ಗಾಂಜಾ ಹಾವಳಿ ಹೆಚ್ಚಳ ಹಿನ್ನೆ​ಲೆ ಗೃಹ ಸಚಿವ ಜ್ಞಾನೇಂದ್ರ ರಾಜಿನಾಮೆ ನೀಡಲಿ

By Kannadaprabha News  |  First Published Jul 27, 2022, 11:00 AM IST

ಶಿವಮೊಗ್ಗದಲ್ಲಿ ಪ್ರತಿಷ್ಠಿತ ವಿದ್ಯಾರ್ಥಿಗಳು ಡ್ರಗ್ಸ್  ಅಡಿಕ್ಟ್ ಆಗಿದ್ದಾರೆ. ಗೃಹ ಸಚಿವರ ತವರು ಜಿಲ್ಲೆಯಲ್ಲಿ ಡ್ರಗ್ಸ್ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ರಾಜೀನಾಮೆಗೆ ಆಗ್ರಹಿಸಿ  ಎನ್‌ಎಸ್‌ಯುಐ ಜಿಲ್ಲಾ ಘಟಕ ವತಿಯಿಂದ ಮಂಗಳವಾರ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.


ಶಿವಮೊಗ್ಗ (ಜು.27}: ಜಿಲ್ಲೆಯಲ್ಲಿ ಗಾಂಜಾ, ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ಗೃಹ ಇಲಾಖೆ ವಿಫಲರಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ಥಾನ​ಕ್ಕೆ ರಾಜಿನಾಮೆ ನೀಡ​ಬೇ​ಕೆಂದು ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕ ವತಿಯಿಂದ ಮಂಗಳವಾರ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಗೃಹ ಸಚಿವರ(Home Minister) ತವರು ಜಿಲ್ಲೆ ಶಿವಮೊಗ್ಗ(Shivamogga)ದಲ್ಲಿ ದಿನೇದಿನೇ ಗಾಂಜಾ(Marijuana) ಡ್ರಗ್ಸ್ ಮಾದಕ ವಸ್ತುಗಳ ಕುರಿತು ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲೆಯಲ್ಲಿ ಗಾಂಜಾ, ಮಾದಕ ವಸ್ತುಗಳ ಮಾರಾಟ ನಿರಂತರವಾಗಿ ಸಾಗಿದೆ. ಗಾಂಜಾ, ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ವಿಫಲರಾಗಿರುವ ಹಾಗೂ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸಲು ವಿಫಲರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

Tap to resize

Latest Videos

ಶಿವಮೊಗ್ಗ: ಡ್ರಗ್ಸ್‌ ನಶೆಯಲ್ಲಿ ತೇಲಾಡಿದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು!

ಜಿಲ್ಲೆಯಲ್ಲಿ ಇತ್ತೀಚೆಗೆ ಬಹುತೇಕ ಕಾಲೇಜಿನ ವಿದ್ಯಾರ್ಥಿಗಳು ಗಾಂಜಾ, ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಶಾಲಾ- ಕಾಲೇಜುಗಳ ಆವರಣದಲ್ಲಿ ಗಾಂಜಾ, ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಪ್ರತಿಷ್ಠಿತ ಕಾಲೇಜಿನ ಎದುರಿನಲ್ಲಿಯೇ ವಿದ್ಯಾರ್ಥಿಗಳು ನಶೆಯಲ್ಲಿ ಬಿದ್ದು ಒದ್ದಾಡುತ್ತಿರುವುದು ವೈರಲ್‌ ಆಗಿದೆ. ಇದು ಅತ್ಯಂತ ಬೇಸರದ ಸಂಗತಿ. ಗಾಂಜಾ, ಡ್ರಗ್‌್ಸ ಸೇರಿದಂತೆ ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಪೊಲೀಸ್‌ ಇಲಾಖೆ ಜಿಲ್ಲೆಯಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗಾಂಜಾ ಮಾರಾಟ ಹಾಗೂ ಬಳಕೆ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಂಡು ಶಿಕ್ಷೆಗೆ ಒಳಪಡಿಸಬೇಕು. ಶಾಲಾ- ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಕ್ರಮ ವಹಿಸಬೇಕು. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ, ಮಾದಕ ವಸ್ತುಗಳ ಮಾರಾಟ ನಿಯಂತ್ರಿಸುವಲ್ಲಿ ಹಾಗೂ ಗೃಹ ಇಲಾಖೆ ನಿರ್ವಹಿಸುವಲ್ಲಿ ವಿಫಲರಾಗಿರುವ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸಂಪುಟದಿಅದ ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬುಕ್ ಸ್ಟಾಲ್ ನಲ್ಲಿ ಡ್ರಗ್ಸ್ ಮಾರುತ್ತಿದ್ದವರ ಬಂಧನ!

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ನಗರ ಅಧ್ಯಕ್ಷ ಚರಣ್‌, ಮಧುಸೂಧನ್‌, ಹರ್ಷಿತ್‌, ಎಸ್‌.ಎಸ್‌. ವಿಜಯಕುಮಾರ್‌, ವಿಶಾಲ್‌, ಕಿರಣ್‌, ಸಚ್ಚಿನ್‌, ಸೋನು, ಪ್ರದೀಪ್‌, ಗಗನ್‌, ಅಭಿ, ಪವನ್‌, ಮುರಳಿ, ಮನು ಮತ್ತಿತರರು ಇದ್ದರು.

click me!