ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ತನ್ನ ವರದಿ ನೀಡಿದೆ. ಜ. 17ರಂದು ಬಿಎಂಆರ್‌ಸಿಎಲ್ ಬೋರ್ಡ್ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ. ಎಷ್ಟು ಶೇ. ದರ ಹೆಚ್ಚಿಸಬೇಕು, ಸಾಧಕ, ಬಾಧಕಗ ಳೇನು ಎಂಬ ಸಮಾಲೋಚನೆ ಆಗಲಿದೆ: ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್
ಬೆಂಗಳೂರು(ಜ.05): ಬಸ್ ಟಿಕೆಟ್ ದರ ಶೇ.15ರಷ್ಟು ಏರಿಕೆಯಾದ ಬೆನ್ನಲ್ಲೇ ಇದೀಗ ಪ್ರಯಾಣ ದರವೂ ಶೇ.15-20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಜ.17ಕ್ಕೆ ನಿಗದಿಯಾದ ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್‌ಲ್) ಮಂಡಳಿ ಸಭೆಯಲ್ಲಿ ದರ ಪರಿಷ್ಕರಣೆ ಸಮಿತಿ ಸಲ್ಲಿಸಿರುವ ಅಂತಿಮ ವರದಿ ಕುರಿತು ಸಮಾಲೋಚನೆ ಆಗಲಿದ್ದು, ಅಂತಿಮವಾಗಿ ಸರ್ಕಾರ ನಿರ್ಧರಿಸಲಿದೆ.
2017ರ ಜೂನ್ 18ರಂದು ಕೊನೆಯ ಬಾರಿಗೆ ನಮ್ಮ ಮೆಟ್ರೋ ಪ್ರಯಾಣ ದರವನ್ನು (ಶೇ. 10- 15ರಷ್ಟು) ಏರಿಸಿತ್ತು. ಪ್ರಸ್ತುತ ರಾಜಧಾನಿಯಲ್ಲಿ 76.95 ಕಿಮೀ ಸೇವೆ ಸಲ್ಲಿಸುತ್ತಿರುವ ನಮ್ಮ ಮೆರ್ಟ್ರೋ ಪ್ರಯಾಣಿಕರ ದರವನ್ನು ಏಳೂವರೆ ವರ್ಷಗಳಿಂದ ಏರಿಕೆ ಮಾಡಿಲ್ಲ, ದರ ಪರಿಷ್ಕರಣೆ ಸಮಿತಿಯು ಈಚೆಗೆ ಬಿಎಂಆರ್‌ಸಿಲ್‌ಗೆ ನೀಡಿರುವ ತನ್ನ ಅಂತಿಮ ವರದಿ ಬಗ್ಗೆ ಮಂಡಳಿ ಸಭೆಯಲ್ಲಿ ಸಮಾಲೋಚಿಸಲಿದ್ದೇವೆ. ಬಳಿಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಅಲ್ಲಿಯೂ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದರು.
ಮೆಟ್ರೋ ಯೆಲ್ಲೋ ಲೈನ್ ವಿಳಂಬದ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್, ಅಪ್‌ಡೇಟ್ ನೀಡಿದ BMRCL!
ಮದ್ರಾಸ್ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್.ಥಾರಣಿ, ರಾಜ್ಯದ ಗೃಹ, ನಗರ ವ್ಯವಹಾರ ಇಲಾಖೆ ಸತ್ಯೇಂದ್ರ ಪಾಲ್ ಸಿಂಗ್ ಹಾಗೂ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ ಅವರ ತಂಡವನ್ನು ದರ ಪರಿಷ್ಕರಣೆಗಾಗಿ ಬಿಎಂಆರ್‌ಸಿಎಲ್ ರಚಿಸಿತ್ತು. ಸಮಿತಿ ಸದಸ್ಯರು ಸಿಂಗಾಪುರ, ಹಾಂಕಾಂಗ್, ದೆಹಲಿಗೆ ತೆರಳಿ ಅಲ್ಲಿನ ಮೆಟ್ರೋದರ ಪರಿಷ್ಕರಣೆ ಕ್ರಮ, ದರ ಹೆಚ್ಚಳವನ್ನು ಅಧ್ಯಯನ ಮಾಡಿಕೊಂಡು ಬಂದಿದ್ದಾರೆ.
ಸಿಂಗಾಪುರದಲ್ಲಿ ಮೆಟ್ರೋ ಸರ್ಕಾರದ್ದೇ ಆದರೂ ಅದನ್ನು ಖಾಸಗೀಯವರು ನಿರ್ವಹಣೆ ಮಾಡುತ್ತಿದ್ದು, ಆಟೋಮೆಟಿಕ್ ವಾರ್ಷಿಕ ದರ ಪರಿಷ್ಕರಣೆ ಪದ್ಧತೆ ಅಳವಡಿಸಿಕೊಳ್ಳಲಾಗಿದೆ. ಆದರೆ, ಇದನ್ನು ನಮ್ಮಲ್ಲಿ ಅನುಷ್ಠಾನಕ್ಕೆ ತರುವುದು ಕಷ್ಟ, ದೆಹಲಿ ಮೆಟ್ರೋದಲ್ಲಿ ಅನುಸರಿಸಲಾಗುತ್ತಿರುವ ದರ ಪರಿಷ್ಕರಣೆಯನ್ನು ನಾವು ಇಲ್ಲಿ ಜಾರಿಗೊಳಿಸಿಕೊಳ್ಳಬಹುದು ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರೋ ದರ ಪರಿಷ್ಕರಣೆಯನ್ನು ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ, ಸೆಕ್ಷನ್ 33 ಮತ್ತು 34ರ ಅಡಿಯಲ್ಲಿ ಕೇಂದ್ರ ಸರ್ಕಾರವು ರಚಿಸಿದ ದರ ನಿಗದಿ ಸಮಿತಿಯು ನಿರ್ವಹಿಸುತ್ತಿದೆ. ಪ್ರಸ್ತುತ, ದರಗಳು ಒಂದು ನಿಲ್ದಾಣದಿಂದ ಮತ್ತೊಂದು ನಿಲ್ದಾಣಕ್ಕೆ ಕನಿಷ್ಠ ದರ 10, ಗರಿಷ್ಠ ದರ 60 ವರೆಗೆ ಇದೆ. ಜತೆಗೆ, ಸ್ಟಾರ್ಟ್ ಕಾರ್ಡ್ ಗಳು ಮತ್ತು ಕ್ಯೂಆರ್‌ಕೋಡ್ ಟಿಕೆಟ್ ಬಳಸುವ ಪ್ರಯಾಣಿಕರಿಗೆ ಶೇ.5 ರಿಯಾಯಿತಿ ನೀಡಲಾಗುತ್ತದೆ.
15% ರಿಂದ 20% ದರ ಏರಿಕೆ ಅನಿವಾರ್ಯ
ನಮ್ಮ ಮೆಟ್ರೋ ರೈಲು ಮುಂದಿನ ಐದು ವರ್ಷದಲ್ಲಿ 220 ಕಿಮೀ ನಷ್ಟು ವಿಸ್ತರಣೆ ಮಾಡಲು ಈಗಾಗಲೇ ಯೋಜನೆ ಸಿದ್ಧವಾಗಿದೆ. ಕಾಮಗಾರಿಯೂ ನಡೆಯುತ್ತಿದೆ. ಮೆಟ್ರೋ ಕಾಮಗಾರಿಗಾಗಿ ವಿವಿಧ ಬ್ಯಾಂಕ್, ಏಜೆನ್ಸಿಗಳಿಗೆ ಪಾವತಿಸಬೇಕಾದ ಸಾಲದೆ ಮೇಲಿನ ಬಡ್ಡಿ, ಪ್ರಸ್ತುತ ರೈಲುಗಳ ಕಾರ್ಯಾ ಚಿರಣೆ ವೆಚ್ಚ, ನಿರ್ವಹಣೆ ಮತ್ತು ಸಿಬ್ಬಂದಿ ದೇಶನ ಮತ್ತಿತರ ವಿವಿಧ ವೆಚ್ಚ ಪ್ರತಿ ವರ್ಷ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಶೇ. 15-20 ರಷ್ಟು ದರ ಏರಿಕೆ ಅನಿವಾರ್ಯವಾಗಿದೆ. ಆದರೆ, ಈಗಲೇ ಎಷ್ಟು ಏರಿಕೆಯಾಗಲಿದೆ ಎಂದು ಹೇಳುವುದು ಕಷ್ಟವೆಂದು ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ.
ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ತನ್ನ ವರದಿ ನೀಡಿದೆ. ಜ. 17ರಂದು ಬಿಎಂಆರ್‌ಸಿಎಲ್ ಬೋರ್ಡ್ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ. ಎಷ್ಟು ಶೇ. ದರ ಹೆಚ್ಚಿಸಬೇಕು, ಸಾಧಕ, ಬಾಧಕಗ ಳೇನು ಎಂಬ ಸಮಾಲೋಚನೆ ಆಗಲಿದೆ ಎಂದು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್ ತಿಳಿಸಿದ್ದಾರೆ.
ಮೆಟ್ರೋದಲ್ಲಿ ಯುವತಿಯರ ವಿಡಿಯೋ, ಫೋಟೋ ತೆಗೆಯುತ್ತಿದ್ದ ವೈದ್ಯ ಅರೆಸ್ಟ್, ಎಚ್ಚರಿಕೆ ಕೊಟ್ಟು ಕಳಿಸಿದ ಪೊಲೀಸ್!
ಬಿಎಂಟಿಸಿಯಲ್ಲಿ ಮತ್ತೆ ಚಿಲ್ಲರೆ ಸಮಸ್ಯೆ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರ ಶನಿವಾರ ಮಧ್ಯರಾತ್ರಿಯಿಂದ ಹೆಚ್ಚಳವಾಗಿದ್ದು, ಬಿಎಂಟಿಸಿಯ ಸಾಮಾನ್ಯ ಬಸ್ ದರ 1 ರು.ನಿಂದ 6 ರು.ವರೆಗೆ ಹೆಚ್ಚಳವಾಗಿದೆ. ಬಿಎಂಟಿಸಿಯಲ್ಲಿ 10 ವರ್ಷಗಳ ನಂತರ ದರ ಏರಿಕೆಯಾಗಿದ್ದು, ಈ ಹಿಂದೆ ಚಿಲ್ಲರೆ ಸಮಸ್ಯೆ ತಡೆಯಲು ರೌಂಡ್ ಅಪ್ ಪ್ರಯಾಣ ದರ ನಿಗದಿ ಮಾಡಲಾಗಿತ್ತು. ಆದರೆ, ಈಗ ಕನಿಷ್ಠ ದರ 6 ರು. ಹಾಗೂ ಗರಿಷ್ಠ 28 ರು. ನಿಗದಿ ಯಾಗಿದ್ದು, ಇದರಿಂದಾಗಿ ಚಿಲ್ಲರೆ ಸಮಸ್ಯೆ ಮತ್ತೆ ತಲೆದೋರುವ ಸಾಧ್ಯತೆಗಳಿವೆ.
ವಜ್ರ ಬಸ್‌ಗಳ ಪ್ರಯಾಣ ದರ ಶೇಕಡಾವಾರು ಲೆಕ್ಕ ಹಾಕದೆ ಎಲ್ಲ ಮಾರ್ಗಕ್ಕೂ ಒಟ್ಟಾರೆ 5 ರು. ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿ ಲ್ದಾಣಕ್ಕೆ ಸೇವೆ ನೀಡುವ ವಾಯುವಜ್ರ ಬಸ್ ಗಳ ಪ್ರಯಾಣ ದರವನ್ನು ಜಿಎಸ್‌ಟಿ ಮತ್ತು ಟೋಲ್ ದರವೂ ಸೇರಿದಂತೆ ಹಾಲಿ ಪ್ರಯಾಣ ದರಕ್ಕೆ 40 ರು. ಹೆಚ್ಚಿಸಲಾಗಿದೆ.