ಮತ್ತೆ ಬೆಳಗಾವಿ ಗಡಿ ಕ್ಯಾತೆ ತೆಗೆದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

By Suvarna NewsFirst Published Mar 5, 2020, 9:25 AM IST
Highlights

ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಎಲ್ಲ ಸಂಸದರೊಂದಿಗೆ ಪ್ರಧಾನಿ ಮೋದಿ ಭೇಟಿಯಾಗಲು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿರ್ಧಾರ| ಗಡಿ ವಿವಾದ ವಿಚಾರಣೆ ವೇಳೆ ಕೇಂದ್ರ ಸರ್ಕಾರ ತಟಸ್ಥ ನೀತಿ ಅನುಸರಿಸುವಂತೆ ಪ್ರಧಾನಿಗೆ ಎಲ್ಲ ಸಂಸದರ ನಿಯೋಗದಿಂದ ಒತ್ತಾಯ| 

ಬೆಳಗಾವಿ(ಮಾ.05): ಪದೇ ಪದೇ ಗಡಿ ವಿವಾದ ಕೆಣಕುತ್ತಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಎಲ್ಲ ಸಂಸದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಲು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿರ್ಧರಿಸುವ ಮೂಲಕ ಮತ್ತೊಮ್ಮೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಬುಧವಾರ ಮಹಾರಾಷ್ಟ್ರದ ವಿಧಾನ ಪರಿಷತ್‌ನಲ್ಲಿ ಮಾಹಿತಿ ನೀಡಿರುವ ಸಿಎಂ ಉದ್ಧವ್ ಠಾಕ್ರೆ, ಮಹಾರಾಷ್ಟ್ರ ಎಲ್ಲ ಸಂಸದರೊಂದಿಗೆ ಪ್ರಧಾನಿ ಭೇಟಿಯಾಗಲು ನಿರ್ಧಿರಿಸಿದ್ದೇವೆ. ಶೀಘ್ರವೇ ಮಹಾರಾಷ್ಟ್ರದ ಸರ್ವ ಪಕ್ಷಗಳ ಸಂಸದರ ಜೊತೆ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗಡಿ ವಿವಾದ ವಿಚಾರಣೆ ವೇಳೆ ಕೇಂದ್ರ ಸರ್ಕಾರ ತಟಸ್ಥ ನೀತಿ ಅನುಸರಿಸುವಂತೆ ಪ್ರಧಾನಿಗೆ ಎಲ್ಲ ಸಂಸದರ ನಿಯೋಗ ಒತ್ತಾಯಿಸಲಿದೆ ಎಂದು ತಿಳಿಸಿದ್ದಾರೆ. 

ಸದ್ಯ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ  ಸುಪ್ರೀಂಕೋರ್ಟ್‌ನಲ್ಲಿದೆ. ಹೀಗಾಗಿ ಮಹಾರಾಷ್ಟ್ರ ಪರ ವಾದ ಮಂಡಿಸಲು ಹರೀಶ್ ಸಾಳ್ವೆ, ಕೆ.ಪರಾಸರನ್, ರಾಕೇಶ್ ದ್ವಿವೇದಿ, ರಾಜು ರಾಮಚಂದ್ರನ್, ಅರವಿಂದ ದಾತಾರ್ ಅವರನ್ನೊಳಗೊಂಡ ವಕೀಲರ ತಂಡವನ್ನ ನೇಮಕ ಮಾಡಲಾಗಿದೆ. ಈ ಬಗ್ಗೆ ಮಹಾರಾಷ್ಟ್ರ ವಿಧಾನಪರಿಷತ್‌ನಲ್ಲಿ ಸಿಎಂ ಉದ್ಧವ್ ಠಾಕ್ರೆ ಲಿಖಿತವಾಗಿ ಉತ್ತರ ಕೊಟ್ಟಿದ್ದಾರೆ.
 

click me!