ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಲೋಕೇಶ್ ಸ್ಪರ್ಧೆ

By Kannadaprabha News  |  First Published Jan 13, 2024, 10:50 AM IST

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸ್ಪರ್ಧೆಗೆ ಮುಂದಾಗಿರುವುದಾಗಿ ರೂಪ್ಸ್ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದರು. ಗುರುವಾರ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪ್ರಚಾರವನ್ನು ನಡೆಸಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.


ಪಾವಗಡ: ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸ್ಪರ್ಧೆಗೆ ಮುಂದಾಗಿರುವುದಾಗಿ ರೂಪ್ಸ್ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದರು. ಗುರುವಾರ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಪ್ರಚಾರವನ್ನು ನಡೆಸಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಈ ಭಾಗದ ಆಗ್ನೇಯರ ಕ್ಷೇತ್ರಕ್ಕೆ ಸ್ವರ್ಧಿಸುವ ಮಹತ್ವಾಕಾಂಕ್ಷೆ ಹೊಂದಿದ್ದು,ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳು ಅಗತ್ಯವಿದೆ. ಈ ಸಂಬಂಧ ನಮ್ಮ ರೂಪ್ಸ ಸದಸ್ಯರೆಲ್ಲರೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸುವಂತೆ ಪ್ರೋತ್ಸಾಹ ನೀಡುತ್ತಿದ್ದಾರೆ.

Tap to resize

Latest Videos

ರಾಜಕಾರಣಿಗಳು ಆಯ್ಕೆಯಾದರೆ ಶಿಕ್ಷಣ ಶಾಸ್ತ್ರದ ಅರಿವಿರುವುದಿಲ್ಲ, ಶಿಕ್ಷಣವನ್ನ ಕೆಟ್ಟ ದೃಷ್ಠಿಯಲ್ಲಿ ನೋಡುವ ಪರಿಸ್ಥಿತಿಗೆ ರಾಜಕಾರಣಿಗಳು ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಣವನ್ನು ಬೆಳೆಸುವುದಕ್ಕೆ ಶಿಕ್ಷಕರಿಗೆ ಗೌರವ ತರುವುದಕ್ಕೆ, ಶಿಕ್ಷಣ ಸಂಸ್ಥೆಗಳ ಉಳಿಯುವಿಗಾಗಿ ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾನು ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದೇನೆ. ತಮ್ಮೆಲ್ಲ ಪದವಿಧರರ ಸಹಕಾರ ನೀಡಿ ಚುನಾವಣೆಯಲ್ಲಿ ಮತ ನೀಡಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.

click me!