ಗದಗ: ಮಹದಾಯಿ ಹೋರಾಟ ತೀವ್ರ ಸೂಚನೆ

By Suvarna NewsFirst Published Jan 2, 2020, 2:27 PM IST
Highlights

ಮಹದಾಯಿ, ಕಳಸಾ ಬಂಡೂರಿ ಯೋಜನೆಯ ಸಮಗ್ರ ಅನುಷ್ಠಾನಕ್ಕಾಗಿ ಒತ್ತಾಯ| ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆ| ಬಸವರಾಜ್ ಹೊರಟ್ಟಿ, ಕೋನರೆಡ್ಡಿ ಹಾಗೂ ರೈತ ಹೋರಾಟಗಾರರ ನೇತೃತ್ವದಲ್ಲಿ ನಡೆದ ಸಭೆ| ಕೇಂದ್ರ ಪರಿಸರ ಇಲಾಖೆಯ ದ್ವಂದ್ವ ನೀತಿ ವಿರೋಧಿಸಿ ರೈತ ಮುಖಂಡರ ಸಭೆ ಆಯೋಜನೆ|

ಗದಗ(ಜ.02): ಮಹದಾಯಿ, ಕಳಸಾ ಬಂಡೂರಿ ಯೋಜನೆಯ ಸಮಗ್ರ ಅನುಷ್ಠಾನಕ್ಕಾಗಿ ಒತ್ತಾಯಿಸಿ ಇಂದು(ಗುರುವಾರ) ನಗರದಲ್ಲಿ ಸಭೆ ನಡೆದಿದೆ. ಈ ಮೂಲಕ ಮಹದಾಯಿ, ಕಳಸಾ ಬಂಡೂರಿ ಹೋರಾಟದ ಕಿಚ್ಚು ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. 

ನಗರದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ, ಹಾಗೂ ಮಾಜಿ ಶಾಸಕ ಎನ್. ಹೆಚ್. ಕೋನರೆಡ್ಡಿ ಹಾಗೂ ರೈತ ಹೋರಾಟಗಾರರ ನೇತೃತ್ವದಲ್ಲಿ ಸಭೆ ನಡೆದಿದೆ. ಕೇಂದ್ರ ಪರಿಸರ ಇಲಾಖೆಯ ದ್ವಂದ್ವ ನೀತಿ ವಿರೋಧಿಸಿ ರೈತ ಮುಖಂಡರ ಸಭೆ ಆಯೋಜನೆಯಾಗಿದೆ. 

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಪ್ರಮುಖವಾಗಿ ಕಳಸಾ ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಸಭೆ ಆಯೋಜನೆಯಾಗಿದೆ. ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಮತ್ತೆ ಹೋರಾಟ ನಡೆಸುವ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ಸಭೆಯಲ್ಲಿ ಮುಖ್ಯವಾಗಿ ಮುಂದಿನ ಹೋರಾಟದ ರೂಪು ರೇಷೆಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಭೆಯಲ್ಲಿ ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು. 
 

click me!