ರಾಜಾರೋಷವಾಗಿ ಬಸ್ಸಲ್ಲೇ ಗಾಂಜಾ ಸಾಗಿಸ್ತಿದ್ದ ಮಹಿಳೆ ಅರೆಸ್ಟ್

By Web Desk  |  First Published Nov 27, 2019, 4:02 PM IST

ರಾಜಾರೋಷವಾಗಿ ಖಾಸಗಿ ಬಸ್ಸಿನಲ್ಲಿ ಈ ವಸ್ತುವನ್ನು ಸಾಗಿಸುತ್ತಿದ್ದ ಮಹಿಳೆಯನ್ನು ಕೋಲಾರದಲ್ಲಿ ಅರೆಸ್ಟ್ ಮಾಡಲಾಗಿದೆ.


ಕೋಲಾರ  [ನ.27] :  ಖಾಸಗಿ ಬಸ್ಸಿನಲ್ಲಿ ರಾಜಾರೋಷವಾಗಿ ಗಾಂಜಾ ಸಾಗಿಸುತ್ತಿದ್ದ ಆಂಧ್ರ ಪ್ರದೇಶ ಮೂಲದ ಮಹಿಳೆ ಸೇರಿದಂತೆ ನಾಲ್ವರನ್ನು  ಅರೆಸ್ಟ್ ಮಾಡಲಾಗಿದೆ. 

ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ವಡ್ಡರಹಳ್ಳಿಯಲ್ಲಿ ಆರೋಪಿಗಳ ಬಂಧಿಸಿ ಅವರ ಬಳಿ ಇದ್ದ ಗಾಂಜಾ ವಶಕ್ಕೆ ಪಡೆಯಲಾಗಿದೆ.

Tap to resize

Latest Videos

undefined

ಆಂಧ್ರ ಪ್ರದೇಶದ ತಿರುಪತಿಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ವರನ್ನು ಮಾದಕ ವಸ್ತು ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಆಂಧ್ರ ಪ್ರದೇಶ ಪುಂಗನೂರಿನ ರೆಡ್ಡಮ್ಮ ಎನ್ನುವ ಮಹಿಳೆ ಸೇರಿ ಒಟ್ಟು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. 

ಈ ಸಂಬಂಧ ಮುಳುಬಾಗಿಲು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರದಲ್ಲಿ ಕೆಲ ದಿನಗಳ ಹಿಂದಷ್ಟೇ ಬಾಂಗ್ಲಾ ದೇಶದಿಂದ ವಲಸೆ ಬಂದು ನೆಲೆಸಿ ಇಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಲಾಗಿತ್ತು. ಇದಾಗಿ ಕೆಲ ದಿನಗಳ ಬಳಿಕವೇ ಇದೀಗ ಗಾಂಜಾ ಸಾಗಣಿಕೆ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

click me!