ಹೆಚ್‌ಡಿಕೆ ವಿಚಾರದಲ್ಲಿ ಶಿಷ್ಟಾಚಾರ ಲೋಪ; KRIDL ಕಾರ್ಯಪಾಲಕ ಎಂಜಿನಿಯರ್ ಅಮಾನತ್ತು

By Ravi Janekal  |  First Published Dec 13, 2022, 2:28 AM IST

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ (KRIDL) ವತಿಯಿಂದ ಹಮ್ಮಿಕೊಂಡಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿಷಯದಲ್ಲಿ ಶಿಷ್ಟಾಚಾರ ಲೋಪ ಎಸಗಿದ ಅಧಿಕಾರಿ ವಿರುದ್ಧ ರಾಜ್ಯ ಬಿಜೆಪಿ ಸರ್ಕಾರ ಕೊನೆಗೂ ಶಿಸ್ತು ಕ್ರಮ ಕೈಗೊಂಡಿದೆ.


ರಾಮನಗರ (ಡಿ.13) : ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ (KRIDL) ವತಿಯಿಂದ ಹಮ್ಮಿಕೊಂಡಿದ್ದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿಷಯದಲ್ಲಿ ಶಿಷ್ಟಾಚಾರ ಲೋಪ ಎಸಗಿದ ಅಧಿಕಾರಿ ವಿರುದ್ಧ ರಾಜ್ಯ ಬಿಜೆಪಿ ಸರ್ಕಾರ ಕೊನೆಗೂ ಶಿಸ್ತು ಕ್ರಮ ಕೈಗೊಂಡಿದೆ.

ಮಾಜಿ ಮುಖ್ಯಮಂತ್ರಿಗಳ ವಿಷಯದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಕಾರಣಕ್ಕೆ ರಾಮನಗರ ವಿಭಾಗದ ಪ್ರಭಾರಿ ಕಾರ್ಯಪಾಲಕ ಎಂಜಿನಿಯರ್ ವಿ.ಶ್ರೀಧರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಇಂದು ಆದೇಶ ಹೊರಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಜೆ.ಹಿರೇಮಠ್ ಅವರು, ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ.

Tap to resize

Latest Videos

 

ಮಳೆ: ಜೆಡಿಎಸ್‌ ಪಂಚರತ್ನ ಯಾತ್ರೆ 4 ದಿನ ಮುಂದೂಡಿಕೆ, ಕುಮಾರಸ್ವಾಮಿ

2022 ಅಕ್ಟೋಬರ್ 1ರಂದು ಬಿಜೆಪಿ ನಾಯಕರ ಚಿತಾವಣೆಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಕ್ಷೇತ್ರದ ಶಾಸಕರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡದೆ ಹಾಗೂ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ ವತಿಯಿಂದ ಕೈಗೆತ್ತಿಕೊಳ್ಳಲಾಗಿದ್ದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಪೂಜೆ ಮಾಡಲಾಗಿತ್ತು.

ಅಲ್ಲದೆ, ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ತಮ್ಮ ಹಿಂಬಾಲಕರನ್ನು ಇಟ್ಟುಕೊಂಡು ಅಧಿಕಾರಿಗಳ ಬೆಂಬಲದೊಂದಿಗೆ ಕಾಮಗಾರಿಗಳಿಗೆ ಸಾವಿರಾರು ಪೊಲೀಸರ ರಕ್ಷಣೆಯೊಂದಿಗೆ ಪೂಜೆ ಮಾಡಲು ಹೊರಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಹಕ್ಕು ಚ್ಯುತಿ ಆಗಿದೆ ಎಂದು ಸ್ಪೀಕರ್ ಅವರಿಗೆ ದೂರು ನೀಡಿದ್ದರು. ಅಲ್ಲದೆ ಜೆಡಿಎಸ್ ಪಕ್ಷವು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.

 

ರೈತರ ಸಮಸ್ಯೆಗೆ ಬಿಜೆಪಿ ಸರ್ಕಾರ ಸ್ಪಂದಿಸುತಿಲ್ಲ: ಕುಮಾರಸ್ವಾಮಿ

click me!