ಚಾಮರಾಜನಗರ: ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

Suvarna News   | Asianet News
Published : Jul 03, 2021, 03:53 PM ISTUpdated : Jul 03, 2021, 03:54 PM IST
ಚಾಮರಾಜನಗರ: ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ

ಸಾರಾಂಶ

* ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಅಣ್ಣೂರುಕೇರಿಯ ಶಿವಕುಮಾರ್  * ರಜೆ ಮುಗಿಸಿ ಎಂಟು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಮರಳಿದ್ದ ಯೋಧ * ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರದ ಮೆರವಣಿಗೆ 

ಚಾಮರಾಜನಗರ(ಜು.03): ಹೃದಯಾಘಾತದಿಂದ ಮೃತಪಟ್ಟಿದ್ದ ಸಿಆರ್‌ಪಿಎಫ್‌ ಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ.

ದೆಹಲಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಣ್ಣೂರುಕೇರಿಯ ಶಿವಕುಮಾರ್ (32) ನಿನ್ನೆ(ಶುಕ್ರವಾರ) ಮೃತಪಟ್ಟಿದ್ದರು. ಶಿವಕುಮಾರ್ ರಜೆ ಮುಗಿಸಿ ಎಂಟು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಮರಳಿದ್ದರು. ಆದ್ರೆ, ವಿಧಿಯಾಟಕ್ಕೆ ಕೇವಲ 32 ವಯಸ್ಸಿನಲ್ಲಿಯೇ ಶಿವಕುಮಾರ್ ಇಹಲೋಕ ತ್ಯಜಿಸಿದ್ದಾರೆ.

ಸ್ಯಾಟಲೈಟ್ ಪೋನ್ ಬಳಕೆ : ಪರಿಶೀಲನೆಗೆ ತೆರಳಿದ್ದ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಸಾವು

ಇಂದು ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು. ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆದಿದೆ. ಅಂತ್ಯಕ್ರಿಯೆಯಲ್ಲಿ ಸಿಆರ್‌ಪಿಎಫ್‌ ಅಧಿಕಾರಿಗಳು  ಭಾಗಿಯಾಗಿದ್ದರು. 
 

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ