ಕೊರೋನಾ ಸೋಂಕು ತಡೆಯಲು ಜಾರಿಯಲ್ಲಿರುವ ಲಾಕ್‌ಡೌನ್ ಅನ್ನು ಏ.20ರ ನಂತರ ಸಡಿಲಗೊಳಿಸುವುದು ಸೇರಿದಂತೆ ವೈರಾಣು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮತ್ತಷ್ಟುಕ್ರಮಗಳ ಕುರಿತು ಚರ್ಚೆ ಸಂಬಂಧ 20ರಂದೇ ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಬೆಂಗಳೂರು(ಏ.17): ಕೊರೋನಾ ಸೋಂಕು ತಡೆಯಲು ಜಾರಿಯಲ್ಲಿರುವ ಲಾಕ್‌ಡೌನ್ ಅನ್ನು ಏ.20ರ ನಂತರ ಸಡಿಲಗೊಳಿಸುವುದು ಸೇರಿದಂತೆ ವೈರಾಣು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮತ್ತಷ್ಟುಕ್ರಮಗಳ ಕುರಿತು ಚರ್ಚೆ ಸಂಬಂಧ 20ರಂದೇ ಸಚಿವ ಸಂಪುಟ ಸಭೆ ಕರೆಯಲಾಗಿದೆ.
ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮದ್ಯ ಮಾರಾಟಕ್ಕೆ ಹೆಚ್ಚಿನ ಒತ್ತಡ ಇರುವ ಕಾರಣ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ.
ಲಾಕ್‌ಡೌನ್ ಎಫೆಕ್ಟ್: ಸಿಗದ ಎಣ್ಣೆ, ಹೌದೋ ಹುಲಿಯಾ ಪೀರಪ್ಪ ಕುಡಿತ ಬಿಟ್ಟ..!
ಕೊರೋನಾ ಸೋಂಕು ನಿಯಂತ್ರಣಕ್ಕೆ ಸಿಗುತ್ತಿಲ್ಲ ಮತ್ತು ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಪ್ರಾರಂಭವಾಗುತ್ತಿದೆ. ಈ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.