ಪೊಲೀಸ್ ಸಬ್ ಇನ್ಸಪೆಕ್ಟರ್ ಹುದ್ದೆ ನೇಮಕಾತಿ ಸಂದರ್ಭದಲ್ಲಿ ಅನುಸರಿಸುವ ವಿಧಾನದಲ್ಲಿರುವ ಗೊಂದಲ ಸರಿಪಡಿಸುವಂತೆ ನೇಮಕಾತಿ ವಿಭಾಗದ ಡೆಪ್ಯುಟಿ ಇನ್ಸಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಕಲಬುರಗಿ (ಜೂ.02): ಪೊಲೀಸ್ ಸಬ್ ಇನ್ಸಪೆಕ್ಟರ್ ಹುದ್ದೆ ನೇಮಕಾತಿ ಸಂದರ್ಭದಲ್ಲಿ ಅನುಸರಿಸುವ ವಿಧಾನದಲ್ಲಿರುವ ಗೊಂದಲ ಸರಿಪಡಿಸುವಂತೆ ನೇಮಕಾತಿ ವಿಭಾಗದ ಡೆಪ್ಯುಟಿ ಇನ್ಸಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶದ 371ಜೆ ಮೀಸಲಾತಿ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ಕಾಲಕಾಲಕ್ಕೆ ಸ್ಪಷ್ಟ ನಿರ್ದೇಶನ ನೀಡುತ್ತಿದೆ. ಪ್ರಸ್ತುತ ದಿನಾಂಕ: 01.02.2023ರ ಸುತ್ತೋಲೆಯಲ್ಲಿರುವ ಮಾರ್ಗಸೂಚಿಗಳು ಚಾಲ್ತಿಯಲ್ಲಿರುತ್ತವೆ.
ಅದರಂತೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಪಟ್ಟಿ ತಯಾರಿಸುವಾಗ ಅನುಸರಿಸುವ ವಿಧಾನವನ್ನು ಸೂಚಿಸಿದ್ದು ತಮ್ಮ ಪ್ರಾಧಿಕಾರವು ಪಾಲನೆ ಮಾಡದಿರುವುದು ಕಂಡುಬರುತ್ತಿದೆ. ಪೊಲೀಸ್ ಸಬ್ ಇನ್ಸಪೆಕ್ಟರ್ (ಸಿವಿಲ್- 545) ಹುದ್ದೆಗಳ ನೇಮಕಾತಿಗೆ ಮರುಪರೀಕ್ಷೆ ನಡೆಸಲಾಗಿದ್ದು, ಸದರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸುವ ಮುಂಚೆ 371(ಜೆ) ಮೀಸಲಾತಿ ಕೋರಿರುವ ಕಕ ಪ್ರದೇಶದ ಅಭ್ಯರ್ಥಿಗಳನ್ನು ಸರ್ಕಾರ ಪ್ರಸ್ತುತ ಜಾರಿಯಲ್ಲಿರುವ ದಿನಾಂಕ: 01.02.2023ರ ಸುತ್ತೋಲೆ ಕಡ್ಡಾಯವಾಗಿ ಅನುಸರಿಸಿ ಗೊಂದಲಕ್ಕೆ ಆಸ್ಪದ ನೀಡದಂತೆ ಗಮನಹರಿಸಬೇಕು.
undefined
ಕಾಂಗ್ರೆಸ್ ಪಕ್ಷದಲ್ಲಿ 100 ಪರ್ಸೆಂಟ್ ಭ್ರಷ್ಟಾಚಾರ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಈ ನೇಮಕಾತಿ ಅಧಿಸೂಚನೆಯು 371(ಜೆ) ಅನುಷ್ಠಾನದ ಸಂದರ್ಭದಲ್ಲಿ ಕಕ ಪ್ರದೇಶದ ಅಭ್ಯರ್ಥಿಗಳನ್ನು ಯಾವ ಸುತ್ತೋಲೆಯಂತೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ನಮೂದಿಸಿಲ್ಲವಾದ್ದರಿಂದ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿರುತ್ತದೆ. ಆದ್ದರಿಂದ ಈ ಮೇಲಿನ ನೇಮಕಾತಿ ಅಧಿಸೂಚನೆಯಲ್ಲಿ 371(ಜೆ) ಮೀಸಲಾತಿ ಕೋರಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳನ್ನು ಸರ್ಕಾರದ ಪ್ರಸ್ತುತ ಜಾರಿಯಲ್ಲಿರುವ ದಿನಾಂಕ 01.02.2023ರ ಸುತ್ತೋಲೆ ಕಡ್ಡಾಯವಾಗಿ ಅನುಸರಿಸಬೇಕು ಎಂದು ಸಚಿವರು ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.