ಇದೊಂದು ಹಳೆ ಸಮಸ್ಯೆ ಇದೆ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಸಹ ರಾತ್ರಿ ನೀರು ಬಿಡಲಾಗಿತ್ತು. ಬಸವರಾಜ ಬೊಮ್ಮಾಯಿ ಅವರು ಅದನ್ನು ಮರೆತಂತೆ ಕಾಣುತ್ತದೆ ಎಂದು ಲೇವಡಿ ಮಾಡಿದ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸಂಗಪ್ಪ ಸವದಿ
ಅಥಣಿ(ಸೆ.27): ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಕಾವೇರಿ ವಿಷಯದಲ್ಲಿ ಜಾಗೃತಿಯಿಂದ ಕಾನೂನು ಚೌಕಟ್ಟಿನಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಕೈಗೊಳ್ಳುತ್ತಿದ್ದಾರೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸಂಗಪ್ಪ ಸವದಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಹಳೆ ಸಮಸ್ಯೆ ಇದೆ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಸಹ ರಾತ್ರಿ ನೀರು ಬಿಡಲಾಗಿತ್ತು. ಬಸವರಾಜ ಬೊಮ್ಮಾಯಿ ಅವರು ಅದನ್ನು ಮರೆತಂತೆ ಕಾಣುತ್ತದೆ ಎಂದು ಲೇವಡಿ ಮಾಡಿದರು.
undefined
ಕಾವೇರಿ ಕಿಚ್ಚು: ಇಂಡಿಯಾ ಮೈತ್ರಿಕೂಟದ ಹಿತ ಕಾಪಾಡಲು ರಾಜ್ಯದ ರೈತರ ಹಿತ ಬಲಿ, ಬೊಮ್ಮಾಯಿ
ಅಮ್ಮಾಜೇಶ್ವರಿ ಯಾತ ನೀರಾವರಿ ಯೋಜನೆ ಕಾರ್ಯಾರಂಭಕ್ಕಾಗಿ ಡಿಕೆಶಿ ಭೇಟಿ: ಲಕ್ಷ್ಮಣ ಸವದಿ
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಮತ್ತು ನನ್ನ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಅವಶ್ಯಕತೆ ಇಲ್ಲ. ನಾನು ನನ್ನ ಕ್ಷೇತ್ರದ ಅಮ್ಮಾಜೇಶ್ವರಿ ಯಾತ ನೀರಾವರಿ ಯೋಜನೆಯ ಕಾರ್ಯಾರಂಭಕ್ಕೆ ಚಾಲನೆ ನೀಡುವ ಕುರಿತು ಚರ್ಚೆ ಮಾಡಲು ಭೇಟಿ ಮಾಡಿದ್ದೇನೆ. ನನ್ನದೊಂದು ಕನಸು ಇದೆ. ಈ ಯೋಜನೆ ಮಾಡುವುದು. ಅದಕ್ಕಾಗಿ ಭೇಟಿ ಮಾಡಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಚರ್ಚೆ ಅಲ್ಲ ಎಂದು ಮಾಜಿ ಉಪಮುಖ್ಯ ಮಂತ್ರಿ, ಶಾಸಕ ಲಕ್ಷ್ಮಣ ಸಂಗಪ್ಪ ಸವದಿ ಹೇಳಿದರು.
ಬಂದ್ ನಡುವೆ ಕರ್ನಾಟಕಕ್ಕೆ ಶಾಕ್, ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಲು ಶಿಫಾರಸು!
ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮ್ಮಾಜೇಶ್ವರಿ ಯಾತ ನೀರಾವರಿ ಯೋಜನೆ ಆರಂಭವಾದರೇ ಸುಮಾರು 70 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಲಾಭ ಸಿಗುತ್ತದೆ. ಅದಕ್ಕಾಗಿ ಈ ವಿಷಯ ಕುರಿತು ಚರ್ಚೆ ಮಾಡಲು ಹೋಗಿದ್ದೆ. ಇನ್ನೆರಡು ದಿನಗಳಲ್ಲಿ ನೀರಾವರಿ ನಿಗಮದ ಅಧಿಕಾರಿಗಳ ಸಂಗಡ ಸಭೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಮತ್ತು ನಾನು ಈ ವಿಷಯ ಕುರಿತು ಸಭೆ ಮಾಡುತ್ತೇವೆ ಎಂದರು.
ಕಾವೇರಿ ವಿಷಯದಲ್ಲಿ ಜಾಗೃತಿಯಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಕಾನೂನು ಚೌಕಟ್ಟಿನಲ್ಲಿ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಕೈಗೊಳ್ಳುತಿದ್ದಾರೆ. ಇದೊಂದು ಹಳೆ ಸಮಸ್ಯೆ ಇದೆ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಸಹ ರಾತ್ರಿ ನೀರು ಬಿಡಲಾಗಿತ್ತು. ಬಸವರಾಜ ಬೊಮ್ಮಾಯಿ ಅವರು ಅದನ್ನು ಮರೆತಂತೆ ಕಾಣುತ್ತದೆ ಎಂದು ಲೇವಡಿ ಮಾಡಿದರು.