ಬೆಳಗಾವಿಯಲ್ಲಿ ಎಥೆನಾಲ್ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚು ಅವಕಾಶಗಳಿವೆ. ರೈತರ ಅಭಿವೃದ್ಧಿ ಮತ್ತು ಪರಿಸರ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯಾದ್ಯಂತ ಎಥೆನಾಲ್ ಬಳಕೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಬೇಕು. ಮುಂಬರುವ ದಿನಗಳಲ್ಲಿ ನಮ್ಮ ದೇಶದಿಂದ ಜಗತ್ತಿಗೇ ಎಥೆನಾಲ್ ರಫ್ತು ಗುರಿ ಹೊಂದಲಾಗಿದೆ. ಭವಿಷ್ಯದಲ್ಲಿ ಎಥೆನಾಲ್ ಹಾಗೂ ಮಿಥೆನಾಲ್ ಆಧಾರಿತ ವಾಹನಗಳನ್ನು ರಸ್ತೆಗಿಳಿಸುವ ಮೂಲಕ ಪರಿಸರ ರಕ್ಷಣೆ ಜತೆಗೆ ರೈತರ ಆರ್ಥಿಕಾಭಿವೃದ್ಧಿಗೂ ಅವಕಾಶ ಕಲ್ಪಿಸಲಾಗುವುದು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ
ಶಿವಮೊಗ್ಗ/ಬೆಳಗಾವಿ(ಫೆ.23): ಎಥೆನಾಲ್ ಬಯೋ ಡೀಸಲ್ ನಮ್ಮ ಮುಂದಿನ ಭವಿಷ್ಯದ ಇಂಧನ. ಕರ್ನಾಟಕದಲ್ಲಿ ಸಾಕಷ್ಟು ಸಕ್ಕರೆ ಕಾರ್ಖಾನೆಗಳಿವೆ. ಇವುಗಳಿಂದ ಎಥೆನಾಲ್ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಬಹುದಾಗಿದೆ. ಬೆಳಗಾವಿ ವಿಮಾನ ಇಂಧನ ಉತ್ಪಾದನೆ ಹಬ್ ಆಗಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಗುರುವಾರ ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ಸುಮಾರು 13 ಸಾವಿರ ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಬೆಳಗಾವಿಯಲ್ಲಿ ಎಥೆನಾಲ್ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚು ಅವಕಾಶಗಳಿವೆ. ರೈತರ ಅಭಿವೃದ್ಧಿ ಮತ್ತು ಪರಿಸರ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯಾದ್ಯಂತ ಎಥೆನಾಲ್ ಬಳಕೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಬೇಕು. ಮುಂಬರುವ ದಿನಗಳಲ್ಲಿ ನಮ್ಮ ದೇಶದಿಂದ ಜಗತ್ತಿಗೇ ಎಥೆನಾಲ್ ರಫ್ತು ಗುರಿ ಹೊಂದಲಾಗಿದೆ. ಭವಿಷ್ಯದಲ್ಲಿ ಎಥೆನಾಲ್ ಹಾಗೂ ಮಿಥೆನಾಲ್ ಆಧಾರಿತ ವಾಹನಗಳನ್ನು ರಸ್ತೆಗಿಳಿಸುವ ಮೂಲಕ ಪರಿಸರ ರಕ್ಷಣೆ ಜತೆಗೆ ರೈತರ ಆರ್ಥಿಕಾಭಿವೃದ್ಧಿಗೂ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಬೆಳಗಾವಿ: 100 ಅಡಿ ಪ್ರಪಾತಕ್ಕೆ ಬಿದ್ದರೂ ಬದುಕಿ ಬಂದ ಯುವಕ..!
13 ಸಾವಿರ ಕೋಟಿ ಯೋಜನೆ
ಗಡ್ಕರಿ ಅವರು ಬೆಳಗಾವಿಯಲ್ಲಿ ₹1622 ಕೋಟಿ ವೆಚ್ಚದ ಹೊನಗಾ-ಝಾಡಶಹಾಪುರ ಚತುಷ್ಪಥ ರಿಂಗ್ ರಸ್ತೆ, ₹941 ಕೋಟಿ ವೆಚ್ಚದ ಚಿಕ್ಕೋಡಿ ಬೈಪಾಸ್‌ನಿಂದ-ಗೋಟೂರವರೆಗಿನ ಚತುಷ್ಪಥ ಹಾಗೂ ಶಿರಗುಪ್ಪಿಯಿಂದ ಅಂಕಲಿವರೆಗಿನ ₹887 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಸೇರಿ ಬೆಳಗಾವಿಯಲ್ಲಿ 680 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ರಾಷ್ಟ್ರಸಮರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಿದರೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 6,200 ಕೋಟಿ ರು. ವೆಚ್ಚದ ಕಾಮಗಾರಿಗೆ ಶಿವಮೊಗ್ಗದಲ್ಲಿ ಚಾಲನೆ ನೀಡಿದರು.