ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿಯಾಗಿ ಯಾವ ಪಕ್ಷಕ್ಕೆ ಮಂಡ್ಯ ಕ್ಷೇತ್ರದ ಸೀಟು ಹಂಚಿಕೆಯಾದರೂ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಹೇಳಿದರು.
ಪಾಂಡವಪುರ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿಯಾಗಿ ಯಾವ ಪಕ್ಷಕ್ಕೆ ಮಂಡ್ಯ ಕ್ಷೇತ್ರದ ಸೀಟು ಹಂಚಿಕೆಯಾದರೂ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ಮಟ್ಟದಲ್ಲಿ - ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಹಾಗಾಗಿ ಪಕ್ಷ ಎನ್ ಡಿಎ ಕೂಟಕ್ಕೆ ಸೇರ್ಪಡೆಗೊಂಡಿದೆ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡುವ ಉದ್ದೇಶದಿಂದ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲಾಗುವುದು. ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅವರು ತಿಳಿಸಿದರು.
undefined
ರಾಜ್ಯದ ಕಾಂಗ್ರೆಸ್ ಸರಕಾರ ಅಸ್ಥಿರವಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರೇ ಅಸಮಾಧಾನಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ನ ಹಲವು ಶಾಸಕರು, ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಹಿಂದೂ ವಿರೋಧಿಯಾಗಿದೆ. ಬಿಜೆಪಿ ಪಕ್ಷಕ್ಕೆ ರಾಜಕೀಯಕ್ಕಿಂತ ದೇಶವೇ ಮುಖ್ಯ. ದೇಶದ ಸಂರಕ್ಷಣೆಗಾಗಿ ಬಿಜೆಪಿ ಪಕ್ಷದಿಂದ ಸದಾ ಹೋರಾಟ ನಡೆಯಲಿದೆ. ಹಾಗಾಗಿ ಜನತೆ ದೇಶದ ರಕ್ಷಣೆಗಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಪಾಂಡವಪುರ ಪುರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪ್ರತ್ಯೇಕವಾಗಿಯೇ ಸ್ಪರ್ಧೆ ಮಾಡಿದ್ದೇವೆ. ಈ ಚುನಾವಣೆಯಲ್ಲಿ ನಮಗೆ ಜೆಡಿಎಸ್ ಎದುರಾಳಿ. ಉಪ ಚುನಾವಣೆ ಎರಡು ವಾರ್ಡ್ ಗಳಲ್ಲೂ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ನಲ್ಲಿ ಭಾರಿ ಬದಲಾವಣೆ
ನವದೆಹಲಿ (ಡಿ.23): ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ನಲ್ಲಿ ಪ್ರಮುಖ ಹುದ್ದೆಗಳ ಪುನರ್ರಚನೆ ಮಾಡಲಾಗಿದೆ. ಸಚಿನ್ ಪೈಲಟ್ ಅವರನ್ನು ಛತ್ತೀಸ್‌ಗಢದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಪ್ರಿಯಾಂಕಾ ಗಾಂಧಿ ಅವರ ಸ್ಥಾನಕ್ಕೆ ಅವರನ್ನು ನೇಮಿಸಲಾಗಿದೆ. ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದ ಉಸ್ತುವಾರಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು, ಆದರೆ ಅವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ ಮತ್ತು ಯಾವುದೇ ರಾಜ್ಯವನ್ನು ಅವರಿಗೆ ನಿಯೋಜಿಸಲಾಗಿಲ್ಲ. ಇದರಿಂದಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರ ಪಾತ್ರದ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಹಿರಿಯ ನಾಯಕ ಮುಕುಲ್ ವಾಸ್ನಿಕ್ ಅವರಿಗೆ ಗುಜರಾತ್ ಉಸ್ತುವಾರಿ ನೀಡಲಾಗಿದೆ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಕರ್ನಾಟಕ ಉಸ್ತುವಾರಿಯಾಗಿ ನೇಮಿಸಲಾಗಿದೆ. ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಜೈರಾಮ್ ರಮೇಶ್ ಅವರನ್ನು ನೇಮಕ ಮಾಡಲಾಗಿದ್ದು, ಕೆ.ಸಿ.ವೇಣುಗೋಪಾಲ್ ಅವರು ಸಂಘಟನಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ.
ಸುದ್ಧಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಡಾ.ಎನ್.ಎಸ್.ಇಂದ್ರೇಶ್, ಬಿಜೆಪಿ ತಾಲೂಕು ಅಧ್ಯಕ್ಷ ಅಶೋಕ್, ಮುಖಂಡರಾದ ಎಚ್.ಎನ್.ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಶ್ರೀಧರ್, ಸತೀಶ್, ಕಾಂತರಾಜ್, ಅಭ್ಯರ್ಥಿಗಳಾದ ಸೋಮಶೇಖರ್, ಮಧು ಸೇರಿದಂತೆ ಹಲವರು ಇದ್ದರು.