* ಅರಣ್ಯ ಈ ದೇಶದ ಸಂಪತ್ತು , ಆ ಸಂಪತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ
* ಕಿಡಿಗೇಡಿಗಳ ಕೃತ್ಯಕ್ಕೆ ಅರಣ್ಯ ಸಂಪತ್ತು ಇತ್ತೀಚಿಗೆ ನಾಶ
* ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಣೆಗೆ ಸ್ಥಳೀಯರ ಪ್ಲಾನ್
ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು
ಚಿಕ್ಕಮಗಳೂರು(ಏ.22): ಅರಣ್ಯ ಈ ದೇಶದ ಸಂಪತ್ತು , ಆ ಸಂಪತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಆದರೆ ಕಿಡಿಗೇಡಿಗಳ ಕೃತ್ಯಕ್ಕೆ ಅರಣ್ಯ ಸಂಪತ್ತು ಇತ್ತೀಚಿಗೆ ನಾಶವಾಗುತ್ತಿದೆ. ಕಿಡಿಗೇಡಿಗಳಿಂದ ಅರಣ್ಯಕ್ಕೆ ಬೀಳುವ ಬೆಂಕಿಯಿಂದ ಅರಣ್ಯ ಸಂಪತ್ತು ನಾಶವಾಗುತ್ತದೆ . ಇದಕ್ಕಾಗಿ ಇಲಾಖೆ ಸಾಕಷ್ಟು ಕಾನೂನು,ನಿಯಮಗಳನ್ನು ಜಾರಿಗೆ ತಂದರು ನಿಯಂತ್ರಣಕ್ಕೆ ಮಾತ್ರ ಬರುತ್ತಿಲ್ಲ. ಕಾಡ್ಗಿಚ್ಚಿನ ಬಗ್ಗೆ ಅರಣ್ಯ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೂಡ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಇದರ ನಡುವೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯ ಇಲಾಖೆಗೆ ಸ್ಥಳೀಯರು ಸಾಥ್ ನೀಡಿದ್ದಾರೆ. ಅರಣ್ಯಕ್ಕೆ ಬೀಳುವ ಬೆಂಕಿಯನ್ನು ತಡೆಗಟ್ಟಲು ದೇವರ ಮೊರೆ ಹೋಗಿದ್ದಾರೆ ಸ್ಥಳೀಯರು..
undefined
ಪುರದಮ್ಮ ಕಾಯ್ತಿದ್ದಾಳೆ, ಕಾಡಿಗೆ ಬೆಂಕಿ ಹಾಕಿದರೆ ಜೀವನ ಸರ್ವನಾಶ, ಅರಣ್ಯದಲ್ಲಿ ಬ್ಯಾನರ್ ಹಾಕಿದ ಸ್ಥಳೀಯರು
ಈ ಅರಣ್ಯವನ್ನ ಪುರದಮ್ಮ ಹಾಗೂ ರೇವಣಸಿದ್ದೇಶ್ವರ ದೇವರು ಕಾಯ್ತಿದ್ದಾರೆ. ಈ ಅರಣ್ಯಕ್ಕೆ ಯಾರಾದರೂ ಬೆಂಕಿ ಹಾಕಿದರೆ ಅವರ ಜೀವನ ಸರ್ವನಾಶವಾಗಲಿದೆ ಎಂದು ಸ್ಥಳಿಯರೇ ಅರಣ್ಯ ರಕ್ಷಣೆಗೆ ಮುಂದಾಗಿ, ಅರಣ್ಯದಲ್ಲಿ ಬ್ಯಾನರ್ ಹಾಕಿರುವ ಅಪರೂಪದ ಘಟನೆಗೆ ತಾಲೂಕಿನ ಸಿಂದಿಗೆರೆ ಮೀಸಲು ಅರಣ್ಯ ವಿಭಾಗ ಸಾಕ್ಷಿಯಾಗಿದೆ. ಈಗಾಗಲೇ ಕಾಡನ್ನ ಬೆಂಕಿಯಿಂದ ರಕ್ಷಿಸಲು ಅರಣ್ಯ ಇಲಾಖೆ ಸಾಕಷ್ಟು ಕ್ರಮಗಳನ್ನ ಕೈಗೊಂಡಿದೆ.
ಜಾಗತಿಕ ತಾಪದಿಂದ ಸಮಸ್ಯೆ: ವಿಶ್ವದ ಮೊದಲ ರೋಗಿ ಪತ್ತೆ!
ಆದರೂ, ನಾನಾ ರೀತಿಯ ಮೂಢನಂಬಿಕೆಗಳಿಂದ ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಾಕುತ್ತಿದ್ದಾರೆ. ಹಾಗಾಗಿ, ಸಿಂದಿಗೆರೆ ಮೀಸಲು ಅರಣ್ಯ ವ್ಯಾಪ್ತಿಯ ದೇವಗೊಂಡನಹಳ್ಳಿ, ಕರಡಿಗವಿಮಠ, ಸಿಂದಿಗೆರೆ, ಎಸ್.ಬಿದರೆ, ಭೂಚೇನಹಳ್ಳಿ ಕಾವಲ್‍ನ ಹಲವು ಕಡೆಗಳಲ್ಲಿ ಈ ರೀತಿಯ ಬ್ಯಾನರ್ ಹಾಕಿ, ಕಿಡಿಗೇಡಿಗಳಿಗೆ ಭಯ ಹುಟ್ಟಿಸಿದ್ದಾರೆ. ಅರಣ್ಯ ಅಧಿಕಾರಿಗಳು, ಕೇಸ್‍ಗೆಲ್ಲಾ ಹೆದರದವರು ದೇವರಿಗದರೂ ಹೆದರಿ ಬೆಂಕಿ ಹಾಕುವುದನ್ನ ನಿಲ್ಲಿಸಲಿ ಎಂದು ಈ ರೀತಿಯ ಬ್ಯಾನರ್ ಹಾಕಿದ್ದಾರೆ. ಈಗಾಗಲೇ, ಅರಣ್ಯಕ್ಕೆ ಬೆಂಕಿ ಬೀಳುವುದನ್ನ ನಿಯಂತ್ರಿಸಲು ಅರಣ್ಯ ಇಲಾಖೆ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಇಲಾಖಾ ವ್ಯಾಪ್ತಿಯ ಜೊತೆ ಸಾರ್ವಜನಿಕರಿಗೆ ಜಾಗೃತಿಯನ್ನೂ ಮೂಡಿಸಿದ್ದಾರೆ. ಆದರೂ, ಕಿಡಿಗೇಡಿಗಳ ಕೃತ್ಯಕ್ಕೆ ಹಾಗೂ ಮೂಡನಂಬಿಕೆಗೆ ಅರಣ್ಯ ಬಲಿಯಾಗುತ್ತಿದೆ. ಹಾಗಾಗಿ, ಸಿಂದಿಗೆರೆ ಗ್ರಾಮದ ಜನ ಅರಣ್ಯ ರಕ್ಷಣೆ ದೇವರ ಮೊರೆ ಹೋಗಿದ್ದಾರೆ.
ಬೆಂಕಿ ನಿಯಂತ್ರಣಕ್ಕೆ ಹತ್ತು ಹಲವು ಕಾರ್ಯಕ್ರಮಗಳು ಅರಣ್ಯ ಇಲಾಖೆಯಿಂದ
ಇತ್ತೀಚೆಗೆ ಅರಣ್ಯ ಇಲಾಖೆ ಬೆಂಕಿ ಅವಘಡಗಳನ್ನ ನಿಯಂತ್ರಿಸಲು ಡ್ರೋಣ್ ಮೊರೆ ಹೋಗಿತ್ತು. ಸೂಕ್ಷ್ಮ ಪ್ರದೇಶದಲ್ಲಿ ಡ್ರೋನ್ ಹಾರಿಸಿ ಕಾಡಿಗೆ ಬೆಂಕಿ ಹಾಕುವವರ ಮೇಲೆ ನಿಗಾ ವಹಿಸಿತ್ತು. ಆದರೂ, ಸಿಂದಿಗೆರೆ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಕಿಡಿಗೇಡಿಗಳ ಕೃತ್ಯಕ್ಕೆ ಕಾಡಿಗೆ ಬೆಂಕಿ ಹಾಕುವ ಪ್ರಕರಣಗಳು ಅಲ್ಲಲ್ಲಿ ಕಂಡು ಬರುತ್ತಿದ್ದವು. ಹಾಗಾಗಿ, ಸ್ಥಳಿಯರು ಈ ಹೊಸ ದಾರಿಯ ಮೂಲಕ ಅರಣ್ಯ ರಕ್ಷಣೆ ಮುಂದಾಗಿದ್ದಾರೆ.
ಕಾಡ್ಗಿಚ್ಚಿನಿಂದ ವಿಶ್ವದ ಬೃಹತ್ ಮರ ರಕ್ಷಿಸಲು ಮರಕ್ಕೆ ಹೊದಿಕೆ!
ದೇವರ ಮೊರೆ ಪ್ಲಾನ್ ಯಶ್ವಸಿ
ಈ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಸ್ಥಳೀಯರ ಹಾಕಿದ ಈ ತಂತ್ರದಿಂದ ಈ ಭಾಗದಲ್ಲಿ ಬೆಂಕಿ ಅವಘಡ ಈ ಬಾರಿ ನಿಯಂತ್ರಣಕ್ಕೆ ಬಂದಿದೆ. ಮೇವಿನ ಕಾರಣಕ್ಕೆ ಹಾಗೂ ಇನ್ನೀತರ ಕೃತ್ಯದಿಂದ ಪ್ರತಿವರ್ಷ ಸಾಕಷ್ಟು ಬಾರಿ ಬೆಂಕಿ ಅವಘಡಗಳು ಸಂಭವಿಸುತ್ತಿದ್ದವು. ಆದರೆ ಈ ಬಾರಿ ಇದು ಸಂಪೂರ್ಣಕ್ಕೆ ಹಿಡಿತಕ್ಕೆ ಬಂದಿದ್ದು ಯಾವುದೇ ಪ್ರಕರಣ ಈ ಬಾರಿ ಕಂಡು ಬರದಿರುವುದಿಲ್ಲ ಅರಣ್ಯ ಇಲಾಖೆ ತಿಳಿಸಿದೆ.. ಒಟ್ಟಾರೆ ಸ್ಥಳೀಯರು ಮಾಡಿರುವ ಈ ಪ್ಲಾನ್ ಸಕ್ಸಸ್ ಆದಂತಾಗಿದೆ ಎಂದು ಹೇಳಬಹುದು .