ಮಾದಿಗ (ಎಡ) ಸಮಾಜದ ಅಭ್ಯರ್ಥಿಗೆ ಕಾಂಗ್ರೆಸ್‌ನಿಂದ ಟಿಕೆಟ್ ಕೊಟ್ಟು ಸಮಾಜದ ಪ್ರಗತಿಗೆ ಸಹಕರಿಸುವಂತೆ ತಾಲೂಕು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ಕೋರ್ಚ್ ನರಸಪ್ಪ ಎಐಸಿಸಿ ಮತ್ತು ಕೆಪಿಸಿಸಿಗೆ ಮನವಿ ಮಾಡಿದರು.
ಪಾವಗಡ (ನ.07): ತುಮಕೂರು ಜಿಲ್ಲೆಯಲ್ಲಿ 4-5 ಲಕ್ಷ ಮಾದಿಗ ಜನಸಂಖ್ಯೆಯಿದ್ದು 2023ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಹಾಗೂ ಪಾವಗಡ ತಾಲೂಕು ಈ ಎರಡು ಎಸ್‌ಸಿ ಮೀಸಲು ವಿಧಾನ ಸಭಾ ಕ್ಷೇತ್ರಗಳ ಪೈಕಿ, ಕ್ಷೇತ್ರಕ್ಕೆ ಮಾದಿಗ (ಎಡ) ಸಮಾಜದ ಅಭ್ಯರ್ಥಿಗೆ ಕಾಂಗ್ರೆಸ್‌ನಿಂದ ಟಿಕೆಟ್ ಕೊಟ್ಟು ಸಮಾಜದ ಪ್ರಗತಿಗೆ ಸಹಕರಿಸುವಂತೆ ತಾಲೂಕು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ಕೋರ್ಚ್ ನರಸಪ್ಪ ಎಐಸಿಸಿ ಮತ್ತು ಕೆಪಿಸಿಸಿಗೆ ಮನವಿ ಮಾಡಿದರು.
ಶನಿವಾರ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ವಕೀಲರಾದ ಸಿಂಗರೆಡ್ಡಿಹಳ್ಳಿ ನರಸಿಂಹಪ್ಪ ಮತ್ತು ಕೆಪಿಪಿಸಿ ಸದಸ್ಯೆ ಎತ್ತಿನಹಳ್ಳಿ ರಾಧಮ್ಮ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಬಹು ಸಂಖ್ಯಾತ ಮಾದಿಗರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಕೆ.ತಿಪ್ಪೇಸ್ವಾಮಿ, ರಾಜ್ಯ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಕೆ.ಟಿ.ಹಳ್ಳಿ ದಲಿತ್‌ಕುಮಾರ್, ಯುವ ಮುಖಂಡ ಓಬಳಾಪುರ ಟಿ.ತಿಪ್ಪೇಸ್ವಾಮಿ ವಿಧಾನ ಸಭಾ ಚುನಾವಣೆಯಲ್ಲಿ ಮಾದಿಗ ಸಮಾಜಕ್ಕೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡುವಂತೆ ರಾಜ್ಯ ಕಾಂಗ್ರೆಸ್ ಸಮಿತಿಗೆ ಮನವಿ ಮಾಡಿದರು.
ಇದೇ ವೇಳೆ ತಾಲೂಕಿನ ಹಿರಿಯ ದಲಿತ ಮುಖಂಡರಾದ ಕನ್ನಮೇಡಿ ಎಸ್.ಹನುಮಂತರಾಯಪ್ಪ, ನೆಲಿಗಾನಹಳ್ಳಿ ದುಗ್ಯಪ್ಪ, ಕಣಿವೇನಹಳ್ಳಿ ಕೆ.ನರಸಪ್ಪ, ಜಿಲ್ಲಾ ಮಾದಿಗ ದಂಡೋರ ಉಪಾಧ್ಯಕ್ಷ ನಾಗೇಶ್, ಮುಖಂಡರಾದ ಶ್ರೀನಿವಾಸ್ ಉಗ್ರನರಸಿಂಹಪ್ಪ, ವಕೀಲ ಲಿಂಗದಹಳ್ಳಿ ನಾಗರಾಜ್, ಕತಿಕ್ಯಾತನಹಳ್ಳಿ ನಾರಾಯಣಪ್ಪ, ಎತ್ತಿನಹಳ್ಳಿ ಹರೀಶ್ ಹಾಗೂ ಮಹಿಳಾ ಘಟಕದ ವರಲಕ್ಷ್ಮೀ. ಪ್ರೊ.ಕೃಷ್ಣಪ್ಪ ಸ್ಥಾಪಿತ ತಾಲೂಕು ಡಿಎಸ್‌ಎಸ್ ಘಟಕದ ರವಿ, ರಾಮಾಂಜಿನಪ್ಪ, ಮಾರುತಿ, ರಾಪ್ಟೆನಾಗರಾಜ್, ಬಂಗಾರಿ, ರಾಜು ಉಪಸ್ಥಿತರಿದ್ದರು.
ರಾಜಕೀಯ ಪ್ರಾಶಸ್ತ್ಯ ಪಡೆಯುವಲ್ಲಿ ವಂಚಿತ
ಗಡಿ ಪ್ರದೇಶವಾದ ಪಾವಗಡ ಹಾಗೂ ಕೊರಟಗೆರೆ ತಾಲೂಕುಗಳಲ್ಲಿ ಸರಿ ಸುಮಾರು ತಲಾ 50 ಸಾವಿರಕ್ಕಿಂತ ಹೆಚ್ಚು ಮಾದಿಗ ಸಮಾಜದ ಮತದಾರರಿದ್ದು, ಸ್ಥಳೀಯ ಸಂಸ್ಥೆ ಹಾಗೂ ವಿಧಾನಸಭಾ ಚುನಾವವಣೆಗಳಲ್ಲಿ ರಾಜಕೀಯ ಪ್ರಾಶಸ್ತ್ಯ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಜಿಪಂ, ತಾಪಂ ಚುನಾವಣೆಗಳಲ್ಲಿಯೂ ಸಹ ಪರಿಗಣಿಸದೇ ಸಮಾಜವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ರಾಜಕೀಯ ಸ್ಥಾನಮಾನ ಸೇರಿದಂತೆ ಸಾಮಾಜಿಕ ಮತ್ತು ಆರ್ಥಿಕವಾಗಿ ಸಮಾಜ ಹಿಂದುಳಿದಿದ್ದು ಬಹುಸಂಖ್ಯಾತರಿರುವ ಮಾದಿಗ ಸಮಾಜವನ್ನು ಗಂಭೀರವಾಗಿ ಪರಿಗಣಿಸಬೇಕಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪರ ಮತದಾರರಿದ್ದಾರೆ. ಈ ಸಮಾಜಕ್ಕೆ ಸೂಕ್ತ ಪ್ರಾಶಸ್ತ್ಯ ನೀಡಬೇಕಿದ್ದು, ಕಾಂಗ್ರೆಸ್‌ನಿಂದ ಟಿಕೆಟ್ ಕಲ್ಪಿಸಿದರೆ ಗೆಲ್ಲಿಸಿ ಕೊಡುವ ಖಚಿತ ಭರವಸೆ ವ್ಯಕ್ತಪಡಿಸಿದರು. ಈ ಬಗ್ಗೆ ಶೀಘ್ರ ನಿಯೋಗ ತೆರಳಿ ಕಾಂಗ್ರೆಸ್ ರಾಹುಲ್‌ಗಾಂಧಿ, ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಇತರೆ ಮುಖಂಡರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ನರಸಪ್ಪ ಹೇಳಿದರು.
ಭಿನ್ನಮತ ಬದಿಗಿಟ್ಟು ಗೆಲುವಿಗೆ ಶ್ರಮಿಸಿ
ಬೆಂಗಳೂರು (ನ.07): ಮುಂದಿನ ಸಾರ್ವತ್ರಿಕ ಚುನಾವಣೆಯು ಕಾಂಗ್ರೆಸ್ ಗೆಲುವಿಗೆ ಪೂರಕವಾಗಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಭಿನ್ನಮತಗಳನ್ನು ಬದಿಗಿಟ್ಟು ಪಕ್ಷದ ಅಭ್ಯರ್ಥಿ ಗೆಲುವಿಗೆ ಒಟ್ಟಾಗಿ ಶ್ರಮಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಲಹೆ ನೀಡಿದ್ದಾರೆ. ಯಲಹಂಕದ ಖಾಸಗಿ ಹೋಟೆಲ್‌ನಲ್ಲಿ ಮುಂದುವರೆದ ಜಿಲ್ಲಾ ನಾಯಕರೊಂದಿಗಿನ ಸರಣಿ ಸಭೆಯ ಭಾಗವಾಗಿ ಶನಿವಾರ ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಹಾಸನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ವಿಧಾನಸಭಾ ಚುನಾವಣಾ ಟಿಕೆಟ್ ಆಕಾಂಕ್ಷಿಗಳು, ಪ್ರಮುಖ ನಾಯಕರ ಸಭೆ ನಡೆಸಿ ಅವರು ಮಾತನಾಡಿದರು.
ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ, ಜನ ಬೆಂಬಲವಿರುವವರಿಗೆ ಟಿಕೆಟ್ ನೀಡಲಾಗುವುದು. ಯಾರಿಗೇ ಟಿಕೆಟ್ ನೀಡಿದರೂ ಇನ್ನುಳಿದ ಆಕಾಂಕ್ಷಿಗಳು ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ಅಧಿಕೃತ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ಅಭ್ಯರ್ಥಿ ಆಯ್ಕೆ ಕುರಿತು ಕೆಪಿಸಿಸಿ ಹಾಗೂ ಎಐಸಿಸಿ ತನ್ನ ತಳಮಟ್ಟದ ಸಮೀಕ್ಷಾ ಕೆಲಸ ಮಾಡಲಿದೆ. ಆದರೆ, ಸ್ಥಳೀಯವಾಗಿ ಪ್ರಭಾವ ಬೀರುವ ಹಲವು ಅಂಶಗಳು ನಿಮಗೆ ತಿಳಿದಿರುತ್ತವೆ. ಹೀಗಾಗಿ ಯಾವ್ಯಾವ ಜಿಲ್ಲೆಯಲ್ಲಿ ಯಾವ್ಯಾವ ಜಾತಿಯ ಮತದಾರರು ಎಷ್ಟಿದ್ದಾರೆ, ಯಾವ ಜಾತಿಯವರನ್ನು ಚುನಾವಣಾ ಅಖಾಡಕ್ಕೆ ಇಳಿಸಿದರೆ ಅನುಕೂಲವಾಗುತ್ತದೆ ಎಂಬ ನೀಲನಕ್ಷೆಯನ್ನೂ ನೀವೇ ನೀಡಿ.
Belagavi: ಜೆಡಿಎಸ್‌ಗೆ 123 ಸ್ಥಾನ ಗೆಲ್ಲುವ ಗುರಿ: ಸಿ.ಎಂ.ಇಬ್ರಾಹಿಂ
ಟಿಕೆಟ್ ನೀಡುವ ಸಮಯದಲ್ಲಿ ಇದನ್ನೂ ಪರಿಗಣಿಸಲಾಗುವುದು ಎಂದು ಭರವಸೆ ನೀಡಿರುವುದಾಗಿ ತಿಳಿದುಬಂದಿದೆ. ಇನ್ನು ಚುನಾವಣೆ ದೃಷ್ಟಿಯಿಂದ ಕೆಪಿಸಿಸಿಯಿಂದ ಆಯೋಜಿಸಲಿರುವ ಬಸ್ ಯಾತ್ರೆಯು ನಿಮ್ಮ ಜಿಲ್ಲೆಗಳಿಗೆ ಆಗಮಿಸಿದಾಗ ಹೆಚ್ಚು ಜನರನ್ನು ಸೇರಿಸಿ ಯಶಸ್ವಿಗೊಳಿಸಬೇಕು. ಅದಕ್ಕಾಗಿ ಈಗಿನಿಂದಲೇ ಸಿದ್ಧತೆಗಳನ್ನು ಕೈಗೊಳ್ಳಬೇಕು, ಸಭೆ ನಡೆಸಬೇಕು. ಕೃಷ್ಣಾ, ಮಹದಾಯಿ ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬ, ಕಳಪೆ ಕಾಮಗಾರಿ ವಿರೋಧಿಸಿ ನಡೆಸಲಿರುವ ಟ್ರ್ಯಾಕ್ಟರ್ ರಾರಯಲಿ ಯಶಸ್ಸಿಗೆ ಆಯಾ ಜಿಲ್ಲೆಯ ಮುಖಂಡರು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.