ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಜೀವ ಬಿಟ್ಟ ಪ್ರೇಮಿಗಳು

Published : Nov 30, 2018, 10:27 PM IST
ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಜೀವ ಬಿಟ್ಟ ಪ್ರೇಮಿಗಳು

ಸಾರಾಂಶ

ಪ್ರೇಮಿಗಳು ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಒಟ್ಟಿಗೆ ಜೀವ ಬಿಟ್ಟಿದ್ದಾರೆ.  

ಬೆಳಗಾವಿ, [ನ.30]: ಒಂದೇ ಹಗ್ಗಕ್ಕೆ ನೇಣು ಬಿಗಿದುಕೊ0ಡು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.

ಈರಣ್ಣ ಸಾಲಿಮನಿ ಹಾಗೂ ಶ್ವೇತಾ ಕುಂಬಾರ ಆತ್ಮಹತ್ಯೆ ಶರಣಾದ ಪ್ರೇಮಿಗಳು. ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. 

ವಿಷಯ ತಿಳಿಯುತ್ತಿದ್ದಂತೆ ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಕುರಿತು ನನಗೆ ಏನೂ ಗೊತ್ತಿಲ್ಲ. ನಮಗೆ ಹುಡುಗಿಯ ಹೆಸರು ಸಹ ಗೊತ್ತಿಲ್ಲ. ಅಲ್ಲದೇ ಇಬ್ಬರೂ ಒಂದೇ ಪಂಗಡದವರಾಗಿದ್ದೆವು. ಒಂದು ವೇಳೆ ಪ್ರೀತಿಸುತ್ತಿದ್ದ ವಿಚಾರವನ್ನು ತಿಳಿಸಿದ್ದರೆ ನಾವೇ ಮುಂದೆ ನಿಂತು ಮದುವೆ ಮಾಡಿಕೊಡುತ್ತಿದ್ದವೆಂದು ಈರಣ್ಣ ಸಾಲಿಮನಿ ತಾಯಿಯ ಕಣ್ಣೀರಿಟ್ಟರು.

PREV
click me!

Recommended Stories

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
ಪದೇಪದೆ 'ನಮ್ಮಪ್ಪನೇ ಸಿಎಂ..' ಯತೀಂದ್ರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?