ವಿಶ್ವಗುರು ಬಸವಣ್ಣ ತತ್ವ ಮನೆ-ಮನೆ ಮುಟ್ಟಿಸೋಣ: ಶಾಸಕ ಅಜಯ್‌ ಸಿಂಗ್‌

By Kannadaprabha News  |  First Published Feb 18, 2024, 11:30 PM IST

ರಾಜ್ಯ ಸರ್ಕಾರ ಬಸವಣ್ಣನವರು ಸಾಂಸ್ಕೃತಿಕ ನಾಯಕ ಎಂಬುದಾಗಿ ಘೋಷಣೆ ಮಾಡಿರುವುದು ಇಡಿ ಕರುನಾಡು ಹೆಮ್ಮೆ ಪಡುವಂತಾಗಿದೆ ಎಂದರಲ್ಲದೆ, ನಾವೆಲ್ಲರೂ ಬಸವ ತತ್ವ ಮನೆ-ಮನೆ ಮುಟ್ಟಿಸೋಣ ಎಂದು ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ.ಅಜಯ್‌ ಸಿಂಗ್‌ ಕರೆ ನೀಡಿದರು. 


ಜೇವರ್ಗಿ (ಫೆ.18): ರಾಜ್ಯ ಸರ್ಕಾರ ಬಸವಣ್ಣನವರು ಸಾಂಸ್ಕೃತಿಕ ನಾಯಕ ಎಂಬುದಾಗಿ ಘೋಷಣೆ ಮಾಡಿರುವುದು ಇಡಿ ಕರುನಾಡು ಹೆಮ್ಮೆ ಪಡುವಂತಾಗಿದೆ ಎಂದರಲ್ಲದೆ, ನಾವೆಲ್ಲರೂ ಬಸವ ತತ್ವ ಮನೆ-ಮನೆ ಮುಟ್ಟಿಸೋಣ ಎಂದು ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ.ಅಜಯ್‌ ಸಿಂಗ್‌ ಕರೆ ನೀಡಿದರು. ಜೇವರ್ಗಿಯಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ ಸಮಾರಂಭದಲ್ಲಿ ವಿಶ್ವ ಗುರುಬಸವಣ್ಣ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಮಾಡಿ ಮಾತನಾಡಿದ ಅವರು, ಜಗಜ್ಯೋತಿ ಬಸವಣ್ಣನವರು ಯಾವುದೇ ಜಾತಿ ಹಾಗೂ ವರ್ಗಕ್ಕೆ ಸಿಮೀತವಾಗಿಲ್ಲ.

ಸಮಾನತೆಯ. ಕಾಯಕ, ತತ್ವ ಮೂಲಕ ಬಸವಣ್ಣನವರು ತೋರಿಸಿ ಕೊಟ್ಟಿರುವ ಸಿದ್ಧಾಂತ ವ್ಯಾಪಕ ಪ್ರಚಾರಗೊಳಿಸಲು ನಾವೆಲ್ಲರು ಇಂದು ಕೆಲಸ ಮಾಡಬೇಕಾಗಿದೆ. ಬಸವಣ್ಣನವರ ವಚನ ಸಾಹಿತ್ಯ ಅಧಾರದ ಮೇಲೆ ಸಂವಿಧಾನ ರೂಪುಗೊಂಡಿರುವುದನ್ನು ನಾವು ಕಾಣಬಹುದಾಗಿದೆ ಎಂದು ಡಾ. ಅಜಯ್‌ ಸಿಂಗ್‌ ಹೇಳಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್‌ ಮಲ್ಲಮ್ಣ ಯಲಗೋಡ್‌, ಡಾ. ಸಿದ್ದು ಪಾಟೀಲ್‌, ಜೇವರ್ಗಿ ತಾಪಂ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಮುಖಂಡರಾದ ರಾಜಶೇಖರ ಸಿರಿ, ಗುರುಲಿಂಗಪ್ಪಗೌಡ ಪಾಟೀಲ್‌ ಆಂದೋಲಾ, ಎಸ್ಕೆ ಬಿರಾದಾರ್‌, ನೀಲಕಂಠ ಆವಟಿ, ರವಿ ಕೋಳಕೂರ್‌, ಚನ್ನಮಲ್ಲಯ್ಯ ಹಿರೇಮಠ ಸೇರಿದಂತೆ ಅನೇಕರಿದ್ದರು.

Latest Videos

undefined

ಸುಪ್ರೀಂಕೋರ್ಟ್ ಹೇಳಿದ ಜಾಗದಲ್ಲಿ 'ರಾಮಮಂದಿರ' ಕಟ್ಟಿಲ್ಲ: ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ

ಕೆಕೆಆರ್‌ಡಿಬಿ ನಿಯಮಗಳಲ್ಲಿ ಸರಳೀಕರಣ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳ ಅನುಷ್ಠಾನಕ್ಕೆ ವೇಗ ನೀಡುವ ಉದ್ದೇಶದಿಂದ ಮಂಡಳಿಯ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಅವರು ಹಲವು ಸರಳಿಕರಣ ಕ್ರಮಗಳನ್ನು ಘೋಷಿಸಿದ್ದಾರೆ. ಡಾ. ಅಜಯ್‌ ಸಿಂಗ್‌ ಕೆಕೆಆರ್‌ಡಿಬಿ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಶುಕ್ರವಾರ ಕೆಕೆಆರ್‌ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಿರುವ ಸುತ್ತು ಬಳಸುವ ನಿಯಮಗಳನ್ನೆಲ್ಲ ಹೆಕ್ಕಿ ತೆಗೆದು ಸರಳ ಮಾಡಲಾಗುತ್ತಿದೆ. 

ಇದರಿಂದ ಕಾಮಗಾರಿ ಕ್ರಿಯಾ ಯೋಜನೆಗಳಿಗೆ ಬೇಗ ಅನುಮೋದನೆ, ಅವುಗಳ ಅನುಷ್ಠಾನಕ್ಕೆ ಅನುಕೂಲವಾಗಲಿದೆ. ಇಂತಹ ಸರಳೀಕರಣ ಕ್ರಮವೂ ಇದೇ ಮೊದಲ ಬಾರಿಗೆ ಚಿಂತಿಸಿ ಜಾರಿಗೆ ತರಲಾಗುತ್ತಿದೆ ಎಂದರು. ಬಳ್ಳಾರಿ ಜಿಲ್ಲೆಯಲ್ಲಿ 2020- 21 ನೇ ಸಾಲಿನಲ್ಲಿ ಕಾಮಗಾರಿಗಳು ನನೆಗುದಿಗೆ ಬಿದ್ದಿರೋದು ಗಮನಕ್ಕೆ ಬಂದಿದೆ. ತಕ್ಷಣ ಕಾಮಗಾರಿಗಳು ಮುಗಿಸದೆ ಹೋದಲ್ಲಿ ಅವನ್ನೆಲ್ಲ ವಾಪಸ್‌ ಪಡೆಯೋದಾಗಿ ಹೇಳಿದರು. ಗಡವಿನೊಳಗೆ ಆಗದೆ ಹೋದರೆ ಅನುಷ್ಠಾನಾಧಿಕಾರಿಗಳು, ಸಂಬಂಧಪಟ್ಟಂತಹ ಏಜೆನ್ಸಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚಿಸಿದರು.

ಕೆರೆ ಒತ್ತುವರಿಯಲ್ಲಿ ಶಾಸಕ ಮಂಜು ಆರೋಪ ಸತ್ಯಕ್ಕೆ ದೂರ: ಎ.ಟಿ.ರಾಮಸ್ವಾಮಿ

2.50 ಕೋಟಿ ರು.ಗೆ ಮೇಲ್ಪಟ್ಟು ಇರುವ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಮಾತ್ರ ಕೆಕೆಆರ್‌ಡಿಬಿಗೆ ಕಡತ ಕಳುಹಿಸಬೇಕು. ಕಾಮಗಾರಿ ಅಂದಾಜನ್ನು ಮತ್ತೆ ನಾವು ಮರು ತಪಾಸಣೆ ಮಾಡೋದನ್ನ ತಕ್ಷಣದಿಂದಲೇ ಕೈಬಿಡುತ್ತೇವೆ. ಇಷ್ಟೇ ಅಲ್ಲದೆ ಕಾಮಗಾರಿಯ ಏಜೆನ್ಸಿ ಬದಲಾವಣೆ, ಕಾಮಗಾರಿ ಬದಲಾಣೆ ಯಾವುದೇ ಇದ್ದರೂ ಮೊದಲೆಲ್ಲಾ ಕೆಕೆಆರ್‌ಡಿಬಿಗೆ ಬರಬೇಕಿತ್ತು. ಅದರೀಗ ಈ ಅಧಿಕಾರ ಆಯಾ ಜಿಲ್ಲೆಗಳ ಡಿಸಿ, ಸಿಇಒಗಳಿಗೇ ನೀಡಲಾಗಿದೆ. ತಕ್ಷಣ ಇಂತಹ ಬದಲಾವಣೆಗಳಿದ್ದಲ್ಲಿ ಮಾಡಿ ನಮ್ಮ ಧೃಢೀಕರಣಕ್ಕೆ ಮಾತ್ರ ಮಾಹಿತಿ ನೀಡಿರಿ, ಅದನ್ನು ನಾವು ನಮ್ಮ ಆನ್‌ಲೈನ್‌ನಲ್ಲಿ ಅಪಲೋಡ್‌ ಮಾಡುತ್ತೇವೆಂದು ಅಧಿಕಾರಿಗಳಿಗೆ ಸರಳೀಕರಣವಾಗುತ್ತಿರುವ ನಿಯಮಗಳ ಬಗ್ಗೆ ಹೇಳಿದರು.

click me!