ವಿಜಯಪುರ ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ನಿವಾಸಗಳ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ.
ವಿಜಯಪುರ (ಜೂನ್ 28): ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ನಿವಾಸಗಳ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, ಅಧಿಕಾರಿಗಳು ಅಕ್ರಮ ಆಸ್ತಿಪಾಸ್ತಿ ಕುರಿತು ತನಿಖೆ ಕೈಗೊಂಡಿದ್ದಾರೆ. ಬಸವನ ಬಾಗೇವಾಡಿ ಲೋಕೋಪಯೋಗಿ ಇಲಾಖೆ ಪ್ರಭಾರಿ ಎಇಇ ಭೀಮನಗೌಡ ಬಿರಾದಾರ ನಿವಾಸದ ಮೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯಪುರ ನಗರದ ಆರ್. ಟಿ. ಓ ಕಚೇರಿ ಹಿಂಬದಿಯಲ್ಲಿರುವ ಇವರ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ ಜೆಇ ಆಗಿರುವ ಭೀಮನಗೌಡ ಬಿರಾದಾರ ಇದೇ ಇಲಾಖೆಯ ಪ್ರಭಾರಿ ಎಇಇ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕೋಲಾರ ಮರ್ಯಾದಾ ಹತ್ಯೆ: ದಲಿತನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಉಸಿರುಗಟ್ಟಿಸಿ ಕೊಂದ
ಸಂಬಂಧಿ ಅಂಗಡಿಯ ಮೇಲೂ ರೇಡ್
ಅಷ್ಟೇ ಅಲ್ಲ, ಇವರ ಸಂಬಂಧಿ ಶ್ರೀಕಾಂತ ಅಂಗಡಿ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದ್ದು, ತನಿಖೆ ಮುಂದುವರೆದಿದೆ. ಬೆಳ್ಳಂಬೆಳಿಗ್ಗೆ ನಡೆದಿರುವ ದಾಳಿ ಈಗಲೂ ಮುಂದುವರೆದಿದೆ. ಮಹತ್ವದ ದಾಖಲೆ ಪರಿಶೀಲನೆ ನಡೆಯುತ್ತಿದೆ.
ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಭ್ರಷ್ಟ ಅಧಿಕಾರಿಗಳಿಗೆ ಶಾಕ್..!
ನೀರು ಸರಬರಾಜು ಎಇಇ ಮನೆ ಮೇಲು ದಾಳಿ:
ಮತ್ತೊಂದು ಪ್ರಕರಣದಲ್ಲಿ ಮುದ್ದೇಬಿಹಾಳ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಜೆ. ಪಿ. ಶೆಟ್ಟಿ ಅವರ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೆ. ಪಿ. ಶೆಟ್ಟಿ ಅವರಿಗೆ ಸೇರಿದ ಮುದ್ದೇಬಿಹಾಳ ಪಟ್ಟಣದಲ್ಲಿರುವ ಮನೆ ಹಾಗೂ ತಾಳಿಕೋಟೆ ತಾಲೂಕಿನ ಸಾಸನೂರ ಗ್ರಾಮದಲ್ಲಿರುವ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಆಸ್ತಿಪಾಸ್ತಿ ಕುರಿತು ತನಿಖೆ ಕೈಗೊಂಡಿದ್ದಾರೆ. ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದನ್ನವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಒಟ್ಟು ನಾಲ್ಕು ಕಡೆಗಳಲ್ಲಿ ನಡೆದಿರುವ ಈ ದಾಳಿಯಲ್ಲಿ ಮೂರು ಜನ ಡಿವೈಎಸ್ಪಿ, ಏಳು ಜನ ಇನ್ಸಪೆಕ್ಟರ್ ಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದಾರೆ.