ತುಮಕೂರು ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಕಾಗದಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ : ಮಹಂತೇಶ್ ಕುಮಾರ್ ಏಷ್ಯಾನೆಟ್ ನೆಟ್ ಸುವರ್ಣ ನ್ಯೂಸ್
ತುಮಕೂರು (ಜೂ.28): ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು ಕಾಗದ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಕೃಷಿ ಇಲಾಖೆ ಜೆಡಿ ರವಿ ಮನೆ ಹಾಗೂ ಫಾರಂ ಹೌಸ್ ನಲ್ಲಿ ಮೊಕ್ಕಂ ಹೂಡಿದ್ದಾರೆ. ತುಮಕೂರು ಕೃಷಿ ಇಲಾಖೆಯಲ್ಲಿ ಜೆಡಿ ಆಗಿ ಕೆಲಸ ನಿರ್ವಹಿಸುತ್ತಿರುವ ರವಿ ಇತ್ತೀಚೆಗಷ್ಟೇ ಹಾಸನದಿಂದ ತುಮಕೂರಿಗೆ ವರ್ಗಾವಣೆಯಾಗಿದ್ದರು. ತುಮಕೂರು ನಗರದ ಶಂಕರಪುರದಲ್ಲಿ ಇರುವ ಬಾಡಿಗೆ ನಿವಾಸ ಹಾಗೂ ರಾಮನಗರದ ಫಾರಂ ಹೌಸ್ ಮೇಲೆ ದಾಳಿ ಮಾಡಿದ್ದಾರೆ. ದಾಖಲಾತಿಗಳನ್ನು ಪರಿಶೀಲಿಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ವಿಜಯಪುರ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟ ಲೋಕಾಯುಕ್ತ, 4 ಕಡೆ ದಾಳಿ
13 ಅಧಿಕಾರಿಗಳ ತಂಡದಿಂದ ದಾಖಲಾತಿ ಪರಿಶೀಲನೆ
ಬೆಳಗ್ಗೆ 6 ಗಂಟೆಗೆ ರಾಮನಗರದಿಂದ ಬಂದ 13 ಜನ ಅಧಿಕಾರಿ ತಂಡ ದಾಳಿ ನಡೆಸಿದ್ದಾರೆ. ಸುಮಾರು 10 ಹೆಚ್ಚು ಕಡೆಗಳಲ್ಲಿ ಆಸ್ತಿಗಳನ್ನ ಖರೀದಿಸಿರುವ ದಾಖಲೆಗಳು ಪತ್ತೆಯಾಗಿವೆ. ಬೆಂಗಳೂರು, ರಾಮನಗರ, ಕನಕಪುರ ಸೇರಿದಂತೆ ಸುಮಾರು 10 ಕ್ಕೂ ಹೆಚ್ಚು ಕಡೆಗಳಲ್ಲಿ ಕೆ.ಎಚ್. ರವಿ ಆಸ್ತಿ ಖರೀದಿ ಮಾಡಿದ್ದಾರೆ. ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ಮುಂದುವರೆದಿದ್ದು, ಇಂದು ಸಂಜೆವರೆಗೂ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಭ್ರಷ್ಟ ಅಧಿಕಾರಿಗಳಿಗೆ
ಪಂಚಾಯ್ತ್ ರಾಜ್ ಎಇ ಪುಟ್ಟರಾಜು ಮನೆ ಮೇಲೆ ದಾಳಿ
ಇನ್ನೊಂದೆಡೆ ತುಮಕೂರಿನ ಶಿರಾದ ಪಂಚಾಯರ್ ರಾಜ್ ಎಇ ಪುಟ್ಟರಾಜು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಶಿರಾ ತಾಲೂಕಿನ ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿದ್ದು ಅವರ ತುಮಕೂರು ನಗರದ ಅಶೋಕ ನಗರದ 9ನೇ ಕ್ರಾಸ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಯಲ್ಲಾಪುರದಲ್ಲಿರುವ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾಗದಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.ಇವರು ಇತ್ತೀಚಿಗಷ್ಟೇ ಭದ್ರಾವತಿಯಿಂದ ತುಮಕೂರು ಜಿಲ್ಲೆಗೆವರ್ಗಾವಣೆಗೊಂಡಿದ್ದರು.