ಕೋಲಾರ (ಜು.09): ಸಂಸದೆ ಸುಮಲತಾ ಅವರಿಗೆ ರಾಜಕೀಯವಾಗಿ ಅನುಭವದ ಕೊರತೆಯಿದೆ. ಅವರು ವೈಯಕ್ತಿಕ ಲಾಭಕ್ಕೆ ಟೀಕಿಸುವುದನ್ನು ಬಿಟ್ಟು ಮೊದಲು ಮಂಡ್ಯ ಜನರ ಋುಣ ತೀರಿಸಲಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ತಾಲೂಕಿನ ಕೊಂಡರಾಜನಹಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಆರ್‌ಎಸ್ ಜಲಾಶಯ ಬಿರುಕು ಬಿಟ್ಟಿದ್ದರೆ ಆ ಬಗ್ಗೆ ತಾಂತ್ರಿಕ ಸಮಿತಿ ಅಥವಾ ಸರ್ಕಾರ ಉತ್ತರ ಕೊಡಲಿ.
undefined
ನಿಮ್ಮ ರಾಜಕಾರಣದ ಡ್ರಾಮಾ ಇನ್ಮುಂದೆ ನಡೆಯಲ್ಲ: ಎಚ್‌ಡಿಕೆಗೆ ಸುಮಲತಾ ತಿರುಗೇಟು .
ಆದರೆ, ಸುಮಲತಾ ಅವರು ಕೆಆರ್‌ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದು ಗೊಂದಲ ಸೃಷ್ಟಿಸುವುದು ಸರಿಯಲ್ಲ. ಜಲಾಶಯದ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಎಷ್ಟೇ ಪ್ರಭಾವಿಗಳಾದರೂ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.