ಮುಂಗಾರುಪೂರ್ವ ಮಳೆ ಕೊರತೆ; 79 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ!

By Kannadaprabha NewsFirst Published May 30, 2023, 12:38 AM IST
Highlights

: ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ79.72 ಅಡಿಗೆ ಕುಸಿದಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಕಳೆದ 5 ವರ್ಷಗಳಿಂದ ಅಣೆಕಟ್ಟೆಯ ನೀರಿನ ಸಂಗ್ರಹದಲ್ಲಿ ಸುಧಾರಣೆ ಕಂಡು ಬಂದಿತ್ತು. ಆದರೆ, ಈ ವರ್ಷ ಅತಿ ಕಡಿಮೆ ಪ್ರಮಾಣದ ನೀರು ಸಂಗ್ರಹವಾಗಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಭೀತಿ ಎದುರಾಗಿದೆ.

ವಿಶೇಷ ವರದಿ

ಮಂಡ್ಯ (ಮೇ.30) : ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಕೃಷ್ಣರಾಜಸಾಗರ ಜಲಾಶಯದ ನೀರಿನ ಮಟ್ಟ79.72 ಅಡಿಗೆ ಕುಸಿದಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗುವ ಆತಂಕ ಸೃಷ್ಟಿಯಾಗಿದೆ. ಕಳೆದ 5 ವರ್ಷಗಳಿಂದ ಅಣೆಕಟ್ಟೆಯ ನೀರಿನ ಸಂಗ್ರಹದಲ್ಲಿ ಸುಧಾರಣೆ ಕಂಡು ಬಂದಿತ್ತು. ಆದರೆ, ಈ ವರ್ಷ ಅತಿ ಕಡಿಮೆ ಪ್ರಮಾಣದ ನೀರು ಸಂಗ್ರಹವಾಗಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಭೀತಿ ಎದುರಾಗಿದೆ.

ಪ್ರಸ್ತುತ ಜಲಾಶಯಕ್ಕೆ 344 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಯಿಂದ 2991 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ನದಿಗೆ 280 ಕ್ಯುಸೆಕ್‌, ವಿಶ್ವೇಶ್ವರಯ್ಯ ನಾಲೆಗೆ 2503 ಕ್ಯುಸೆಕ್‌, ಆರ್‌ಬಿಎಲ್‌ಎಲ್‌ ನಾಲೆಗೆ 100 ಕ್ಯುಸೆಕ್‌, ಎಲ್‌ಬಿಎಲ್‌ಎಲ್‌ ನಾಲೆಗೆ 58 ಕ್ಯುಸೆಕ್‌ ನೀರನ್ನು ಹರಿಸಲಾಗುತ್ತಿದೆ. ಅಣೆಕಟ್ಟೆಯಲ್ಲಿ ಕೇವಲ 10.663 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಾಗಿದೆ.

ಕಳೆದ ವರ್ಷ ಇದೇ ದಿನ ಅಣೆಕಟ್ಟೆಯಲ್ಲಿ 105.12 ಅಡಿ ನೀರು ಸಂಗ್ರಹವಾಗಿತ್ತು. ಅಂದು ಜಲಾಶಯಕ್ಕೆ 3361 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, 3142 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿತ್ತು. ಅಂದು ಜಲಾಶಯದಲ್ಲಿ 27.095 ಟಿಎಂಸಿ ಅಡಿಯಷ್ಟುನೀರು ಸಂಗ್ರಹವಾಗಿತ್ತು. ಕಳೆದ ವರ್ಷ ಮುಂಗಾರು ಪೂರ್ವ ಮಳೆ ವ್ಯಾಪಕವಾಗಿ ಸುರಿದ ಪರಿಣಾಮ ಬೇಸಿಗೆಯಲ್ಲೇ ಕೆಆರ್‌ಎಸ್‌ಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿ ಜಲಾಶಯದಲ್ಲಿ ಸುಮಾರು 5 ಅಡಿಗಳಷ್ಟುನೀರು ಏರಿಕೆಯಾಗಿತ್ತು.

ಬರೀ 1.5 ಲಕ್ಷ ರೂಪಾಯಿ ಮೊಬೈಲ್‌ಗಾಗಿ ಡ್ಯಾಮ್‌ನ 21 ಲಕ್ಷ ಲೀಟರ್‌ ನೀರು ಖಾಲಿ ಮಾಡಿಸಿದ ಅಧಿಕಾರಿ!

ಮುಂಗಾರು ಪೂರ್ವ ಮಳೆ ಕೊರತೆ:

ಮುಂಗಾರು ಪೂರ್ವ ಮಳೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಬಿದ್ದಿಲ್ಲ. ಇದರ ನಡುವೆಯೂ ಕೆಆರ್‌ಎಸ್‌ನಲ್ಲಿದ್ದ ನೀರನ್ನು ಬೇಸಿಗೆ ಬೆಳೆಗಳಿಗೆ ಹರಿಸಲಾಯಿತು. ಮುಂಗಾರು ಪೂರ್ವ ಮಳೆಯ ಕೊರತೆಯಿಂದ ಜಲಾಶಯದ ಸುತ್ತಮುತ್ತಲ ಕೆರೆ-ಕಟ್ಟೆಗಳಲ್ಲಿ ಅಲ್ಪಸ್ವಲ್ಪ ನೀರು ಮಾತ್ರ ಸಂಗ್ರಹವಾಗಿದೆ. ಮುಂಗಾರು ಪೂರ್ವ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿದಿದ್ದರೆ ರೈತರು ಭೂಮಿಯನ್ನು ಹದಗೊಳಿಸಿಕೊಂಡು ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು.

ಈಗಾಗಲೇ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ಒಳಹರಿವಿಲ್ಲದೆ ಅಣೆಕಟ್ಟು ಸೊರಗಿದೆ. ಜೊತೆಗೆ, ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶದಂತೆ ಜೂನ್‌ ತಿಂಗಳಲ್ಲಿ ತಮಿಳುನಾಡಿಗೆ ನೀರು ಹರಿಸುವ ಪರಿಸ್ಥಿತಿ ಸೃಷ್ಟಿಯಾಗಲಿದೆ. ಆಗ ನೀರಿಗೆ ಕ್ಲಿಷ್ಟಪರಿಸ್ಥಿತಿ ಎದುರಾಗುವ ಆತಂಕ ಮೂಡಿದೆ.

82 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ! ಮುಂಗಾರು ತಡವಾದ್ರೆ ಬೆಂಗಳೂರಿಗೆ ಕಾದಿದೆ ಕಂಟಕ!

click me!