ಕೊ.ಅ.ಉಡುಪರ ಸಾಹಿತ್ಯಿಕ ಸೇವೆ ಶ್ಲಾಘನೀಯ: ಕೋಟ ಶ್ರೀನಿವಾಸ ಪೂಜಾರಿ

Published : Jul 26, 2022, 05:20 AM ISTUpdated : Jul 26, 2022, 05:25 AM IST
ಕೊ.ಅ.ಉಡುಪರ ಸಾಹಿತ್ಯಿಕ ಸೇವೆ ಶ್ಲಾಘನೀಯ: ಕೋಟ ಶ್ರೀನಿವಾಸ ಪೂಜಾರಿ

ಸಾರಾಂಶ

ದಿ. ಕೊ. ಅ. ಉಡುಪರು ಸಾಹಿತ್ಯಿಕ, ಧಾರ್ಮಿಕ, ಸಾಂಸ್ಕೃತಿಕವಾಗಿ ಬೆಳೆಸುವ ನಿಟ್ಟಿನಲ್ಲಿ ಯುಗಪುರುಷರು. ಕೊ.ಅ.ಉಡುಪರ ಸಾಹಿತ್ಯಿಕ ಸೇವೆ ಶ್ಲಾಘನೀಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಮರಿಸಿದರು

,ಮೂಲ್ಕಿ (ಜು.26) :ಕಿನ್ನಿಗೋಳಿಯಂತಹ ಗ್ರಾಮೀಣ ಪ್ರದೇಶದಲ್ಲಿ ದಿ. ಕೊ. ಅ. ಉಡುಪರು ಸಾಹಿತ್ಯಿಕ, ಧಾರ್ಮಿಕ, ಸಾಂಸ್ಕೃತಿಕವಾಗಿ ಬೆಳೆಸುವ ನಿಟ್ಟಿನಲ್ಲಿ ಯುಗಪುರುಷ ಪತ್ರಿಕೆ ಹಾಗೂ ಸಂಸ್ಥೆಯನ್ನು ಕಟ್ಟಿರಾಜ್ಯ, ರಾಷ್ಟ್ರ ಮಟ್ಟದಲ್ಲಿ ಬೆಳಸಿಕೊಂಡಿರುವುದು ಶ್ಲಾಘನೀಯ ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಭಾನುವಾರ ಜರುಗಿದ 75ನೇ ವರ್ಷಾಚರಣೆಯಲ್ಲಿರುವ ಯುಗಪುರುಷ ಸಂಸ್ಥಾಪಕ ದಿ. ಕೊ. ಅ. ಉಡುಪರ ಸಂಸ್ಮರಣ ಸಮಾರಂಭ, ಪ್ರಶಸ್ತಿ ಪ್ರದಾನ, ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

Karnataka High Court: ಗೋಗೇರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ರದ್ದು

ಶ್ರೀ ಕ್ಷೇತ್ರ ಕಟೀಲು ದೇವಸ್ಥಾನದ(Shri kateelu Temple) ಅನುವಂಶಿಕ ಅರ್ಚಕ ಕೆ. ಲಕ್ಷ್ಮಿನಾರಾಯಣ ಆಸ್ರಣ್ಣ(K.Lakshmi Narayana asranna) ಶುಭ ಹಾರೈಸಿದರು. ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು(Harikrishna punarooru) ಅವರು ಸಂಸ್ಮರಣೆ ಭಾಷಣಗೈದರು. ಬಳಿಕ ಎಂ. ವಿ. ಭಟ್‌ ರಚಿತ ಹಿಂದಿನ ಇಂದಿನ ಸಾಮಾಜಿಕ ಸ್ಥಿತಿ ಕೃತಿ, ಹಾಗೂ ರುಕ್ಮಯ ಶೆಟ್ಟಿಬಂಬಿಲ ರಚಿತ ರಂಗನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಡಾ. ವಸಂತ ಕುಮಾರ್‌ ಪೆರ್ಲ(Dr Vasanta Kumar Perla) ಅವರಿಗೆ ಕೊ. ಅ. ಉಡುಪ ಪ್ರಶಸ್ತಿ ಪ್ರದಾನ ನಡೆಯಿತು. ತೋಕೂರು ಟಿ. ಆರ್‌ ಸುಬ್ರಹ್ಮಣ್ಯ ರಾವ್‌ ಅವರಿಗೆ ವೇದ ವಿದ್ವಾಂಸರ ನೆಲೆಯಲ್ಲಿ ಗೌರವಿಸಲಾಯಿತು. ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ್‌ ಆಳ್ವ , ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್‌, ಕಿನ್ನಿಗೋಳಿ(Sudarshan Kinnigoli) ಪಟ್ಟಣ ಪಂಚಾಯಿತಿ ಮುಖ್ಯಾಧಿ​ಕಾರಿ ಸಾಯೀಶ್‌ ಚೌಟ , ಕೃತಿಕಾರರಾದ ರುಕ್ಮಯ ಶೆಟ್ಟಿಬಂಬಿಲ, ಬಿಜೆಪಿ ಜಗದೀಶ ಅಧಿ​ಕಾರಿ ಮತ್ತಿತರರು ಉಪಸ್ಥಿತರಿದ್ದರು.

ನಾಡಗೀತೆಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ಆಗ್ರಹ

ಸ್ಥಳೀಯ ಶಿಕ್ಷಣ ಸಂಸ್ಥೆಗಳ ಪ್ರತಿಭಾನ್ವಿತರಿಗೆ ವಿದ್ಯಾರ್ಥಿ ವೇತನ ವಿತರಣೆ ನಡೆಯಿತು. ಯುಗಪುರುಷ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಸ್ವಾಗತಿಸಿದರು. ಗುರುಪ್ರಸಾದ್‌ ಭಟ್‌, ಅನುಷಾ ಕರ್ಕೇರಾ ಸಮ್ಮಾನ ಪತ್ರ ವಾಚಿಸಿದರು. ಶರತ್‌ ಕಾರ್ಯಕ್ರಮ ನಿರೂಪಿಸಿದರು.

 

PREV
Read more Articles on
click me!

Recommended Stories

ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!
ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!