ಜಮಖಂಡಿ: ಏಕಾಏಕಿ ಕುಸಿದ ಗುಡ್ಡದ ಮಣ್ಣು , ಓರ್ವ ಕಾರ್ಮಿಕನ ದುರ್ಮರಣ

By Suvarna News  |  First Published Mar 12, 2020, 1:19 PM IST

ಗುಡ್ಡದ ಮಣ್ಣು ಕುಸಿದು ಕಾರ್ಮಿಕ ಸಾವು| ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಮಧುರಖಂಡಿ ಗ್ರಾಮ| ಘಟನೆಯಲ್ಲಿ ಇಬ್ಬರಿಗೆ ಗಾಯ| ಏಕಾಏಕಿ ಕುಸಿದ ಗುಡ್ಡದ ಮಣ್ಣು| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು| 


ಬಾಗಲಕೋಟೆ(ಮಾ.12): ಗುಡ್ಡದ ಮಣ್ಣು ಕುಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದ ಹೊರವಲಯದಲ್ಲಿ ಇಂದು(ಗುರುವಾರ) ನಡೆದಿದೆ. ಚೇತನ ಪೂಜಾರಿ (22) ಮೃತ ದುರ್ದೈವಿಯಾಗಿದ್ದಾನೆ.

ಎಂದಿನಂತೆ ಕಾರ್ಮಿಕರು ಇಂದು ಬೆಳಿಗ್ಗೆ ಕೆಲಸಕ್ಕೆಂದು ತೆರಳಿದ್ದರು. ಕೆಲಸದ ವೇಳೆ ಏಕಾಏಕಿ ಮಣ್ಣು ಕುಸಿದು ಮಣ್ಣಿನಡಿ ಸಿಲುಕಿ ಚೇತನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೃತ ಚೇತನ ಮಧುರಖಂಡಿ ಗ್ರಾಮದ ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದ್ದಾರೆ. 
 

click me!