ಕಾಂಗ್ರೆಸ್ ಶಾಸಕಿ ಲಕ್ಷ್ಮೀ ನನ್ನ ಸಹೋ​ದ​ರಿ , ಭಿಕ್ಷೆ ಬೇಡುವ ಅಗತ್ಯವಿಲ್ಲ: ಈಶ್ವರಪ್ಪ

By Kannadaprabha NewsFirst Published Sep 8, 2019, 3:19 PM IST
Highlights

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನನ್ನ ಸಹೋದರಿ ಇದ್ದಂತೆ, ಆಕೆ ಭಿಕ್ಷೆ ಬೇಡುವ ಅಗತ್ಯವಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. 

ಬೆಳಗಾವಿ [ಸೆ.08]: ಕೇವಲ ಕಾಂಗ್ರೆಸ್ಸಿನ ಮುಖಂಡರಾದ ಪಿ.ಚಿದಂಬರಂ ಮತ್ತು ಡಿ.ಕೆ.ಶಿವಕುಮಾರ ಎಂಬ ಪ್ರಶ್ನೆ ಬೇಡ. ಭ್ರಷ್ಟರು, ಕೊಲೆಗಡುಕರು, ಗೂಂಡಾಗಳೆಲ್ಲರೂ ಜೈಲು ಸೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.
 
ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಬಂಧನ ರಾಜಕೀಯ ಪ್ರೇರಿತ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ ಅವರು, ಭ್ರಷ್ಟರು, ಕೊಲೆಗಡುಕರು, ಗೂಂಡಾಗಳಿಗೆ ತಕ್ಕಶಾಸ್ತಿ ಆಗಬೇಕು. ಮೊದಲಿನಿಂದಲೂ ಬಿಜೆಪಿ ನಿಲುವು ಇದೆ ಆಗಿದೆ. ಇಡಿ, ಸಿಬಿಐ ಸೇರಿದಂತೆ ಎಲ್ಲವೂ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿವೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಲಕ್ಷ್ಮೀ ನನ್ನ ಸಹೋದರಿ

ಕೇಂದ್ರ ನೆರೆ ಸಂತ್ರಸ್ತರಿಗೆ ಬಿಡಿಗಾಸು ಪರಿಹಾರ ನೀಡಿಲ್ಲ. ಸಂತ್ರಸ್ತರಿಗಾಗಿ ಬೆಂಗಳೂರಿನಲ್ಲೇ ಭಿಕ್ಷೆ ಬೇಡುತ್ತೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೆಬ್ಬಾಳ್ಕರ್‌ ನನ್ನ ಸಹೋದರಿ ಇದ್ದಂತೆ. ಅವರು ಭಿಕ್ಷೆ ಬೇಡುವ ಅಗತ್ಯವಿಲ್ಲ. ಕೇಂದ್ರದಿಂದ ಕರ್ನಾಟಕಕ್ಕೆ ಹೆಚ್ಚಿನ ಪರಿಹಾರ ಸಿಗಲಿದೆ. ಸಂತ್ರಸ್ತರ ಸಂಕಷ್ಟಆಲಿಸಲು ನಾವು ಸಿದ್ಧರಿದ್ದೇವೆ ಎಂದು ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಹೇಳಿದರು.

click me!