ತಲಘಟ್ಟಪುರ, ಸುಬ್ರಹ್ಮಣ್ಯ ಪುರ ಕೆರೆ ಒತ್ತುವರಿಗೆ ಲೋಕಾಯುಕ್ತ ಗರಂ : ಅಧಿಕಾರಿಗಳಿಗೆ ಎಚ್ಚರಿಕೆ

By Kannadaprabha NewsFirst Published Dec 14, 2019, 2:55 PM IST
Highlights

ಸುಬ್ರಹ್ಮಣ್ಯಪುರ ಕೆರೆ ಪ್ರದೇಶದಲ್ಲಿ ಕೊಳಗೇರಿ ನಿವಾಸಿಗಳು ನೆಲೆಸಿದ್ದು, ಅವರನ್ನು ಕರ್ನಾಟಕ ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಗೆ ಸ್ಥಳಾಂತರ ಮಾಡದೆ ಮಂಡಳಿಯ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದಕ್ಕೆ ಲೋಕಾಯುಕ್ತರು ತೀವ್ರ ಅಕ್ಷೇಪ ವ್ಯಕ್ತಪಡಿಸಿದರು. 

ಬೆಂಗಳೂರು [ಡಿ.14]:  ಕೆರೆಗಳ ಒತ್ತುವರಿ, ಕೆರೆ ಪ್ರದೇಶದಲ್ಲಿ ನೆಲೆಸಿರುವ ಕೊಳಗೇರಿ ನಿವಾಸಿಗಳ ಸ್ಥಳಾಂತರ ಮಾಡದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ್‌ ಶೆಟ್ಟಿಗರಂ ಆಗಿದ್ದು, ಶೀಘ್ರದಲ್ಲಿಯೇ ಸೂಕ್ತವಾದ ಕ್ರಮ ಕೈಗೊಳ್ಳದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಸುಬ್ರಹ್ಮಣ್ಯಪುರ ಕೆರೆ ಮತ್ತು ತಲಘಟ್ಟಪುರ ಕೆರೆ ಒತ್ತುವರಿ ಸಂಬಂಧ ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಲೋಕಾಯುಕ್ತರು ನಡೆಸಿದರು.

ಸುಬ್ರಹ್ಮಣ್ಯಪುರ ಕೆರೆ ಪ್ರದೇಶದಲ್ಲಿ ಕೊಳಗೇರಿ ನಿವಾಸಿಗಳು ನೆಲೆಸಿದ್ದು, ಅವರನ್ನು ಕರ್ನಾಟಕ ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಗೆ ಸ್ಥಳಾಂತರ ಮಾಡದೆ ಮಂಡಳಿಯ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದಕ್ಕೆ ತೀವ್ರ ಅಕ್ಷೇಪ ವ್ಯಕ್ತಪಡಿಸಿದರು. ಮುಂದಿನ ಒಂದು ವಾರದಲ್ಲಿ ಕೊಳಗೇರಿ ನಿವಾಸಿಗಳನ್ನು ಅಪಾರ್ಟ್‌ಮೆಂಟ್‌ಗೆ ಸ್ಥಳಾಂತರ ಮಾಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮಂಡಳಿಯ ವಿರುದ್ಧ ವಿಚಾರಣೆ ನಡೆಸುವ ಕ್ರಮ ಕೈಗೊಳ್ಳುವುದಾಗಿ ಲೋಕಾಯುಕ್ತರು ಎಚ್ಚರಿಕೆ ನೀಡಿದರು. ಈ ಸಂಬಂಧ ಮುಂದಿನ ವಿಚಾರಣೆಯನ್ನು ಡಿ.19ಕ್ಕೆ ಮುಂದೂಡಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಳೆದ ಎರಡು ವರ್ಷಗಳಿಂದಲೂ ಕೊಳಗೇರಿ ನಿವಾಸಿಗಳನ್ನು ಸ್ಥಳಾಂತರ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಕೊಳಗೇರಿ ನಿವಾಸಿಗಳನ್ನು ಸ್ಥಳಾಂತರ ಮಾಡಿ ಒತ್ತುವರಿಯಾಗಿರುವ ಪ್ರದೇಶವನ್ನು ತೆರವುಗೊಳಿಸಬೇಕು ಎಂದು ಲೋಕಾಯುಕ್ತರು ಹಲವು ಬಾರಿ ಆದೇಶ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಕುಪಿತಗೊಂಡ ಲೋಕಾಯುಕ್ತರು ಒಂದು ವಾರದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.

ಬೆಂಗಳೂರು ಕೆರೆ ಶುದ್ಧೀಕರಣ: ಅಧಿಕಾರಿಗಳ ಬೆಂಡೆತ್ತಿದ NGT...

ಸುಬ್ರಹ್ಮಣ್ಯಪುರ ಕೆರೆ ಒತ್ತುವರಿ ಸಂಬಂಧ ಅಧಿಕಾರಿಗಳು ಸಮೀಕ್ಷೆ ನಡೆಸದೆ ವರದಿ ನೀಡಿರುವ ಬಗ್ಗೆ ನಮ್ಮ ಬೆಂಗಳೂರು ಪ್ರತಿಷ್ಠಾನವು ಲೋಕಾಯುಕ್ತರ ಗಮನಕ್ಕೆ ತಂದಿತು. ಅಲ್ಲದೇ, ಮಾಜಿ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ವರದಿಯನ್ನು ಸಲ್ಲಿಸಿರುವ ಕುರಿತು ಮಾಹಿತಿ ನೀಡಿತು. ಅಧಿಕಾರಿಗಳ ನಡೆಯ ಬಗ್ಗೆ ಲೋಕಾಯುಕ್ತರು ತೀವ್ರ ಬೇಸರ ವ್ಯಕ್ತಪಡಿಸಿದರು. ಅಧಿಕಾರಿಗಳ ನಡೆಯ ಬಗ್ಗೆ ನಾಲ್ಕು ವಾರದಲ್ಲಿ ಆಕ್ಷೇಪ ವ್ಯಕ್ತಪಡಿಸುವಂತೆ ನಮ್ಮ ಬೆಂಗಳೂರು ಪ್ರತಿಷ್ಠಾನಕ್ಕೆ ಸೂಚನೆ ನೀಡಿದರು. ಕೆರೆ ಒತ್ತುವರಿ ಮಾಡಲು ಜಿಲ್ಲಾಧಿಕಾರಿಗಳ ಅನುಮತಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದಾಗ ಲೋಕಾಯುಕ್ತ ಗರಂ ಆಗಿ, ಕೆರೆ ಒತ್ತುವರಿಯನ್ನು ತೆರವುಗೊಳಿಸುವಂತೆ ತಾವು ಆದೇಶ ಮಾಡುತ್ತಿರುವುದಾಗಿ ಖಡಕ್‌ ಆಗಿ ಹೇಳಿದರು. ಮುಂದಿನ ವಿಚಾರಣೆಯನ್ನು ಬರುವ ಫೆ.15ಕ್ಕೆ ಮುಂದೂಡಿದರು.

ಸುಬ್ರಹ್ಮಣ್ಯಪುರ ಕೆರೆ ಮತ್ತು ತಲಘಟ್ಟಪುರ ಕೆರೆ ಒತ್ತುವರಿ ಸಂಬಂಧ ಲೋಕಾಯುಕ್ತರು ವಿಚಾರಣೆ ನಡೆಸಿದ ಬಳಿಕ ನಮ್ಮ ಬೆಂಗಳೂರು ಪ್ರತಿಷ್ಠಾನದ ರಿಸಚ್‌ರ್‍ ಅಸೋಸಿಯೇಟ್‌ ಲಕ್ಷ್ಮೇಕಾಂತ್‌ ಅವರು ಬಿಬಿಎಂಪಿ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸುತ್ತಿರುವುದು.

click me!