ಕಾರಿನಲ್ಲಿ ಬೆಂಕಿಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

Kannadaprabha News   | Asianet News
Published : Aug 14, 2021, 08:16 AM IST
ಕಾರಿನಲ್ಲಿ ಬೆಂಕಿಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ

ಸಾರಾಂಶ

ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಯಳಂದೂರು ತಾಲೂಕಿನ ಮಾಂಬಳ್ಳಿ ಸಮೀಪದ ಕಿನಕಹಳ್ಳಿಯಲ್ಲಿ ಘಟನೆ

ಚಾಮರಾಜನಗರ (ಆ.14): ಕಾರೊಳಗೆ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ತಾಲೂಕಿನ ಮಾಂಬಳ್ಳಿ ಸಮೀಪದ ಕಿನಕಹಳ್ಳಿ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. 

ಮಾಂಬಳ್ಳಿ ಗ್ರಾಮದ ಪ್ರೇಮಿಗಳಾದ ಕಾಂಚನಾ(20) ಶ್ರೀನಿವಾಸ್‌ (23) ಮೃತ ದುರ್ದೈವಿಗಳು. ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್‌ ಆಗಿದ್ದು, ಶ್ರೀನಿವಾಸ್‌ ಚಾಲಕ ವೃತ್ತಿ ಮಾಡುತ್ತಿದ್ದ. ಮೃತರಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. 

ಬೆಳಗಾವಿ: ಸಹೋದರರ ಜೊತೆಗೂಡಿ ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿ..!

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಚಾಮರಾಜನಗರ ಎಸ್ಪಿ ದಿವ್ಯಾ ಸಾರಾ ಥಾಮಸ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮಾಂಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ