ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ರ್ದಾ ಕುಂ ಇ ಅಹಮದ… ಎಚ್ಚರಿಕೆ ನೀಡಿದರು.
ಪಿರಿಯಾಪಟ್ಟಣ : ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ರ್ದಾ ಕುಂ ಇ ಅಹಮದ… ಎಚ್ಚರಿಕೆ ನೀಡಿದರು.
ರಾಜ್ಯದ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯನ್ನು ಪಾರದರ್ಶಕವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.
undefined
ಇನ್ನು ಮುಂದೆ ತಾಲೂಕು ವ್ಯಾಪ್ತಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭ, ಖಾಸಗಿ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಮದುವೆ, ಗ್ರಾಮದ ಹಬ್ಬ ಹರಿದಿನ ಇನ್ನಿತರೆ ಯಾವುದೇ ಕಾರ್ಯಗಳನ್ನು ನಡೆಸಲುಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ.ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಅಭ್ಯರ್ಥಿಯ ಪರವಾಗಿ ಯಾವುದೇ ಜಾಹೀರಾತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವ ಮುನ್ನ ಸದರಿ ವಿವರವನ್ನು ಚುನಾವಣಾ ತಂಡದ ಗಮನಕ್ಕೆ ತಂದು ಪ್ರಮಾಣ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ. ನಮ್ಮ ಮತ್ತು ಸಂಬಂಧಪಟ್ಟಇಲಾಖೆ ಗಮನಕ್ಕೆ ತರದೆ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಮಾಡಿದರು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ತಾಲೂಕಿನ ವಿವಿಧೆಡೆಯ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ತೆರೆದು ವಿವಿಧ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ನೇಮಿಸಿ ವಾಹನ ಸಂಚಾರದ ಮೇಲೆ ನಿಗವಹಿಸಲಾಗಿದೆ, ದೇವಸ್ಥಾನ ಮಸೀದಿ ಚಚ್‌ರ್‍ಗಳಲ್ಲಿ ಯಾವುದೇ ಚುನಾವಣಾ ಪ್ರಚಾರ ಮಾಡಬಾರದು ಎಂದು ಸೂಚಿಸಿದರು.
ತಾಲೂಕಿನಲ್ಲಿ ಒಟ್ಟು 1,93,173 ಮತದಾರರಿದ್ದು, 96,930 ಪುರುಷರು, 96,236 ಮಹಿಳೆಯರು ಮತ್ತು 7 ಇತರೆ ಮತದಾರರಿದ್ದಾರೆ, 5,266 ಮಂದಿ 80 ವರ್ಷ ಮೇಲ್ಪಟ್ಟಮತದಾರರನ್ನು ಗುರುತಿಸಿದೆ. ಹೊಸದಾಗಿ 18 ವರ್ಷ ಮೇಲ್ಪಟ್ಟ4,395 ಮತದಾರರು ಮತಪಟ್ಟಿಗೆ ಹೆಸರು ನೋಂದಾಯಿಸಿದ್ದಾರೆ, ತಾಲೂಕಿನಾದ್ಯಂತ 235 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಪಿಂಕ್ ಮತ್ತು ಯತ್ನಿಕ್ ವಿಶೇಷ ಮತಗಟ್ಟೆಗಳನ್ನು ತೆರೆಯಲಾಗುವುದು, ಮತ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ತಾಲೂಕಿನ ಸಾರ್ವಜನಿಕರು ದೂರು ನೀಡಲು ಕಂಟ್ರೋಲ… ರೂಂ ದೂ. ಸಂಖ್ಯೆ 08233-274007 ಅಥವಾ ಚುನಾವಣಾಧಿಕಾರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಕುಸುಮ ಕುಮಾರಿ, ಮೊ. 9845073568, ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ್ ಕುಂ ಇ ಅಹಮದ್, ಮೊ. 9740125662 ಸಂಪರ್ಕಿಸಲು ತಿಳಿಸಿದ್ದಾರೆ.
ಪೊ›ಬೇಷನರಿ ತಹಸೀಲ್ದಾರ್ ಭೀಮರಾಯ ರಾಮಸಮುದ್ರ, ಶಿರಸ್ತೆದಾರ್‌ಗಳಾದ ನಂದಕುಮಾರ್, ದ್ರಾಕ್ಷಾಯಿಣಿ, ಸಿಬ್ಬಂದಿ ರಾಕೇಶ್ ಇದ್ದರು.
ನೀತಿ ಸಂಹಿತೆ ಉಲ್ಲಂಘಿಸದಿರಿ
ತುಮಕೂರು : ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆ ಸಮರ್ಪಕ ಅನುಷ್ಠಾನಕ್ಕಾಗಿ ಮುಂದಿನ 45 ದಿನಗಳು ಎಲ್ಲಿಯೂ ಯಾವುದೇ ರೀತಿ ಚುನಾವಣಾ ಆಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಲೀಡ್ ಬ್ಯಾಂಕ್ ಮ್ಯಾನೇಜರ್, ಸಹಕಾರ ಸಂಘಗಳ ಉಪ ನಿಬಂಧಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮತ್ತು ಆಹಾರ ಇಲಾಖೆಯ ಜಂಟಿ ನಿರ್ದೇಶಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಾನ್ ಬ್ರೋಕರ್‌ಗಳು ಮತ್ತು ಇತರೆ ಲೇವಾದೇವಿದಾರರಿಗೆ ಚುನಾವಣಾ ನೀತಿ ಸಂಹಿತೆ ಕುರಿತು ಮಾಹಿತಿ ನೀಡುವುದು. ಅವರ ದಿನನಿತ್ಯದ ವಹಿವಾಟುಗಳ ಬಗ್ಗೆ ಗಮನವಹಿಸಿ ಅಕ್ರಮ ಹಣ ವರ್ಗಾವಣೆ ಯಾಗದಂತೆ ತಡೆಯುವುದು ಎಂದು ತಿಳಿಸಿದರು.
ಪೆಟ್ರೋಲ್ ಬಂಕ್‌ಗಳಲ್ಲಿ ಜಮೆಯಾಗಿರುವ ಹಣ ಹಾಗೂ ಪ್ರತಿ ದಿನ ಲಭ್ಯವಿರುವ ದಾಸ್ತಾನಿನ ಮಾಹಿತಿಯನ್ನು ಪ್ರತಿ ದಿನ ಸಲ್ಲಿಸುವುದು. ಪೆಟ್ರೋಲ್ ಬಂಕ್‌ಗಳಲ್ಲಿ ಯಾವುದೇ ಟೋಕನ್ ಆಧರಿಸಿ ಪೆಟ್ರೋಲ್ ನೀಡುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಪೆಟ್ರೋಲ್ ಬಂಕ್ ಮಾಲೀಕರಿಗೆ ತಿಳಿಸಿ ಹೇಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿ ದರು.