ಮದ್ಯ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಹೊಳೆನರಸೀಪುರ [ಅ.05]: ಇಲ್ಲಿನ ಮಹಾಗಣಪತಿ ಮಹೋತ್ಸವ ಸೇವಾ ಸಮಿತಿ ಆಚರಿಸಿಕೊಂಡು ಬಂದಿರುವ 62ನೇ ವರ್ಷದ ಗಣೇಶೋತ್ಸವದ ವಿಸರ್ಜನಾ ಮಹೋತ್ಸವವು ಅ.5 ಮತ್ತು ಅ.6ರಂದು ನಡೆಯಲಿದೆ.
ಈ ಕಾರಣದಿಂದ ಕಾನೂನು ಮತ್ತು ಸುವ್ಯವಸ್ಥೆಯ ಮುನ್ನೆಚ್ಚರಿಕೆಯ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ಎರಡು ದಿನ ಪಟ್ಟಣದ ವ್ಯಾಪ್ತಿಯಲ್ಲಿ ಸಂಪೂರ್ಣ ಪಾನನಿಷೇಧ ವಿಧಿಸಿದ್ದಾರೆ.
undefined
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಪಟ್ಟಣ ವ್ಯಾಪ್ತಿಯಲ್ಲಿನ ಎಲ್ಲ ಬಗೆಯ ಮದ್ಯ ಮಾರಾಟ ಮಾಡುವ ಎಲ್ಲ ಬಾರ್ ಮುಚ್ಚುವುದೂ ಸೇರಿದಂತೆ ಎಲ್ಲ ಬಗೆಯ ಅಮಲು ಪಾನೀಯ ಹಾಗೂ ಮದ್ಯ ಶೇಖರಣೆ, ಮಾರಾಟ ಮತ್ತು ಸರಬರಾಜು ಮಾಡುವಂತಹ ಎಲ್ಲ ಹೋಟೆಲ್‌ಗಳು ಹಾಗೂ ಡಾಬಾ ಮತ್ತು ರೆಸ್ಟೋರೆಂಟ್‌ಗಳನ್ನು ಅ.5ರ ಮಧ್ಯಾಹ್ನ 12ರಿಂದ ಅ.6ರ ಸಂಜೆ 6ರ ವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಅ.05ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;