ಚಾಮರಾಜನಗರಕ್ಕೆ ಮೋದಿ ಬಂಪರ್ ಗಿಫ್ಟ್! 4 ರೈಲು ನಿಲ್ದಾಣಗಳಿಗೆ ಹೊಸ ರೂಪ, ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗಕ್ಕೂ ವಿದ್ಯುತ್ ಭಾಗ್ಯ!

Kannadaprabha News   | Kannada Prabha
Published : Nov 13, 2026, 10:15 AM IST
PM Modi to karnataka Visit

ಸಾರಾಂಶ

PM Narendra Modi Visit Karnataka: ಪ್ರಧಾನಿ ನರೇಂದ್ರ ಮೋದಿ ನ.13ರಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಅಮೃತ್ ಭಾರತ್ ಯೋಜನೆಯಡಿ ಚಾಮರಾಜನಗರ ಸೇರಿದಂತೆ 4 ನಿಲ್ದಾಣಗಳ ಉದ್ಘಾಟನೆ ನಡೆಯಲಿದೆ.

ಚಾಮರಾಜನಗರ: ಕರ್ನಾಟಕದಲ್ಲಿ ರೈಲ್ವೆ ಸಂಪರ್ಕ ವ್ಯವಸ್ಥೆ ಮತ್ತು ಪ್ರಯಾಣಿಕರ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ನ.13ರಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಐಐಎಂ ಸಭಾಂಗಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದು, ವಿವಿಧ ರೈಲ್ವೆ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಅಮೃತ್ ಭಾರತ್ ಸ್ಟೇಷನ್‌ ಯೋಜನೆಯಡಿ ನಾಲ್ಕು ರೈಲು ನಿಲ್ದಾಣಗಳ ಉದ್ಘಾಟನೆ

ಈ ಸಂದರ್ಭದಲ್ಲಿ ಉದ್ಘಾಟನೆಗೊಳ್ಳಲಿರುವ ಪ್ರಮುಖ ರೈಲ್ವೆ ಯೋಜನೆಗಳಲ್ಲಿ ಅಮೃತ್ ಭಾರತ್ ಸ್ಟೇಷನ್‌ ಯೋಜನೆಯಡಿ ನಾಲ್ಕು ರೈಲು ನಿಲ್ದಾಣಗಳಾದ ಚಾಮರಾಜನಗರ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಚಿಕ್ಕಮಗಳೂರು ನಿಲ್ದಾಣಗಳ ಪುನರಾಭಿವೃದ್ಧಿ ಕಾಮಗಾರಿಗಳು ಹಾಗೂ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಸೇರಿವೆ.

ಇದೇ ಸಂದರ್ಭದಲ್ಲಿ ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಮಂಗಳೂರು- ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಇದನ್ನೂ ಓದಿ: ಬೆಂಗಳೂರು, ಮೈಸೂರಲ್ಲಿ ಇಂದು ಮೋದಿ ಹವಾ! ಎಲ್ಲೆಲ್ಲಿ ಏನೇನು ಕಾರ್ಯಕ್ರಮ? ಸಮಯ, ಸ್ಥಳದ ಸಂಪೂರ್ಣ ವಿವರ ಇಲ್ಲಿದೆ

ಇದರ ಅಂಗವಾಗಿ ನ.13ರಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕದ ವಿವಿಧ ರೈಲು ನಿಲ್ದಾಣಗಳಲ್ಲಿ ಏಕಕಾಲದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಂಗಳೂರು ಜಂಕ್ಷನ್‌ನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಕೈಗೊಂಡಿರುವ ಪುನರಾಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು.

ಇದನ್ನೂ ಓದಿ: ಮೋದಿ ಕಾರ್ಯಕ್ರಮದಲ್ಲಿ ಕೃಷ್ಣ ಬೈರೇಗೌಡರ ಭಾಷಣ ಕ್ಯಾನ್ಸಲ್! ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಈ ಶಿಕ್ಷೆ, ಸಚಿವ ಅಸಮಾಧಾನ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮಾರ್ಗಮಧ್ಯೆ ಹಸಿರು ನಿಶಾನೆ ತೋರಲಾಗುವುದು. ಚಾಮರಾಜನಗರ ಮತ್ತು ಚಿಕ್ಕಮಗಳೂರು ನಿಲ್ದಾಣಗಳಲ್ಲಿ ಪುನರಾಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಗುವುದು. ಕಬಕ ಪುತ್ತೂರು ಮತ್ತು ಹಾಸನ ರೈಲು ನಿಲ್ದಾಣಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮಾರ್ಗಮಧ್ಯೆ ಹಸಿರು ನಿಶಾನೆ ತೋರಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

PREV
Read more Articles on
click me!

Recommended Stories

ಪ್ರತಿ ಟನ್‌ ಕಬ್ಬಿಗೆ ₹4200 ಘೋಷಣೆ: ಮುಧೋಳ ಕಬ್ಬು ರೈತರ ಹೋರಾಟಕ್ಕೆ ಜಯ! ಇಂದು ಹೋರಾಟಕ್ಕೆ ತೆರೆ?
ಮೋದಿ ಭೇಟಿ ನೀಡುತ್ತಿರುವ ಬೆಂಗಳೂರಿನ ಪ್ರಶಾಂತಿ ಕುಟೀರದ ವಿಶೇಷತೆ ಏನು? @ 50 ಸೀಕ್ರೆಟ್