ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮಾತೃ ಪಕ್ಷಕ್ಕೆ ಮರಳಿದ ಮುಖಂಡ : ಸ್ವಾಗತಿಸಿದ ನಾಯಕರು

By Kannadaprabha News  |  First Published Mar 23, 2024, 10:07 AM IST

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಕಾರಣಗಳಿಂದ ಪಕ್ಷಕ್ಕೆ ಗುಡ್‌ಬೈ ಹೇಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಮಾತೃ ಪಕ್ಷ ಬಿಜೆಪಿಗೆ ಮರಳಿ ಬಂದಿರುವುದು ಸ್ವಾಗತಾರ್ಹ.

Leaders who returned to the mother party during the Lok Sabha elections: Leaders welcomed snr

ತಿಪಟೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಕಾರಣಗಳಿಂದ ಪಕ್ಷಕ್ಕೆ ಗುಡ್‌ಬೈ ಹೇಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಮಾತೃ ಪಕ್ಷ ಬಿಜೆಪಿಗೆ ಮರಳಿ ಬಂದಿರುವುದು ಸ್ವಾಗತಾರ್ಹ.

ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಇನ್ನೂ ಅನೇಕ ನಾಯಕರುಗಳು ಬಿಜೆಪಿಗೆ ಮರಳಿ ಬರುವ ನಿರೀಕ್ಷೆ ಇದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿ ಸ್ಥಾಪಕ ಸದಸ್ಯ ಕೆ.ಎಸ್. ಸದಾಶಿವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tap to resize

Latest Videos

ಬಿಜೆಪಿಯಲ್ಲಿ ಒಳಗಿನವರು ಹೊರಗಿನವರು ಎಂಬುದಿಲ್ಲ. ಎಲ್ಲರೂ ಬಿಜೆಪಿಯವರೇ, ಎಲ್ಲರೂ ಭಾರತಿಯರೇ. ಬಿಜೆಪಿ ಅಭ್ಯರ್ಥಿ ಸೋಮಣ್ಣ ಹೊರಗಿನವರು ಎಂಬುದು ಕೆಲವರ ಸೃಷ್ಟಿ. ಇದಕ್ಕೆ ಇತಿಶ್ರೀ ಹಾಡಿಲೆಂದೇ ಸೋಮಣ್ಣ ತುಮಕೂರಿನಲ್ಲೇ ಮನೆ ಮಾಡಿದ್ದಾರೆ. ಆದ್ದರಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷದ ಪರವಾಗಿ ಪ್ರಾಮಾಣಿಕವಾಗಿ ಪ್ರಚಾರ ಮಾಡಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಿಸಲು ಎಲ್ಲರೂ ಪಣತೊಡೋಣ. ಪಕ್ಷಕ್ಕಾಗಿ ದುಡಿಯೋಣ ಎಂದು ಸದಾಶಿವಯ್ಯ ಕರೆ ನೀಡಿದ್ದಾರೆ.

vuukle one pixel image
click me!
vuukle one pixel image vuukle one pixel image