ಬೆಳಗಾವಿ: ದಿ. ಸುರೇಶ ಅಂಗಡಿ ತಾಯಿ ಸೋಮವ್ವ ನಿಧನ

Kannadaprabha News   | Asianet News
Published : Mar 12, 2021, 10:23 AM IST
ಬೆಳಗಾವಿ: ದಿ. ಸುರೇಶ ಅಂಗಡಿ ತಾಯಿ ಸೋಮವ್ವ ನಿಧನ

ಸಾರಾಂಶ

ಪುತ್ರ ಸುರೇಶ ಅಂಗಡಿ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದ ಸೋಮವ್ವ| ಸುರೇಶ ಅಂಗಡಿ ಅಕಾಲಿಕ ನಿಧನದಿಂದ ಮಾನಸಿಕವಾಗಿ ತೀರಾ ನೊಂದಿದ್ದ ಸೋಮವ್ವ ಅಂಗಡಿ| ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ (ನಾಗರಹಾಳ) ಗ್ರಾಮದ ಸ್ವಗೃಹದಲ್ಲಿ ನಿಧನ| 

ಬೆಳಗಾವಿ(ಮಾ.12): ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ತಾಯಿ ಸೋಮವ್ವ ಚ.ಅಂಗಡಿ(92) ಅವರು ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ (ನಾಗರಹಾಳ) ಗ್ರಾಮದ ಸ್ವಗೃಹದಲ್ಲಿ ನಿಧನರಾದರು.

ಐವರು ಪುತ್ರರು, ಓರ್ವ ಪುತ್ರಿಯನ್ನು ಹೊಂದಿದ್ದ ಸೋಮವ್ವ ಅವರು ಸುರೇಶ ಅಂಗಡಿ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದರು. ಗುರುವಾರ ಸಂಜೆ ಕೆ.ಕೆ.ಕೊಪ್ಪದಲ್ಲಿ ಅಂತ್ಯಕ್ರಿಯೆ ನೆರವೇರಿತು. ಸಚಿವರಾಗಿದ್ದ ಅಂಗಡಿ ಅವರ ಅಕಾಲಿಕ ನಿಧನದಿಂದ ಸೋಮವ್ವ ಅವರು ಮಾನಸಿಕವಾಗಿ ತೀರಾ ನೊಂದಿದ್ದರು. 

ರಾಜ್ಯ ರಾಜಕಾರಣಿಗಳನ್ನು ದಿಗ್ಬ್ರಮೆಗೊಳಿಸಿದ ಸುರೇಶ್‌ ಅಂಗಡಿ ಹಠಾತ್‌ ನಿಧನ

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸುರೇಶ ಅಂಗಡಿ ನಿಧನರಾದ ಆರೇ ತಿಂಗಳಲ್ಲೇ ವಿಧಿವಶರಾಗಿದ್ದಾರೆ.
 

PREV
click me!

Recommended Stories

ಫೇಸ್‌ಬುಕ್‌ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ