ಉತ್ತರ ಕನ್ನಡ: ಕುಮಟಾ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಇನ್ನೂ ಪರಿಶೀಲನೆಯಲ್ಲಿ!

By Kannadaprabha News  |  First Published Jul 7, 2023, 6:56 AM IST

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೂ ಮುಂದುವರಿದಿದೆ.


ವಿಧಾನಸಭೆ (ಜು.7) : ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೂ ಮುಂದುವರಿದಿದೆ.

ಆಸ್ಪತ್ರೆ ನಿರ್ಮಾಣ ಸಂಬಂಧ ಈಗಾಗಲೇ ಗುರುತಿಸಿರುವ ಸ್ಥಳವು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರವಾಗಿಲ್ಲ. ಇಲಾಖೆಗೆ ಹಸ್ತಾಂತರ ಬಳಿಕ ಅನುದಾನ ಲಭ್ಯತೆಗನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

Latest Videos

undefined

ಉತ್ತರಕನ್ನಡ‌: ಹೊನ್ನಾವರದಲ್ಲಿ ನಿವೇದಿತ್ ಪರವಾಗಿ ಡಿಕೆಶಿ ಭರ್ಜರಿ ಪ್ರಚಾರ

ಗುರುವಾರ ಬಿಜೆಪಿ ಸದಸ್ಯ ದಿನಕರ್‌ ಕೇಶವ ಶೆಟ್ಟಿಪ್ರಶ್ನೆಗೆ ಉತ್ತರಿಸಿದ ಅವರು, ಉತ್ತರ ಕನ್ನಡ ಜಿಲೆಯ ಕುಮಟಾ ತಾಲೂಕಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾವನೆ ಇದೆ. ಕೃಷಿ ಇಲಾಖೆಗೆ ಮಂಜೂರಾಗಿರುವ 11.28 ಎಕರೆ ಮತ್ತು ಏಕಲವ್ಯ ಶಾಲೆಗೆ ಮಂಜುರಾಗಿರುವ 17.14 ಎಕರೆ ಪೈಕಿ 15.35 ಎಕರೆ ಸೇರಿ ಒಟ್ಟು 27.16 ಎಕರೆ ಜಮೀನನನ್ನು ಗುರುತಿಸಲಾಗಿದೆ. ಜಮೀನನ್ನು ಆಸ್ಪತ್ರೆ ನಿರ್ಮಾಣಕ್ಕಾಗಿ ಕಾಯ್ದಿರಿಸುವುದು ಸೂಕ್ತ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಅಭಿಪ್ರಾಯ ವ್ಯಕ್ತಪಡಿಸಿ, ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಪ್ರಸ್ತಾವನೆಯು ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.

ಆಸ್ಪತ್ರೆ ನಿರ್ಮಾಣಕ್ಕೆ ಗುರುತಿಸಲಾಗಿರುವ ಜಮೀನುಗಳು ಕೃಷಿ ಮತ್ತು ಪರಿಶಿಷ್ಟವರ್ಗಗಳ ಇಲಾಖೆಗಳಿಗೆ ಹಂಚಿಕೆ ಮಾಡಿರುವ ಕಾರಣ ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರವಾಗಿಲ್ಲ. ಜಮೀನು ಇಲಾಖೆಗೆ ಹಸ್ತಾಂತರವಾದ ಬಳಿಕ ಅನುದಾನ ಬಿಡುಗಡೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಿಯಮಾನುಸಾರ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲು ಕ್ರಮ ವಹಿಸಲಾಗುವುದು ಎಂದರು.

ಯುವ ನಿಧಿ ಯೋಜನೆಗೆ ಬಜೆಟ್‌ನಲ್ಲಿ 2500 ಕೋಟಿ ಬೇಕು: ಸಚಿವ ಶರಣ ಪ್ರಕಾಶ್‌ ಪಾಟೀಲ್‌

ಈ ವೇಳೆ ದಿನಕರ್‌ ಶೆಟ್ಟಿಅವರು, ಜಮೀನು ಒದಗಿಸುವ ಹೊಣೆಯನ್ನು ತೆಗೆದುಕೊಳ್ಳುತ್ತೇನೆ. ಆಸ್ಪತ್ರೆ ನಿರ್ಮಾಣ ಸಂಬಂಧ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

click me!