ಕಲಬುರಗಿ: ಮುಷ್ಕರದ ಮಧ್ಯೆ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಅಭಿನಂದಿಸಿದ ಸವದಿ

Suvarna News   | Asianet News
Published : Apr 09, 2021, 01:20 PM IST
ಕಲಬುರಗಿ: ಮುಷ್ಕರದ ಮಧ್ಯೆ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಅಭಿನಂದಿಸಿದ ಸವದಿ

ಸಾರಾಂಶ

ಸಾರ್ವಜನಿಕರಿಗೆ ತೊಂದರೆ ಮಾಡದಂತೆ ಸಾರಿಗೆ ನೌಕರರೆಲ್ಲರೂ ಕೂಡ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ತಮ್ಮ ಕರ್ತವ್ಯ ನಿಷ್ಠೆ ತೋರಿಸುವಂತೆ ತಮಲ್ಲಿ ಮತ್ತೊಮ್ಮೆ ಮನವಿ ಮಾಡುತ್ತಿದ್ದೇನೆ: ಲಕ್ಷ್ಮಣ ಸವದಿ   

ಕಲಬುರಗಿ(ಏ.09): ಸಾರಿಗೆ ನೌಕರರ ಮುಷ್ಕರದ ಮಧ್ಯೆ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಭಿನಂದನೆ ಸಲ್ಲಿಸಿದ ಘಟನೆ ಜಿಲ್ಲೆಯಲ್ಲಿ ಇಂದು(ಶನಿವಾರ) ನಡೆದಿದೆ.

ಸಚಿವ ಲಕ್ಷ್ಮಣ ಸವದಿ ಅವರು ಪ್ರಯಾಣಿಸುತ್ತಿದ್ದ ಮಾರ್ಗಮಧ್ಯೆ ಈಶಾನ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ಬಂದಿದೆ. ಇದನ್ನು ಗಮನಿಸಿದ ಸಚಿವರು ತಕ್ಷಣ ಕಾರು ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾದ ಚಾಲಕ ಮಹಮ್ಮದ್ ಚಾಂದ್ ಪಟೇಲ್ ಅವರನ್ನು ಅಭಿನಂದಿಸಿದ್ದಾರೆ. 

 

ಕೆಎಸ್‌ಆರ್‌ಟಿಸಿ ಸ್ಟ್ರೈಕ್‌: ಕೈ ಮುಗಿದು ಕೇಳಿಕೊಳ್ತೇನೆ, ಬನ್ನಿ ಕೂತು ಮಾತಾಡೋಣ,ಸವದಿ

ಈ ವೇಳೆ ಮಾತನಾಡಿದ ಸಚಿವ ಲಕ್ಷ್ಮಣ ಸವದಿ, ಸಾರ್ವಜನಿಕರಿಗೆ ತೊಂದರೆ ಮಾಡದಂತೆ ಸಾರಿಗೆ ನೌಕರರೆಲ್ಲರೂ ಕೂಡ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ತಮ್ಮ ಕರ್ತವ್ಯ ನಿಷ್ಠೆ ತೋರಿಸುವಂತೆ ತಮಲ್ಲಿ ಮತ್ತೊಮ್ಮೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. 

ಸಾರಿಗೆ ನೌಕರರು ಹಾಗೂ ರಾಜ್ಯ ಸರ್ಕಾರದ ಜಟಾಪಟಿ ಇನ್ನೂ ಮುಂದುವರೆದಿದೆ. ಆದರೂ ಕೂಡ ರಾಜ್ಯದ ಹಲವೆಡೆ ಮೇಲಧಿಕಾರಿಗಳ ಆದೇಶದಂತೆ ಕೆಲವು ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 
 

PREV
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ