ಜುಲೈ ಮಾಸಾಂತ್ಯ ಕುವೆಂಪು ವಿವಿ ಘಟಿಕೋತ್ಸವ

Kannadaprabha News   | Asianet News
Published : Jul 11, 2020, 09:38 AM ISTUpdated : Jul 11, 2020, 09:40 AM IST
ಜುಲೈ ಮಾಸಾಂತ್ಯ ಕುವೆಂಪು ವಿವಿ ಘಟಿಕೋತ್ಸವ

ಸಾರಾಂಶ

ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ  ನಡೆಯಬೇಕಿದ್ದ ಘಟಿಕೋತ್ಸವ, ಕೊರೋನಾ ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜ್ಜುಭಾಯಿ ವಾಲಾ ಅವರು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ. 

ಶಿವಮೊಗ್ಗ(ಜು.11): ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾ​ಧಿಕಾರಿಗಳು ಅನುಮತಿಸಿದಲ್ಲಿ ಜುಲೈ 28 ಅಥವಾ 29ರಂದು ಆಂತರಿಕವಾಗಿ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್‌ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ತಿಳಿಸಿದ್ದಾರೆ.

ಜುಲೈ 9ರ ನಡೆದ ಸಿಂಡಿಕೇಟ್‌ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ  ನಡೆಯಬೇಕಿದ್ದ ಘಟಿಕೋತ್ಸವ, ಕೊರೋನಾ ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜ್ಜುಭಾಯಿ ವಾಲಾ ಅವರು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿಂಗಳ ಅಂತ್ಯದ ವೇಳೆಗೆ ಘಟಿಕೋತ್ಸವ ಆಯೋಜಿಸಲು ಸಿಂಡಿಕೇಟ್‌ ಸದಸ್ಯರು ಸಹಮತ ವ್ಯಕ್ತಪಡಿಸಿದ್ದಾರೆ. ಅನುಮತಿಗಾಗಿ ಜಿಲ್ಲಾ​ಧಿಕಾರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ವಿವರಿಸಿದರು.

ಆಂತರಿಕ ಘಟಿಕೋತ್ಸವ

ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾ​ಧಿಕಾರಿಗಳು ಅನುಮತಿಸಿದಲ್ಲಿ ಈ ಬಾರಿಯ ಘಟಿಕೋತ್ಸವವನ್ನು ಇನ್‌ ಹೌಸ್‌ ಮಾದರಿಯಲ್ಲಿ (ಆಂತರಿಕವಾಗಿ) ಆಯೋಜಿಸಲಾಗುವುದು. ಸುಮಾರು ಒಂದು ಸಾವಿರ ಸಭಿಕರು ಭಾಗವಹಿಸಬಹುದಾದ ವಿಶ್ವವಿದ್ಯಾಲಯದ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ದೈಹಿಕ ಅಂತರ ಕಾಯ್ದುಕೊಂಡು ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಅನ್ವಯ ಘಟಿಕೋತ್ಸವ ನಡೆಸಲಾಗುವುದು.

ಸಾಗರದಲ್ಲಿ ಜುಲೈ 16ರ ವರೆಗೆ ಸ್ವಯಂ ಪ್ರೇರಿತ ಬಂದ್‌

ಶ್ರೇಯಾಂಕ ವಿಜೇತರು, ಪಿಎಚ್‌ಡಿ ಪದವೀಧರರು, ಗೌರವ ಡಾಕ್ಟರೇಟ್‌ ಪಡೆದವರು, ಸಿಂಡಿಕೇಟ್‌ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿವಿ ಸಿಬ್ಬಂದಿ ಒಳಗೊಂಡಂತೆ ಸುಮಾರು 500 ಮಂದಿ ಮಾತ್ರ ಭಾಗವಹಿಸಬಹುದಾಗಿದ್ದು, ಪೋಷಕರು ಮತ್ತು ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ತಿಳಿಸಿದರು.

ಜೇಷ್ಠತಾ ಪಟ್ಟಿಗೆ ಅನುಮೋದನೆ:

ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಜೇಷ್ಠತೆಗೆ ಸಂಬಂಧಿ​ಸಿದಂತೆ, ಜನವರಿ 20, 2020ರಂದು ಅಂತರ್ಜಾಲದಲ್ಲಿ ಪ್ರಕಟಿಸಿದ ಜೇಷ್ಠತಾ ಪಟ್ಟಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜೊತೆಗೆ ಇದಕ್ಕೆ ಸಂಬಂ​ಧಿಸಿದ ಬಡ್ತಿ ಮತ್ತು ವೇತನ ಸವಲತ್ತುಗಳನ್ನು ಸಹ ಅತಿ ಜರೂರೆಂದು ಪರಿಗಣಿಸಿ ಕೂಡಲೇ ಅರ್ಹ ಸಿಬ್ಬಂದಿಗೆ ಒದಗಿಸಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು.

ಕುಲಸಚಿವ ಪ್ರೊ.ಎಸ್‌ ಎಸ್‌ ಪಾಟೀಲ್‌, ಪರೀಕ್ಷಾಂಗ ಕುಲಸಚಿವ ಪ್ರೊ. ಎಂ ವೆಂಕಟೇಶ್ವರಲು, ಸಿಂಡಿಕೇಟ್‌ ಸದಸ್ಯ ಧರ್ಮಪ್ರಸಾದ್‌, ಬಳ್ಳೇಕೆರೆ ಸಂತೋಷ್‌, ಎಚ್‌.ಬಿ. ರಮೇಶ್‌ ಬಾಬು, ರಾಮಲಿಂಗಪ್ಪ, ಎಸ್‌.ಆರ್‌. ನಾಗರಾಜ್‌, ಕಿರಣ್‌ ದೇಸಾಯಿ ಇತರರು ಇದ್ದರು.
 

PREV
click me!

Recommended Stories

'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ