ಕೆ. ಆರ್. ಪೇಟೆ: ನಾಮಪತ್ರ ಸಲ್ಲಿಕೆ ಭರಾಟೆ ಜೋರು, ಮದ್ಯ ಮಾರಾಟಕ್ಕೆ ಬ್ರೇಕ್

By Web DeskFirst Published Nov 18, 2019, 12:19 PM IST
Highlights

ನಾಮಪತ್ರ ಸಲ್ಲಿಕೆಗೆ ಇಂದೇ ಕಡೆಯ ದಿನವಾಗಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆಯಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮೂರು ಪಕ್ಷಗಳ ಅಭ್ಯರ್ಥಿಗಳಿಂದ ಇಂದು ಉಮೇದುವಾರಿಕೆ ಸಲ್ಲಿಕೆ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ನಾರಾಯಣಗೌಡ, ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್, ಜೆಡಿಎಸ್ ನ ಬಿ.ಎಲ್.ದೇವರಾಜ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ.

ಮಂಡ್ಯ(ನ.18): ನಾಮಪತ್ರ ಸಲ್ಲಿಕೆಗೆ ಇಂದೇ ಕಡೆಯ ದಿನವಾಗಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆಯಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮೂರು ಪಕ್ಷಗಳ ಅಭ್ಯರ್ಥಿಗಳಿಂದ ಇಂದು ಉಮೇದುವಾರಿಕೆ ಸಲ್ಲಿಕೆ ನಡೆಯಲಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ನಾರಾಯಣಗೌಡ, ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್, ಜೆಡಿಎಸ್ ನ ಬಿ.ಎಲ್.ದೇವರಾಜ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ.

ಕೆ. ಆರ್. ಪೇಟೆ: ಪಕ್ಷೇತರ ಅಭ್ಯರ್ಥಿಯಾಗಿ ಸರ್ವೇ ದೇವೇಗೌಡ ನಾಮಪತ್ರ ಸಲ್ಲಿಕೆ

ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್  ಮೆರವಣಿಗೆ ನಡೆಯಲಿದ್ದು, ಶ್ರೀರಂಗ ಚಿತ್ರಮಂದಿರದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಯುತ್ತಿದೆ. ಮರೆವಣಿಗೆಯಲ್ಲಿ ಮೂರು ಪಕ್ಷದ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು, ಪ್ರತ್ಯೇಕವಾಗಿ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ನಡೆಸುತ್ತಿದ್ದಾರೆ.

ಅಭ್ಯರ್ಥಿಗಳು ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದು, ಸಚಿವ ಮಾಧುಸ್ವಾಮಿ, ಬಿಎಸ್ವೈ ಪುತ್ರ ವಿಜಯೇಂದ್ರ ಜತೆ ತೆರಳಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಹಾಗೂ ಜೆಡಿಎಸ್ ಅಭ್ಯರ್ಥಿಗೆ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಸಿ.ಎಸ್.ಪುಟ್ಟರಾಜು ಹಾಗೂ ಜಿಲ್ಲೆಯ ಜೆಡಿಎಸ್ ಶಾಸಕರು ಸಾಥ್ ನೀಡಲಿದ್ದಾರೆ.

BJP ಪರ ಬ್ಯಾಟ್ ಬೀಸೋಕೆ ರೆಡಿಯಾದ JDS-ಕಾಂಗ್ರೆಸ್ ಸ್ಟಾರ್ ಬ್ಯಾಟ್ಸ್‌ಮನ್‌ಗಳು

ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಗೆ ಮಾಜಿ ಸಚಿವ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಕಳೆದ ಚುನಾವಣೆಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮಾಜಿ ಶಾಸಕರು ಸಾಥ್ ಕೊಟ್ಟಿದ್ದಾರೆ.

ಮದ್ಯ ಮಾರಾಟಕ್ಕೆ ಬ್ರೇಕ್

ಮೂರು ಪಕ್ಷದ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಕೆ ಹಿನ್ನೆಲೆ ಇಂದು ಕೆ.ಆರ್.ಪೇಟೆ ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಬೆಳಗ್ಗೆ 6 ಸಂಜೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದು, ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ನನ್ನ ಸೋಲಿಸೋಕೆ ಊಟ, ನಿದ್ದೆ ಬಿಟ್ಟು ಷಡ್ಯಂತ್ರ ಮಾಡಿದ್ರು: ನಿಖಿಲ್ ಕುಮಾರಸ್ವಾಮಿ

click me!