ವಿಜಯಪುರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರುಣ್ ನಾಯಕ್ ಮೃತಪಟ್ಟಿದ್ದಾರೆ.
ವಿಜಯಪುರ(ಜು.19): ಕರ್ತವ್ಯ ನಿರತ ಲೋಕಾಯುಕ್ತ ಡಿವೈಎಸ್ಪಿ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ವಿಜಯಪುರ ಇಂದು(ಬುಧವಾರ) ನಡೆದಿದೆ. ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಅವರು ನಿಧನರಾಗಿದ್ದಾರೆ.
ವಿಜಯಪುರ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರುಣ್ ನಾಯಕ್ ಮೃತಪಟ್ಟಿದ್ದಾರೆ.
ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅಜ್ಜಿ ನಿಧನ
ಅರುಣ್ ನಾಯಕ್ ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅರುಣ್ ನಾಯಕ್ ಅವರ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದಾರೆ. ಅರುಣ್ ನಾಯಕ್ ಅವರ ಪತ್ನಿ ಮಗನೊಂದಿಗೆ ಬೆಂಗಳೂರಿನಲ್ಲೇ ವಾಸವಾಗಿದ್ದಾರೆ.
ಖಾಸಗಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳ ಭೇಟಿ ನೀಡಿದ್ದಾರೆ. ಅರುಣ್ ನಾಯಕ್ ಅವರ ಪತ್ನಿ, ಪುತ್ರ ವಿಜಯಪುರದತ್ತ ಆಗಮಿಸುತ್ತಿದ್ದಾರೆ.