ಉತ್ತಮ ಶಿಕ್ಷಣ ಸಂಸ್ಥೆ ನಿರ್ಮಾಣ ಮಾಡಲಿ: ಸಂಸದ

By Kannadaprabha News  |  First Published Mar 29, 2023, 6:12 AM IST

ಅಗ್ನಿವಂಶ ಕ್ಷತ್ರಿಯ ಜನಾಂಗದವರು ಮುಂದಿನ ದಿನಗಳಲ್ಲಿ ಮತ್ತಷ್ಟುಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ಕಟ್ಟುವಂತಾಗಲಿ. ಯಾವುದೇ ಸಮುದಾಯದ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದಲ್ಲಿ ಆ ಕುಟುಂಬ ಸಮಾಜದಲ್ಲಿ ಹೆಚ್ಚಿನ ಗೌರವ ಪಡೆಯುವುದರಲ್ಲಿ ಅನುಮಾನವಿಲ್ಲ ಎಂದು ಸಂಸದ ಜಿ.ಎಸ್‌.ಬಸವರಾಜು ಅಭಿಪ್ರಾಯಪಟ್ಟರು.


 ತುಮಕೂರು :  ಅಗ್ನಿವಂಶ ಕ್ಷತ್ರಿಯ ಜನಾಂಗದವರು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ಕಟ್ಟುವಂತಾಗಲಿ. ಯಾವುದೇ ಸಮುದಾಯದ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದಲ್ಲಿ ಆ ಕುಟುಂಬ ಸಮಾಜದಲ್ಲಿ ಹೆಚ್ಚಿನ ಗೌರವ ಪಡೆಯುವುದರಲ್ಲಿ ಅನುಮಾನವಿಲ್ಲ ಎಂದು ಸಂಸದ ಜಿ.ಎಸ್‌.ಬಸವರಾಜು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಅಗ್ನಿ ವಂಶ ಕ್ಷತ್ರಿಯ ತಿಗಳ ಜನಾಂಗದ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಅಮಾನಿಕೆರೆ ಗಾಜಿನಮನೆ ಆವರಣದಲ್ಲಿ ಅಗ್ನಿಬನ್ನಿರಾಯಸ್ವಾಮಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

Tap to resize

Latest Videos

ಶರೀರವನ್ನು ಧಣಿಸಿ ದುಡಿದು ಪ್ರಾಮಾಣಿಕ ಜೀವನ ನಡೆಸುವ ಸಮುದಾಯ ತಿಗಳ ಸಮುದಾಯವಾಗಿದೆ. ಈ ವರ್ಗದ ಜನರು ಹೆಚ್ಚಾಗಿ ರೈತಾಪಿ ಕುಟುಂಬದವರಾಗಿದ್ದಾರೆ. ಸಮುದಾಯದ ಜನರು ರಾಜಕೀಯವಾಗಿ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರಾಗಿ ಆಯ್ಕೆಯಾಗಿ ಸೇವೆ ಮಾಡಿದ್ದಿರಾ. ಮುಂದಿನ ದಿನಗಳಲ್ಲಿ ವಿಧಾನಸಭೆ, ಲೋಕಸಭೆಗಳಿಗೆ ಆಯ್ಕೆಯಾಗುವುದರ ಮೂಲಕ ಸಮಾಜದ ಪರವಾಗಿ ಮತ್ತಷ್ಟುಅಭಿವೃದ್ಧಿ ಕೆಲಸಗಳನ್ನು ಮಾಡಲಿ. ದೇಶದ ಪ್ರತಿಯೊಬ್ಬ ಪ್ರಜೆಯು ನಾನು ಈ ದೇಶದ ಪ್ರಜೆ ಎಂಬ ಭಾವನೆ ಬರಬೇಕು ಹಾಗೂ ನಾವೆಲ್ಲಾ ಒಂದು ಎಂಬ ಭಾವನೆ ಮೂಡಬೇಕು ಎಂದು ಹೇಳಿದರು.

ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಬಿ.ಜ್ಯೋತಿಗಣೇಶ್‌ ಮಾತನಾಡಿ, ರಾಜ್ಯ ಸರ್ಕಾರವು ಈ ಸಮುದಾಯದ ಅಭಿವೃದ್ಧಿಗಾಗಿ ತಿಗಳ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. ಅಗ್ನಿವಂಶ ಕ್ಷತ್ರಿಯ ಜನಾಂಗದ ಕುಲದೇವರಾದ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವಂತೆ ನಮ್ಮ ಸರ್ಕಾರ ಆದೇಶ ಮಾಡಿದೆ. ಸಮುದಾಯದ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಗಾಗಲೆ ಈಡೇರಿಸಿದೆ. ಅಭಿವೃದ್ಧಿ ನಿಗಮದಿಂದ ಸಮುದಾಯದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.

ಕೊಪ್ಪಳ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಬಿ.ಕೆ.ರವಿಯಿಂದ ಹೊಸ ಕಾರ್ಯ ಯೋಜನೆ

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್‌, ಮಾಜಿ ಶಾಸಕ ಸುರೇಶ್‌ಗೌಡ, ಉಪ ಮಹಾಪೌರರಾದ ಟಿ.ಕೆ.ನರಸಿಂಹಮೂರ್ತಿ, ಅಗ್ನಿ ವಂಶ ಸಮಾಜದ ಅಧ್ಯಕ್ಷ ಸುಬ್ಬಣ್ಣ, ಉದಯ್‌ಸಿಂಗ್‌, ಪೇಟೆ ಯಜಮಾನರಾದ ಶಿವಕುಮಾರ್‌, ಹನುಮಂತರಾಜು, ನಿವೃತ್ತ ಪ್ರಾಂಶುಪಾಲ ಎಂ.ಅಂಜನೇಯ, ಗೋವಿಂದರಾಜು, ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್‌ ಬಸವರಾಜು, ರವೀಶ್‌, ಲಕ್ಷ್ಮೀಶ್‌ ಮತ್ತಿತರರು ಉಪಸ್ಥಿತರಿದ್ದರು. 

9  ಹೊಸ ವಿಶ್ವವಿದ್ಯಾಲಯ ಸ್ಥಾಪನೆ

ಬೆಂಗಳೂರು (ಮಾ.29)  ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಅಡಗಿದೆ. ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳು, ಯುವಜನರ ಭವಿಷ್ಯವನ್ನು ಉತ್ತಮವಾಗಿ ರೂಪಿಸಿದರೆ ದೇಶದ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavarj bommai) ಹೇಳಿದರು.

ಉನ್ನತ ಶಿಕ್ಷಣ ಇಲಾಖೆಯು ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಗೊಂದು ವಿಶ್ವವಿದ್ಯಾಲಯ ಮಾದರಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿರುವ ಒಂಬತ್ತು ಹೊಸ ವಿಶ್ವವಿದ್ಯಾಲಯಗಳನ್ನು ವರ್ಚುವಲ್ಲಾಗಿ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಕೃತಿ ವಿವಿಯಲ್ಲಿ ಕಾಶ್ಮೀರದ ಮುಸ್ಲಿಂ ವಿದ್ಯಾರ್ಥಿಗಳ ನಮಾಜ್: ವಿಡಿಯೋ ವೈರಲ್

ದೇಶದಲ್ಲೇ ಪ್ರಥಮ:

ನಮ್ಮ ಸರ್ಕಾರ ಎಲ್ಲ ವರ್ಷಗಳ ಬಜೆಟ್‌ನಲ್ಲೂ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆಗಬೇಕು. ಜಿಲ್ಲೆಗೊಂದು ವಿವಿ ಮಾದರಿಯ ವಿಶ್ವವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ನಮ್ಮ ರಾಜ್ಯದಲ್ಲಿ ಪ್ರಾರಂಭವಾಗಿವೆ. ಈ ವಿಚಾರದಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಲಿದೆ. ಅಲ್ಲದೆ, ದೇಶದಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ಶಿಕ್ಷಣ ಅಂದರೆ ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಎನ್ನುವ ಮಾತಿದೆ.

ಐಟಿ ಮಾದರಿ 7 ಕೆಐಟಿ:

ಐಐಟಿಗಳಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗದ ನಮ್ಮ ರಾಜ್ಯದ ಮಕ್ಕಳಿಗೆ ಅಷ್ಟೇ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಬೆಂಗಳೂರಿನ ಎಸ್‌ಕೆಎಸ್‌ಜೆಐಟಿ ಕಾಲೇಜು ಸೇರಿದಂತೆ ವಿವಿಧ ಜಿಲ್ಲೆಗಳ ಏಳು ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ(ಕೆಐಟಿ)ಗಳಾಗಿ ಮೇಲ್ಜರ್ಜೆಗೇರಿಸಲಾಗುತ್ತಿದೆ. ಮುಂದಿನ ಐದು ವರ್ಷಗಳಲ್ಲಿ ಈ ಕಾಲೇಜುಗಳು ಐಐಟಿ ಮಾದರಿಯಲ್ಲಿ ಬೆಳೆಯಲಿವೆ. ಈ ನಿಟ್ಟಿನಲ್ಲಿ ಈಗಾಗಲೇ ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದರು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ಕಳೆದ ನಾಲ್ಕು ವರ್ಷಗಳಲ್ಲಿ ನಮ್ಮ ಸರ್ಕಾರ 25 ವಿವಿಗಳನ್ನು ಸ್ಥಾಪಿಸಿದೆ ಎಂದರು.

ಜತೆಗೆ ಡಿಜಿಟಲೀಕರಣದ ಮೂಲಕ ಆಮೂಲಾಗ್ರ ಬದಲಾವಣೆ ತಂದಿದೆ. ಇದರ ಫಲವಾಗಿ 310 ಸರ್ಕಾರಿ ಪದವಿ ಕಾಲೇಜುಗಳು ಇದೇ ಮೊದಲ ಬಾರಿಗೆ ನ್ಯಾಕ್‌ ಮಾನ್ಯತೆ ಪಡೆದಿವೆ ಎಂದರು. ಕಾರ್ಯಕ್ರಮದಲ್ಲಿ ಬೃಹತ್‌ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌ ಉಪಸ್ಥಿತರಿದ್ದರು.

click me!