ಕೊರೋನಾ ಸೋಂಕಿನಿಂದ ಮೃತಪಟ್ಟಬಿಬಿಎಂಪಿ ಪೌರಕಾರ್ಮಿಕರ ಅಂತ್ಯ ಸಂಸ್ಕಾರಕ್ಕೆ ತಕ್ಷಣ 20 ಸಾವಿರ ರು. ಬಿಡುಗಡೆ, 50 ವರ್ಷ ಮೇಲ್ಪಟ್ಟಪೌರಕಾರ್ಮಿಕರು ಮತ್ತು ಗರ್ಭಿಣಿ ಪೌರಕಾರ್ಮಿಕರಿಗೆ ವೇತನ ಸಹಿತ ರಜೆ, ಕೊರೋನಾ ಸೋಂಕಿನಿಂದ ಮೃತಪಟ್ಟಪೌರಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವುದು ಸೇರಿದಂತೆ ಪಾಲಿಕೆ ಪೌರಕಾರ್ಮಿಕರಿಗೆ ವಿವಿಧ ಸೌಲಭ್ಯಗಳ ಕುರಿತು ಬಿಬಿಎಂಪಿ ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಿ. ರಂದೀಪ್ ಆದೇಶಿಸಿದ್ದಾರೆ.
ಬೆಂಗಳೂರು(ಜು.26): ಕೊರೋನಾ ಸೋಂಕಿನಿಂದ ಮೃತಪಟ್ಟಬಿಬಿಎಂಪಿ ಪೌರಕಾರ್ಮಿಕರ ಅಂತ್ಯ ಸಂಸ್ಕಾರಕ್ಕೆ ತಕ್ಷಣ 20 ಸಾವಿರ ರು. ಬಿಡುಗಡೆ, 50 ವರ್ಷ ಮೇಲ್ಪಟ್ಟಪೌರಕಾರ್ಮಿಕರು ಮತ್ತು ಗರ್ಭಿಣಿ ಪೌರಕಾರ್ಮಿಕರಿಗೆ ವೇತನ ಸಹಿತ ರಜೆ, ಕೊರೋನಾ ಸೋಂಕಿನಿಂದ ಮೃತಪಟ್ಟಪೌರಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವುದು ಸೇರಿದಂತೆ ಪಾಲಿಕೆ ಪೌರಕಾರ್ಮಿಕರಿಗೆ ವಿವಿಧ ಸೌಲಭ್ಯಗಳ ಕುರಿತು ಬಿಬಿಎಂಪಿ ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಿ. ರಂದೀಪ್ ಆದೇಶಿಸಿದ್ದಾರೆ.
ನಗರದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 50 ವರ್ಷ ಮೇಲ್ಪಟ್ಟಪೌರ ಕಾರ್ಮಿಕರು, ಪೌರಕಾರ್ಮಿಕ ಗರ್ಭಿಣಿಯರನ್ನು ಗುರುತಿಸಿ, ಅವರಿಗೆ ವೇತನ ಸಹಿತ ರಜೆ ನೀಡಲು ಕ್ರಮ ವಹಿಸುವಂತೆ ವಲಯ ಮುಖ್ಯ ಎಂಜಿನಿಯರು ಜಂಟಿ ಆಯುಕ್ತರ ಮೂಲಕ ಕ್ರಮಕ್ಕೆ ನಿರ್ದೇಶನ ನೀಡಲಾಗಿದೆ.
ಸುರಕ್ಷತೆಗೆ ನಿರ್ದೇಶನ:
ಗ್ಲೌಸ್, ಮಾಸ್ಕ್, ಫೇಸ್ ಶೀಲ್ಡ್ ಸೇರಿದಂತೆ ಪೌರ ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ. ಆರೋಗ್ಯ ಸಮಸ್ಯೆ ಉಂಟಾದರೆ, ಕೂಡಲೇ ಸೂಕ್ತ ಆಸ್ಪತ್ರೆಗಳಿಗೆ ದಾಖಲಿಸಲು ಕ್ರಮ ತೆಗೆದುಕೊಳ್ಳಿ ಎಂದು ಸೂಚಿಸಿದ್ದಾರೆ.
ಸೋಂಕಿತರ ಅಂತ್ಯಕ್ರಿಯೆ ವೆಚ್ಚ ಭರಿಸಲಿದೆ BBMP