ಚಿತ್ರದುರ್ಗದ ಮುರುಘ ಮಠಾಧೀಶರಾದ ಶಿವಮೂರ್ತಿ ಮುರುಘಾ ಶರಣರ ಮೇಲಿನ ಆರೋಪದ ಹಿಂದೆ ಅತಿ ದೊಡ್ಡ ಷಡ್ಯಂತ್ರವಿದ್ದು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ಆಗ್ರಹಿಸಿದರು.
ಕೆ.ಆರ್. ನಗರ (ಆ.29): ಚಿತ್ರದುರ್ಗದ ಮುರುಘ ಮಠಾಧೀಶರಾದ ಶಿವಮೂರ್ತಿ ಮುರುಘಾ ಶರಣರ ಮೇಲಿನ ಆರೋಪದ ಹಿಂದೆ ಅತಿ ದೊಡ್ಡ ಷಡ್ಯಂತ್ರವಿದ್ದು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ಆಗ್ರಹಿಸಿದರು. ಘಟನೆಯ ಹಿಂದೆ ಮಠದ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಮತ್ತು ಆತನ ಪತ್ನಿ ಸೌಭಾಗ್ಯ ಬಸವರಾಜನ್ ಅವರ ಕೈವಾಡವಿದ್ದು ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಈ ಪ್ರಕರಣದಲ್ಲಿ ಅಮಾಯಕ ಹೆಣ್ಣು ಮಕ್ಕಳನ್ನು ಪ್ರಚೋದಿಸಿ ಹಣದ ಆಮಿಷ ತೋರಿಸಿ ಈ ಕೃತ್ಯ ಎಸಗಿದ್ದು ಇದರಿಂದ ಶತ ಶತಮಾನಗಳಿಂದ ಬಸವಾದಿ ಶರಣರ ಭಕ್ತಿ ಕೇಂದ್ರವಾಗಿದ್ದ ಪವಿತ್ರ ಮಠಕ್ಕೆ ಬೆಂಕಿ ಇಡುವ ಕೆಲಸ ಮಾಡಿದ್ದಾರೆ. ಇವರಿಗೆ ತಕ್ಕ ಶಿಕ್ಷೆಯಾಗಬೇಕು. ನಾಡಿನ ಜನರ ನೆಮ್ಮದಿ ಕೆಡಿಸಿ ಮಠದ ಭಕ್ತರ ಭಾವನೆಗೆ ಧಕ್ಕೆ ತಂದಿರುವ ಬಸವರಾಜ ದಂಪತಿಗಳನ್ನು ಕೂಡಲೇ ಪೊಲೀಸ್ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿ ಅವರಿಂದ ಸತ್ಯ ನುಡಿಸಿ ಸ್ವಾಮೀಜಿಗಳ ಗೌರವಕ್ಕೆ ಧಕ್ಕೆ ಆಗಿರುವುದನ್ನು ತಡೆ ಹಿಡಿಯಬೇಕು ಎಂದು ಅವರು ಕೋರಿದರು.
ಮೈಸೂರು ಅರಮನೆಯ ಫಿರಂಗಿ ಗಾಡಿಗಳಿಗೆ ಪೂಜೆ, ದಸರಾ ಮಹೋತ್ಸವಕ್ಕೆ ಸಾಂಕೇತಿಕ ಚಾಲನೆ
ಪ್ರಕರಣದ ಸಂಬಂಧ ಮೈಸೂರು ಪೊಲೀಸ್ ಠಾಣೆಗೆ ದೂರು ನೀಡಿರುವ ಬಾಲಕಿಯರು ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದರು. ಅನಗತ್ಯವಾಗಿ ಪೊಲೀಸರು ಪ್ರಥಮ ಮಾಹಿತಿ ವರದಿ ದಾಖಲಿಸಿದ್ದು ಅವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಅತ್ಯಾಚಾರ ಪ್ರಕರಣಕ್ಕೆ ಸೂಕ್ತ ದಾಖಲೆ ಇಲ್ಲದೆ ಚಿತ್ರದುರ್ಗ ಪ್ರಕರಣವನ್ನು ಮೈಸೂರಿನಲ್ಲಿ ದೂರು ದಾಖಲು ಮಾಡಿಕೊಳ್ಳುವುದು ಎಷ್ಟುಸರಿ? ಇದು ಶ್ರೀಗಳ ಹೆಸರಿಗೆ ಕಳಂಕ ತರುವ ಕೆಲಸ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ದಲಿತರು, ನೊಂದವರು, ಸೂಕ್ಷ್ಮಾತಿಸೂಕ್ಷ್ಮ ಸಮಾಜ ಮತ್ತು ಕಾಯಕ ಜೀವಿಗಳಿಗೆ ಮಾರ್ಗದರ್ಶನ ಮಾಡುತ್ತಿರುವ ಶರಣರು ತಪ್ಪಿತಸ್ಥರಲ್ಲ ಎಂದು ಸಮರ್ಥಿಸಿಕೊಂಡ ಕೆ.ಸಿ. ಪುಟ್ಟಸಿದ್ದಶೆಟ್ಟಿಶಿವಮೂರ್ತಿ ಶರಣರ ಮೇಲೆ ಬಂದಿರುವ ಆರೋಪ 21ನೇ ಶತಮಾನದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಕೂಡಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ನಾನು ಶ್ರೀಗಳ ಜೊತೆ ಮಾತುಕತೆ ನಡೆಸಿ ನಾವು ನಿಮ್ಮ ಜೊತೆಗಿದ್ದೇವೆ ಎಂದು ಬೆಂಬಲ ಸೂಚಿಸಿರುವುದಾಗಿ ಅವರು ಹೇಳಿದರು.
ಮನಸ್ತಾಪ ಏಕಾಯ್ತು ಎಂಬ ಬಗ್ಗೆ ದೇವೇಗೌಡರೊಂದಿಗೆ ಚರ್ಚೆ: ಜಿಟಿಡಿ
ಮತ್ತೋರ್ವ ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಕೆ. ಚಿನ್ನಸ್ವಾಮಿ ಮಾತನಾಡಿ, ಮುರುಘಾ ಶ್ರೀಗಳ ವಿರುದ್ಧ ಇಂತಹ ಆರೋಪ ಮಾಡಿರುವುದು ಅತ್ಯಂತ ಹೇಯಕರ. ಸಮಾಜದ ಉದ್ಧಾರಕ್ಕೆ ದುಡಿಯುತ್ತಿರುವ ಇಂತವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅಪಮಾನ ಎಂದರು. ಸುದ್ದಿಗೋಷ್ಠಿಯಲ್ಲಿ ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ತಾಲೂಕು ಬಲಿಜ ಸಮಾಜದ ಅಧ್ಯಕ್ಷ ಟಿ.ಎನ್. ದಯಾನಂದ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಎಚ್.ಬಿ. ಸಂಪತ್ ಇದ್ದರು.