ಕೊರೋನಾ ಭೀತಿ: ಕಳೆದ ಎರಡು ದಿನದಲ್ಲಿ ವಿದೇಶದಿಂದ ಬೆಂಗಳೂರಿಗೆ 1406 ಮಂದಿ

Kannadaprabha News   | Asianet News
Published : Mar 23, 2020, 09:38 AM IST
ಕೊರೋನಾ ಭೀತಿ: ಕಳೆದ ಎರಡು ದಿನದಲ್ಲಿ ವಿದೇಶದಿಂದ ಬೆಂಗಳೂರಿಗೆ 1406 ಮಂದಿ

ಸಾರಾಂಶ

2 ದಿನದಲ್ಲಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 1406 ಮಂದಿ|ಐವರಲ್ಲಿ ಸೋಂಕು ಲಕ್ಷಣ|ಬಾಕಿ ಪ್ರಯಾಣಿಕರನ್ನು ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರಲು ಸೂಚನೆ|

ಬೆಂಗಳೂರು[ಮಾ.23]: ಕಳೆದ ಎರಡು ದಿನಗಳಲ್ಲಿ 1406 ಮಂದಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ಪೈಕಿ ಐವರಲ್ಲಿ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ನಿಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬಾಕಿ ಪ್ರಯಾಣಿಕರನ್ನು ಮನೆಯಲ್ಲಿಯೇ ಪ್ರತ್ಯೇಕ ನಿಗಾದಲ್ಲಿರಲು ಸೂಚಿಸಲಾಗಿದೆ. ಇನ್ನು ಮಾರ್ಚ್ 17ರಿಂದ 21ರ ನಡುವೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಂತಾರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ 7998 ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ಕೊರೋನಾ ಆತಂಕ: ಬೆಂಗಳೂರಲ್ಲಿ 20 ಸಾವಿರ ಜನರಿಗೆ ಕ್ವಾರಂಟೈನ್‌!

ಇದರಲ್ಲಿ ಭಾನುವಾರ ಇಟಲಿಯಿಂದ ಆಗಮಿಸಿರುವ 270 ಮಂದಿ ವಿದ್ಯಾರ್ಥಿಗಳೂ ಇದ್ದಾರೆ ಎಂದು ತಿಳಿದು ಬಂದಿದೆ.

PREV
click me!

Recommended Stories

ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!
'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ