ಮಂಗಳೂರು ಬಾಂಬ್: 'ಕುಮಾರಸ್ವಾಮಿ ಮಾಹಿತಿ ತಿಳಿದು ಮಾತಾಡಲಿ'..!

By Suvarna NewsFirst Published Jan 23, 2020, 2:07 PM IST
Highlights

ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರು ಮಾಹಿತಿ ತಿಳಿದುಕೊಂಡು ಮಾತನಾಡಲಿ ಎಂದು ಡಿಸಿಎಂ ಅಶ್ವತ್ಥ್‌ ನಾರಾಯಣ್ ಹೇಳಿದ್ದಾರೆ. ಮಂಗಳೂರು ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಅವರು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮಂಡ್ಯ(ಜ.23): ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಅವರು ಮಾಹಿತಿ ತಿಳಿದುಕೊಂಡು ಮಾತನಾಡಲಿ ಎಂದು ಡಿಸಿಎಂ ಅಶ್ವತ್ಥ್‌ ನಾರಾಯಣ್ ಹೇಳಿದ್ದಾರೆ. ಮಂಗಳೂರು ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ಅವರು ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರು ಬಾಂಬ್ ವಿಚಾರದಲ್ಲಿ ಕುಮಾರಸ್ವಾಮಿ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾಲಿಗೆ ಇದೆ ಎಂದು ಏನು ಬೇಕಾದರೂ ಮಾತನಾಡಬಹುದು. ಆದರೆ ಅವರು ಆಡುವ ಮಾತಿಗೆ ಮಾನ್ಯತೆ ಇರಬೇಕು. ಜವಬ್ದಾರಿಯುತ ಸ್ಥಾನದಲ್ಲಿರುವವರು ಏನು ಬೇಕಾದರೂ ಮಾತನಾಡಬಹುದು ಅಂದುಕೊಂಡಿದ್ದಾರೆ ಎಂದು ಮೈಸೂರಿನಲ್ಲಿ ಹೆಚ್‌ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಕನಕಪುರಕ್ಕೆ ಸದ್ಯಕ್ಕೆ ಮೆಡಿಕಲ್ ಕಾಲೇಜ್‌ ಇಲ್ಲ: ಡಿಸಿಎಂ

ಆಡುವ ಮಾತುಗಳಲ್ಲಿ ಅರ್ಥ ಇರಬೇಕು. ಬಾಂಬ್ ಇಟ್ಟಿದ್ದವನು ಹಿಂದೆ ಹುಸಿ ಬಾಂಬ್ ಕರೆ ಮಾಡಿದ್ದ. ಈ ಬಾರಿ ತಾನೆ ಬಾಂಬ್ ಇಟ್ಟಿದ್ದೀನಿ ಅಂತ ಒಪ್ಪಿಕೊಂಡಿದ್ದಾನೆ. ಆ ಬಗ್ಗೆ ತನಿಖೆ ನಡೆಯುತ್ತಿದ್ದೆ. ಮಾಹಿತಿ ತಿಳಿದುಕೊಂಡು ಮಾತನಾಡಲಿ. ಇನ್ನು ಮೇಲಾದರೂ ಜವಬ್ದಾರಿಯಿಂದ ಹೇಳಿಕೆ ಕೊಡಲಿ ಎಂದು ಹೇಳಿದ್ದಾರೆ.

ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಮೇಲೆ ನಡೆದ ಹತ್ಯೆ ಯತ್ನ ಘಟನೆ ಬಗ್ಗೆ ಮಾತನಾಡಿ, ಸಮಾಜಘಾತುಕ ಸಂಘಟನೆಗಳನ್ನ ಬ್ಯಾನ್ ಮಾಡುತ್ತೇವೆ. ಈಗಾಗಲೇ ನಾವು ಕೇಂದ್ರಕ್ಕೆ ಶಿಫಾರಸು ಕಳುಹಿಸಿದ್ದೇವೆ. ಇಂತಹ ಸಂಘಟನೆಗಳನ್ನು ಬೆಳೆಯಲು ಬಿಟ್ಟರೆ ತೊಂದರೆಯಾಗುತ್ತದೆ. ಇಂತಹ ಸಂಘಟನೆಗಳನ್ನ ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕನಕಪುರಕ್ಕೆ ಸದ್ಯಕ್ಕೆ ಮೆಡಿಕಲ್ ಕಾಲೇಜ್‌ ಇಲ್ಲ: ಡಿಸಿಎಂ

ರಾಜ್ಯದ ಇಂದಿನ ಪರಿಸ್ಥಿತಿಗೆ ಹಿಂದಿನ ಸರ್ಕಾರವೆ ಕಾರಣ. ಸಮಾಜಘಾತುಕ ಶಕ್ತಿಗೆ ಕಡಿವಾಣ ಹಾಕೋದು ಬಿಟ್ಟು ಪ್ರೋತ್ಸಾಹ ಕೊಟ್ಟಿದ್ದಾರೆ. ಅವರ ಮೇಲಿನ ಕೇಸ್‌ಗಳನ್ನ ವಾಪಸ್ ತೆಗೆದುಕೊಂಡಿದ್ದಾರೆ. ಅದಕ್ಕೆ ಅವರೆಲ್ಲ ಕಾನೂನು ಮೀರಿ ದೊಡ್ಡ ಶಕ್ತಿಯಾಗಿ ನಿಂತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಇಂದು ಈ ಪರಿಸ್ಥಿತಿ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಎಲ್ಲವನ್ನು ನಿಯಂತ್ರಣ ಮಾಡುವ ಪ್ರಯತ್ನ ಮಾಡಿದೆ ಎಂದು ಹೇಳಿದ್ದಾರೆ.

ಅದೇಷ್ಟೋ ಘಟನೆಗಳು ನಡೆಯುವ ಮುನ್ನವೆ ತಡೆಹಿಡಿಯಲಾಗಿದೆ. ಬಾಂಬ್ ತಯಾರಿಕೆಯ ಕೆಲ ವಸ್ತುಗಳು ಕಾರ್ಖಾನೆ ಉಪಯೋಗಕ್ಕೆ ಸಿಗುತ್ತೆ. ಅವುಗಳನ್ನ ಬಳಸಿಕೊಂಡು ಈ ಕೃತ್ಯ ಎಸಗುತ್ತಿದ್ದಾರೆ. ಇಂತಹ ವಸ್ತುಗಳನ್ನ ಅವರ ಕೈಗೆ ಸಿಗದಂತೆ ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

click me!