ಅನು​ಚಿತ ವರ್ತ​ನೆ: ಮಹಿಳಾ ಹಾಸ್ಟೆಲ್‌ ಸಿಬ್ಬಂದಿ​ ವಜಾ

By Kannadaprabha NewsFirst Published Jul 7, 2020, 7:41 AM IST
Highlights

ವಿದ್ಯಾರ್ಥಿಗಳು ಮತ್ತು ಇತರ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ ಮಾಡಿದ ಉಪ್ಪಿನಂಗಡಿ ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ಮಹಿಳಾ ಹಾಸ್ಟೆಲ್‌ನ ಇಬ್ಬರು ಹೊರ ಗುತ್ತಿಗೆಯ ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾ ಮಾಡಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಮಾಹಿತಿ ನೀಡಿದ್ದಾರೆ.

ಪುತ್ತೂರು(ಜು.07): ವಿದ್ಯಾರ್ಥಿಗಳು ಮತ್ತು ಇತರ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ ಮಾಡಿದ ಉಪ್ಪಿನಂಗಡಿ ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ಮಹಿಳಾ ಹಾಸ್ಟೆಲ್‌ನ ಇಬ್ಬರು ಹೊರ ಗುತ್ತಿಗೆಯ ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾ ಮಾಡಲಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಮಾಹಿತಿ ನೀಡಿದ್ದಾರೆ.

ಪುತ್ತೂರು ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಶನಿವಾರ ತಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.

ಕೊರೋನಾ ತಾಂಡವ: ದೇಶದಲ್ಲಿ 20 ಸಾವಿರ ಗಡಿ ದಾಟಿದ ಸಾವು!

ಸಭೆಯಲ್ಲಿ ಪಾಲನಾ ವರದಿ ಮಂಡಿಸಿದ ಅಧಿಕಾರಿಗಳು ಈ ಸಿಬ್ಬಂದಿಯ ವಿಚಾರದಲ್ಲಿ ಜಿಪಂ ಮತ್ತು ತಾಪಂ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು, ಸಿಬ್ಬಂದಿಯ ಸಮ್ಮುಖದಲ್ಲಿ ಸಭೆ ನಡೆಸಿ ಅನುಚಿತವಾಗಿ ವರ್ತಿಸಿದ ಹೊರಗುತ್ತಿಗೆ ಸಿಬ್ಬಂದಿಯನ್ನು ಬೇರೆ ವಿದ್ಯಾರ್ಥಿ ನಿಲಯಕ್ಕೆ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿತ್ತು. ಬಳಿಕ ತಾಪಂ ಸಾಮಾನ್ಯ ಸಭೆ, ಕೆಡಿಪಿ ಸಭೆ ಹಾಗೂ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಈ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸುವಂತೆ ತೀರ್ಮಾನಿಸಲಾಗಿದ್ದು, ಅದರಂತೆ ಈ ಸಿಬ್ಬಂದಿಯ ಸೇವೆಯ ಅಗತ್ಯವಿಲ್ಲವೆಂದು ಪರಿಗಣಿಸಿ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೆಫೆ ಕಾಫೀ ಡೇ ಮಾಲೀಕ ಸಿದ್ಧಾರ್ಥ ಆತ್ಮಹತ್ಯೆ ಮಾಡಿದ್ದ ನೇತ್ರಾವತಿ ಸೇತುವೆಗೆ ತಡೆಬೇಲಿ

ಶಾಸಕ ಸಂಜೀವ ಮಠಂದೂರು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಹಸೀಲ್ದಾರ್‌ ರಮೇಶ್‌ ಬಾಬು ಮತ್ತಿತರರಿದ್ದರು. ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿ ಕಲಾಪ ನಿರ್ವಹಿಸಿ ಸ್ವಾಗತಿಸಿ ವಂದಿಸಿದರು.

click me!