ರಸ್ತೆ ಅಪಘಾತ: ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಲಕ್ಷ್ಮಣ ಸವದಿ

Published : Mar 02, 2023, 01:03 PM IST
ರಸ್ತೆ ಅಪಘಾತ: ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಲಕ್ಷ್ಮಣ ಸವದಿ

ಸಾರಾಂಶ

ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲು ಸಹಾಯ ಮಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ 

ಅಥಣಿ(ಮಾ.02): ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲು ಸಹಾಯ ಮಾಡಿ ಮಾಜಿ ಡಿಸಿಎಂ ಹಾಗೂ ವಿಧಾನಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಮಾನವೀಯತೆ ಮೆರೆದಿದ್ದಾರೆ. 

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸಮೀಪದ ಗೋಕಾಕ-ಅಥಣಿ ರಸ್ತೆಯಲ್ಲಿ ಮಂಗಳವಾರ ರಾತ್ರಿ 9 ಸುಮಾರಿಗೆ ಅಪರಿಚಿತ ವಾಹನ ಬೈಕ್‌ ಸವಾರಿಗೆ ಡಿಕ್ಕಿ ಹೊಡೆದು ಅಪಘಾತವಾಗಿತ್ತು. ಘಟನೆಯಲ್ಲಿ ಅಡಹಳಟ್ಟಿ ಗ್ರಾಮದ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಆಗಮಿಸುತ್ತಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗಾಯಗೊಂಡ ವ್ಯಕ್ತಿಯನ್ನು ನೋಡಿ ಘಟನಾ ಸ್ಥಳಕ್ಕೆ ಆಗಮಿಸಿದರು. 

ಬೆಳಗಾವಿಯಲ್ಲಿ ಕಾಂಗ್ರೆಸ್‌, ಬಿಜೆಪಿ ನಡುವೆ ಶಿವಾಜಿ ಪ್ರತಿಮೆ ಜಟಾಪಟಿ

ಕೂಡಲೇ ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆರೋಗ್ಯ ಸಂಚಾರಿ ವಾಹನ ಮತ್ತು ಪೊಲೀಸ್‌ ಇಲಾಖೆಯ ವಾಹನ ಬರುವವರಿಗೆ ಕಾದು ನಿಂತು ಅಥಣಿ ಸಾರ್ವಜನಿಕ ಆಸ್ಪತ್ರೆಗೆ ಗಾಯಾಳುವನ್ನು ರವಾನಿಸಿದ್ದಾರೆ. ಅಲ್ಲದೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಮೂಲಕ ಮಾತನಾಡಿ ಗಾಯಗೊಂಡ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ. ಸವದಿ ಅವರು ಮಾನವೀಯ ಕಾರ್ಯಕ್ಕೆ ಅಥಣಿ ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

PREV
Read more Articles on
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು