ತಾವು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುವುದಾಗಿ ಮುಖಂಡರೋರ್ವರು ದಿನಾಂಕ ಘೋಷಣೆ ಮಾಡಿದ್ದಾರೆ. ಅಭಿವೃದ್ಧಿಗಾಗಿ ತಾವು ಈ ನಿರ್ಧಾರ ಮಾಡಿದ್ದಾಗಿ ಹೇಳಿದ್ದಾರೆ.
ಮಾಗಡಿ (ಡಿ.09): ಪಟ್ಟಣದ ಕೆಂಪೇಗೌಡ ಬಯಲು ರಂಗಮಂದಿರದಲ್ಲಿ ಡಿ. 10ರಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿರುವುದಾಗಿ ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಅಧಿಕಾರ ಬೇಕು ಎಂದು ಬೇಡಿಕೆ ಇಟ್ಟಿಲ್ಲ. ಅಧಿಕಾರ ದಾಹವನ್ನು ಮರೆತು ನಿಷ್ಠೆ, ಪ್ರಾಮಾಣಿಕತೆಯಿಂದ ಪಕ್ಷವನ್ನು ತಾಲೂಕಿನಲ್ಲಿ ಕಟ್ಟುತ್ತೇನೆ. ಸಾಮಾಜ ಸೇವೆ ಮಾಡುವುದೇ ನನ್ನ ಗುರಿಯಾಗಿದೆ ಎಂದರು.
undefined
ರಾಜಕೀಯ ನಿವೃತ್ತಿ ಬಗ್ಗೆ ಸ್ಪಷ್ಟನೆ ಕೊಟ್ಟ ಕರ್ನಾಟಕ ಕಾಂಗ್ರೆಸ್ ನಾಯಕ
ನಾಡಪ್ರಭು ಕೆಂಪೇಗೌಡರ ನಾಡನ್ನು ಕಟ್ಟಬೇಕು ಎಂಬ ಸಂಕಲ್ಪವನ್ನು ಹೊಂದಿದ್ದೇನೆ. ಕೆಂಪೇಗೌಡರ ತವರೂರು ಮಾಗಡಿ ಇನ್ನೂ ಸಹ ಅಭಿವೃದ್ಧಿಯನ್ನು ಕಂಡಿಲ್ಲ, ಇಲ್ಲಿನ ಜನಪ್ರತಿನಿಧಿಗಳು ಸಹ ಮಾಗಡಿಯನ್ನು ಅಭಿವೃದ್ಧಿಪಡಿಸಲು ನಿರ್ಲಕ್ಷ್ಯತನ ತೋರುತ್ತಿರುವುದರಿಂದ ತಾವು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕನಾಗಿ ಮಾಗಡಿ ತಾಲೂಕನ್ನು ಅಭಿವೃದ್ಧಿಪಡಿಸುವ ಆಶಯವನ್ನು ಹೊಂದಿದ್ದೇನೆ ಎಂದು ಕೃಷ್ಣಮೂರ್ತಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಧನಂಜಯ್ಯ, ಕಾರ್ಯದರ್ಶಿ ರಾಘವೇಂದ್ರ, ಶಂಕರ್, ಮಾರಪ್ಪ, ಸೀನಪ್ಪ, ದೊಡ್ಡಿ ಗೋಪಿ, ಆನಂದ್, ಹನುಮಂತು, ಸಿದ್ದಣ್ಣ, ಜಗದೀಶ್, ಪಾಂಡುರಂಗಯ್ಯ ಇದ್ದರು.