Leopard death: ದಾವಣಗೆರೆ: ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು!

Published : Feb 08, 2023, 03:30 PM ISTUpdated : Feb 08, 2023, 03:38 PM IST
Leopard death: ದಾವಣಗೆರೆ: ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು!

ಸಾರಾಂಶ

ದಾವಣಗೆರೆಯ ಆನಗೋಡು ಬಳಿ‌ ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ತಡರಾತ್ರಿ ಚಿರತೆಯೊಂದು ರಸ್ತೆ ದಾಟುವಾಗ ಈ ಅವಘಡ‌ ನಡೆದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವು ಕಂಡಿದೆ. ವಾಹನ ಡಿಕ್ಕಿಯಾದ ರಭಸಕ್ಕೆ ಚಿರತೆ  ತಲೆ ದೇಹದ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳಾಗಿವೆ.

ದಾವಣಗೆರೆ (ಪೆ.8) : ದಾವಣಗೆರೆಯ ಆನಗೋಡು ಬಳಿ‌ ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ತಡರಾತ್ರಿ ಚಿರತೆಯೊಂದು ರಸ್ತೆ ದಾಟುವಾಗ ಈ ಅವಘಡ‌ ನಡೆದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವು ಕಂಡಿದೆ. ವಾಹನ ಡಿಕ್ಕಿಯಾದ ರಭಸಕ್ಕೆ ಚಿರತೆ  ತಲೆ ದೇಹದ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳಾಗಿವೆ.

ಆನಗೋಡು ಸುತ್ತಮುತ್ತ ಚಿರತೆ ಓಡಾಡುತ್ತಿದ್ದ ಬಗ್ಗೆ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಬಗ್ಗೆ ಅರಣ್ಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು. ಇದೀಗ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿದೆ. ಇದರಿಂದ ಈ ಭಾಗದಲ್ಲಿ ಚಿರತೆ ಚಲನವಲನ ಬಗ್ಗೆ ಸ್ಪಷ್ಟತೆ ಸಿಕ್ಕಿದೆ.  ಹೈವೇ ಯಲ್ಲಿ ಅಮೂಲ್ಯ ವನ್ಯಮೃಗ ಸಾವನ್ನಪ್ಪಿರುವುದು ಆತಂಕ ತಂದಿದ್ದು ಇನ್ನು ಮುಂದೆ ಆಕ್ಸಿಡೆಂಟ್ ನಲ್ಲಿ  ಚಿರತೆ ಸೇರಿದಂತೆ ವನ್ಯ ಮೃಗಗಳ ಸಾವನ್ನಪ್ಪದಂತೆ ಅರಣ್ಯ ಇಲಾಖೆ ಕ್ರಮ‌ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ‌ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.  ಈ ಬಗ್ಗೆ  ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿ ವೈಲ್ಡ್ ಲೈಪ್ ತಜ್ನರ ತಂಡವು ಸಹ ಪರಿಶೀಲನೆ ನಡೆಸಿದೆ.

ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆ ಸಾವು

PREV
Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ