ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿದೆ. ಉಭಯ ಪಕ್ಷಗಳು ಅಭ್ಯರ್ಥಿಗಳ ಪರವಾಗಿ ಭರ್ಜರಿಯಾಗಿ ಪ್ರಚಾರ ಕಾರ್ಯ ನಡೆಸುತ್ತಿದ್ದರೆ, ಇತ್ತ ಚುನಾವಣಾ ಆಯೋಗ ಮತದಾನ ಪ್ರಕ್ರಿಯೆಗೆ ಎಲ್ಲ ಸಿದ್ಧತೆಗಳನ್ನು ನಡೆಸಿದೆ. ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಧಿಕಾರಿಗಳು ಈಗಾಗಲೇ ಕರ್ತವ್ಯನಿರತರಾಗಿದ್ದಾರೆ.
ಧಾರವಾಡ (ಏ.20) : ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿದೆ. ಉಭಯ ಪಕ್ಷಗಳು ಅಭ್ಯರ್ಥಿಗಳ ಪರವಾಗಿ ಭರ್ಜರಿಯಾಗಿ ಪ್ರಚಾರ ಕಾರ್ಯ ನಡೆಸುತ್ತಿದ್ದರೆ, ಇತ್ತ ಚುನಾವಣಾ ಆಯೋಗ ಮತದಾನ ಪ್ರಕ್ರಿಯೆಗೆ ಎಲ್ಲ ಸಿದ್ಧತೆಗಳನ್ನು ನಡೆಸಿದೆ. ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಧಿಕಾರಿಗಳು ಈಗಾಗಲೇ ಕರ್ತವ್ಯನಿರತರಾಗಿದ್ದಾರೆ.
ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ ಸಂಭವಿಸಿ ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ಸೆಕ್ಟರ್ ಆಫೀಸರ್ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಕೃಷ್ಣಮೂರ್ತಿ(52) ಮೃತ ದುರ್ದೈವಿ. ಹೆಸ್ಕಾಂ ಎ ಇ ಇ ಆಗಿ ಕೆಲಸ ಮಾಡುತ್ತಿದ್ದ ಕೃಷ್ಣಮೂರ್ತಿ. ಧಾರವಾಡ ಪಶ್ಚಿಮ ಕ್ಷೇತ್ರದ ಸೆಕ್ಟರ್ ಆಫೀಸರ್ ಆಗಿ ನಿಯೋಜನೆಗೊಂಡಿದ್ದರು. ಇಂದು ಮಧ್ಯಾಹ್ನ 1 ಗಂಟೆಗೆ ಕರ್ತವ್ಯದಲ್ಲಿದ್ದ ವೇಳೆ ಹಠಾತ್ತನೆ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
undefined
ಘಟನೆ ಮಾಹಿತಿ ಪಡೆದ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ದಿವ್ಯ ಪ್ರಭು ಸಂತಾಪ ಸೂಚಿಸಿದರು.
ನೇಹಾ ಹತ್ಯೆ ಪ್ರಕರಣದಲ್ಲಿ ಮತಬ್ಯಾಂಕ್ ರಾಜಕಾರಣ; ರಾಜ್ಯಸರ್ಕಾರದ ವಿರುದ್ಧ ಜೋಶಿ ಆಕ್ರೋಶ