Chitradurga: ಕರ್ನಾಟಕದಲ್ಲಿ ಮದ್ಯ ಮಾರಾಟಗಾರರಿಗೆ ಸಕಾಲಕ್ಕೆ ಮದ್ಯ ಸಿಗದೆ ದುಸ್ಥಿತಿ ನಿರ್ಮಾಣ!

Published : Jul 07, 2022, 01:30 PM IST
Chitradurga: ಕರ್ನಾಟಕದಲ್ಲಿ ಮದ್ಯ ಮಾರಾಟಗಾರರಿಗೆ ಸಕಾಲಕ್ಕೆ ಮದ್ಯ ಸಿಗದೆ ದುಸ್ಥಿತಿ ನಿರ್ಮಾಣ!

ಸಾರಾಂಶ

ರಾಜ್ಯ ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ಒದಗಿಸುವ ಇಲಾಖೆಗಳಲ್ಲಿ ಅಬಕಾರಿ ಇಲಾಖೆಯಡಿ ಬರುವ ಬಾರ್ & ರೆಸ್ಟೋರೆಂಟ್‌ಗಳು ಒಂದಾಗಿವೆ. ಆದರೆ ಇತ್ತೀಚೆಗೆ ಅಬಕಾರಿ ಇಲಾಖೆಯ ಇ-ಇಂಡೆಂಟಿಂಗ್ ವ್ಯವಸ್ಥೆಯಲ್ಲಿ ಸಮಸ್ಯೆ ಶುರುವಾಗಿದ್ದು ಸೂಕ್ತ ಸಮಯದಲ್ಲಿ ಮದ್ಯ ಸಿಗದೇ ಮಾರಾಟಗಾರರು ತೊಂದರೆ ಪಡುವ ಸ್ಥಿತಿ ನಿರ್ಮಾಣವಾಗಿದೆ. 

ವರದಿ: ಕಿರಣ್ಎಲ್ ತೊಡರನಾಳ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿತ್ರದುರ್ಗ

ಚಿತ್ರದುರ್ಗ (ಜು.07): ರಾಜ್ಯ ಸರ್ಕಾರಕ್ಕೆ ಅತಿ ಹೆಚ್ಚು ಆದಾಯ ಒದಗಿಸುವ ಇಲಾಖೆಗಳಲ್ಲಿ ಅಬಕಾರಿ ಇಲಾಖೆಯಡಿ ಬರುವ ಬಾರ್ & ರೆಸ್ಟೋರೆಂಟ್‌ಗಳು ಒಂದಾಗಿವೆ. ಆದರೆ ಇತ್ತೀಚೆಗೆ ಅಬಕಾರಿ ಇಲಾಖೆಯ ಇ-ಇಂಡೆಂಟಿಂಗ್ ವ್ಯವಸ್ಥೆಯಲ್ಲಿ ಸಮಸ್ಯೆ ಶುರುವಾಗಿದ್ದು ಸೂಕ್ತ ಸಮಯದಲ್ಲಿ ಮದ್ಯ ಸಿಗದೇ ಮಾರಾಟಗಾರರು ತೊಂದರೆ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಚಿತ್ರದುರ್ಗ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಫೆಡರೇಷನ್ ಆಫ್ ವೈನ್ಸ್ ಮರ್ಚೆಂಟ್ಸ್ ಅಸೋಸಿಯೇಷನ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು. 

ಈ ವೇಳೆ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಎಸ್. ಗುರುಸ್ವಾಮಿ ಇಡೀ ರಾಜ್ಯಾದ್ಯಂತ ಮದ್ಯ ಮಾರಾಟಗಾರರಿಗೆ ಸಕಾಲಕ್ಕೆ ಸೂಕ್ತ ಸಮಯದಲ್ಲಿ ಮದ್ಯ ಸಿಗದೇ ದುಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಹೊಸ ಇ-ಇಂಡೆಂಟಿಂಗ್ ಸಾಫ್ಟ್‌ವೇರ್ ಸಮಸ್ಯೆ ದಿನೇ ದಿನೇ ಉಲ್ಬಣವಾಗುತ್ತಿದ್ದು ಅನೇಕ ಬಾರ್ ಮಾಲೀಕರು ಕಷ್ಟಪಡಬೇಕಾಗಿದೆ. ಏಪ್ರಿಲ್ 4ರಿಂದ ಹೊಸ ಇ-ಇಂಡೆಂಟಿಂಗ್ ವ್ಯವಸ್ಥೆ ಜಾರಿ ಆಗಿದೆ. ಆದ್ರೆ ಈಗಲೇ ಅನೇಕ ಸಮಸ್ಯೆಗಳು ನಮಗೆ ಎದುರಾಗಿವೆ. 

Chitradurga ಜಿಲ್ಲೆಯ ಹಲವೆಡೆ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ

ಈ ಕುರಿತು ಅನೇಕ ಬಾರಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೂ ಕೂಡ ಮನವಿಯನ್ನ ನಮ್ಮ ಅಸೋಸಿಯೇಷನ್ ಕಡೆಯಿಂದ ಮನವಿ ಸಲ್ಲಿಸಲಾಗಿದೆ. ಆದರೂ ಕೂಡ ಯಾವುದೇ ರೀತಿ ಪ್ರಯೋಜನ ಆಗದೇ ಇರುವುದು ಬೇಸರದ ಸಂಗತಿ. ಈ ಮೂಲಕ ಸರ್ಕಾರಕ್ಕೆ ನಮ್ಮ ಅಸೋಸಿಯೇಷನ್ ಕಡೆಯಿಂದ ಎಚ್ಚರಿಕೆ ಕೊಡೋದು ಏನಂದ್ರೆ, ಇನ್ನ 24 ಗಂಟೆಗಳ ಒಳಗಾಗಿ ಖರೀದಿ ಸಮಸ್ಯೆಯ ವ್ಯವಸ್ಥೆಯನ್ನು ಸರಿಪಡಿಸಬೇಕು. ಅಕಸ್ಮಾತ್ ಸರ್ಕಾರ ಇದನ್ನು ಸರಿಪಡಿಸದೇ ಇದ್ದಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಿ ಬೀದಿಗಳಿದು ಹೋರಾಟ ಮಾಡ್ತೀವಿ ಎಂದು ಎಚ್ವರಿಕೆ ಕೊಟ್ಟರು. 

ರಾಜ್ಯದ ಹಲವೆಡೆ ವರುಣನ ಅರ್ಭಟ: ಚಿತ್ರದುರ್ಗದಲ್ಲಿ ಮಳೆಯಿಲ್ಲದೇ ಅನ್ನದಾತ ಕಂಗಾಲು..!

ಈ ಬಾರಿಯ ಹೋರಾಟ ಮಾತ್ರ ಯಾವುದೇ ಅಧಿಕಾರಿಗಳ ಹಾಗೂ ಸರ್ಕಾರದ ಒತ್ತಡಕ್ಕೆ ಮಣಿದು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಯಾಕಂದ್ರೆ ರಾಜ್ಯಾದ್ಯಂತ ನಮ್ಮ ಬಾರ್ ಅಸೋಸಿಯೇಷನ್ ಮಾಲೀಕರು ತುಂಬಾ ಲಾಸ್‌ನಿಂದ ಸಮಸ್ಯೆಗೆ ಸಿಲುಕಿದ್ದಾರೆ. ಇದನ್ನೆಲ್ಲಾ ಮನಗಂಡು ಸರ್ಕಾರ ಸೂಕ್ತ ಕ್ರಮ ಕೈಗೊಂಡು ಸೂಕ್ತ ವ್ಯವಸ್ಥೆಯಲ್ಲಿ ಮದ್ಯ ಸಪ್ಲೈ ಮಾಡಿದ್ರೆ ಒಳಿತು‌. ಇಲ್ಲದೇ ಇದ್ದಲ್ಲಿ ಇದೇ ಶನಿವಾರದಿಂದ ರಾಜ್ಯಾದ್ಯಂತ ಎಲ್ಲಾ ಬಾರ್‌ಗಳನ್ನು ಬಂದ್ ಮಾಡಿಯೇ ಮಾಡುತ್ತೇವೆ ಎಂದು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟರು.

PREV
Read more Articles on
click me!

Recommended Stories

ಜನರ ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್, ಚುನಾವಣೆಗೇ ಬನ್ನಿ: ಸರ್ಕಾರಕ್ಕೆ ಸಿ.ಟಿ.ರವಿ ಸವಾಲು
ಸಿದ್ದರಾಮಯ್ಯ ಆಡಳಿತ ಕೇವಲ ಟೀಕೆಯಲ್ಲಿ ಮುಳುಗಿದೆ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ