿಸಿರುವ ರೈತ ಚೈತನ್ಯ ಕಾರ್ಯಕ್ರಮದ ಬಗ್ಗೆ ಅನ್ನದಾತರಿಗೆ ಮನವರಿಕೆ ಮಾಡಿಕೊಡುವುದು ಹಾಗೂ ಕೃಷಿ ಸಮಸ್ಯೆಗಳ ಬಗ್ಗೆ ಇನ್ನಷ್ಟು ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಾನು ರೈತರ ಜತೆ ಸಂವಾದ ನಡೆಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು. ಬಿಡದಿಯ ನನ್ನ ತೋಟದಲ್ಲಿ ರೈತ ಸಂಕ್ರಾಂತಿ ಸಂವಾದ ಹಮ್ಮಿಕೊಳ್ಳಲಾಗಿದ್ದು, ಸಂಜೆ ಬೆಳಿಗ್ಗೆ 11 ರಿಂದ 4  ಗಂಟೆವರೆಗೂ ರೈತರ ಜತೆ ಸಂವಾದ ನಡೆಸುತ್ತೇನೆ. 

ನೆಮ್ಮದಿಯ ಬದುಕಿಗೆ ಪಂಚರತ್ನ ಯೋಜನೆ ಜಾರಿ: ಎಚ್‌.ಡಿ.ಕುಮಾರಸ್ವಾಮಿ

ಸುಮಾರು 50ಕ್ಕೂ ಹೆಚ್ಚು ವಿಧಾನಸಭೆ ಕ್ಷೇತ್ರಗಳ ರೈತರ ಜತೆ ನಾನು ಅನ್‌ಲೈನ್ ವೇದಿಕೆ ಮೂಲಕ ನೇರ ಸಂವಾದ ನಡೆಸುತ್ತೇನೆ. ಯಾವುದೇ ಭಾಗದ ರೈತರು ಈ ಸಂವಾದದಲ್ಲಿ ಭಾಗಿಯಾಗಬಹುದು ಹಾಗೂ ಸಮಸ್ಯೆಗಳು, ಪರಿಹಾರಗಳನ್ನು ತಿಳಿಸಬಹುದು ಎಂದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಸದಸ್ಯ ರಮೇಶ್ ಗೌಡ, ಸೇಡಂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಾಲರಾಜ್ ಗುತ್ತೇದಾರ್, ಜಿಲ್ಲಾಧ್ಯಕ್ಷ ಸುರೇಶ್ ಮಾಗಾವಂಕರ್ ಇತರರು ಹಾಜರಿದ್ದರು.

click me!