ಹೂವಿನಹಡಗಲಿ: ಜೊತೆಯಾಗೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

By Kannadaprabha News  |  First Published Feb 28, 2020, 9:43 AM IST

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು| ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಗುಂದಿ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಹೂವಿನಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲು| 


ಹೂವಿನಹಡಗಲಿ(ಫೆ.28): ತಾಲೂಕಿನ ಹೊಳಗುಂದಿ ಗ್ರಾಮದ ಹೊರವಲಯದಲ್ಲಿ ಗುರುವಾರ ಬೆಳಗಿನ ಜಾವ ಪ್ರೇಮಿಗಳಿಬ್ಬರು ಮರಕ್ಕೆ ನೇಣು ಹಾಕಿಕೊಂಡು ಜತೆಯಾಗೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲುಗೋಡು ಗ್ರಾಮದ ಗುರುರಾಜ್‌ (30) ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದ ಗಂಗಮ್ಮ (16) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. 

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೆಲವು ತಿಂಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅವರು ವಿವಾಹವಾಗಲು ಗಂಗಮ್ಮ ಅವರ ವಯಸ್ಸು ಕಡಿಮೆ ಇದೆ. 18 ವರ್ಷ ತುಂಬಿದ ಕೂಡಲೇ ಮದುವೆ ಮಾಡುವುದಾಗಿ ಎರಡೂ ಕುಟುಂಬಗಳ ಹಿರಿಯರು ಹೇಳಿದ್ದಾರೆ ಎನ್ನಲಾಗುತ್ತಿದೆ.  ಇದರಿಂದ ಪ್ರೇಮಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಎಸ್‌.ಪಿ. ನಾಯ್ಕ ಭೇಟಿ ನೀಡಿದ್ದರು.

click me!